Skip to content
The Believer's Library

Biblica® Open Kannada Contemporary Version 2022

Numbers 8 OKCV

Show OKCV only
Verse × ×
1 Our Father spoke to Moses, saying: ಯೆಹೋವ ದೇವರು ಮೋಶೆಗೆ:
2 "Say to Aaron: When you mount the lamps, the seven must shine before the lampstand." “ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.”
3 Aaron did so, lighting its lamps to shine toward the lampstand's front, as our Father commanded Moses. ಆರೋನನು ಹಾಗೆಯೇ ಮಾಡಿ, ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಅದರ ದೀಪಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
4 The lampstand's work: hammered gold, hammered from base to blossoms—made exactly as our Father showed Moses. ದೀಪಸ್ತಂಭವೂ ಅದರ ಬುಡಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಹೊಡೆದು ಮಾಡಲಾಗಿತ್ತು. ಯೆಹೋವ ದೇವರು ಮೋಶೆಗೆ ತೋರಿಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿದನು.
5 Our Father spoke to Moses, saying: ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
6 "Take the Levites from among the people of Israel and cleanse them. “ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡು ಅವರನ್ನು ಪ್ರತ್ಯೇಕಿಸಿ ಶುದ್ಧಮಾಡು.
7 To cleanse them, do this: sprinkle purification water on them, run a razor over their whole body, wash their clothes, and be clean. ಅವರನ್ನು ಶುದ್ಧಮಾಡುವುದಕ್ಕೆ ಅವರಿಗೆ ಮಾಡಬೇಕಾದದ್ದೇನೆಂದರೆ ಶುದ್ಧೀಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಅವರು ಸರ್ವಾಂಗ ಕ್ಷೌರ ಮಾಡಿಸಿಕೊಳ್ಳಲಿ. ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧ ಮಾಡಿಕೊಳ್ಳಬೇಕು.
8 Let them take a young bull from the herd, its grain offering of fine flour mixed with oil, and you are to take a second young bull from the herd for a sin offering. ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ.
9 Bring the Levites before the tent of meeting, and gather the whole community of Israel's people. ಆಗ ನೀನು ಲೇವಿಯರನ್ನು ದೇವದರ್ಶನದ ಗುಡಾರದ ಮುಂದೆ ಕರೆತಂದು, ಇಸ್ರಾಯೇಲರ ಸಮೂಹವನ್ನೆಲ್ಲಾ ಒಟ್ಟುಗೂಡಿಸಬೇಕು.
10 When you present the Levites before me, Israelites are to lay hands on the Levites, ನೀನು ಲೇವಿಯರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕರೆತಂದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
11 Aaron is to wave the Levites before me, an offering from the Israelites, to do my service. ಲೇವಿಯರು ಇಸ್ರಾಯೇಲರ ಪರವಾಗಿ ಯೆಹೋವ ದೇವರ ಸೇವೆಯನ್ನು ಮಾಡುವುದಕ್ಕೆ ಸಿದ್ಧರಾಗುವಂತೆ ಆರೋನನು ಅವರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.
12 The Levites will lay their hands on the bulls' heads; offer one as a sin offering, one as a burnt offering to me, to atone for the Levites. “ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು.
13 Set the Levites before Aaron and his sons, and present them to me as a wave offering. ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಪುತ್ರರ ಮುಂದೆಯೂ ನಿಲ್ಲಿಸಿ, ಅವರನ್ನು ಯೆಹೋವ ದೇವರಿಗೆ ನೈವೇದ್ಯದಂತೆ ಸಮರ್ಪಿಸಬೇಕು.
14 Separate the Levites from among Israel's people; the Levites are mine. ಹೀಗೆ ನೀನು ಲೇವಿಯರನ್ನು ಇಸ್ರಾಯೇಲರೊಳಗಿಂದ ಪ್ರತ್ಯೇಕಿಸಬೇಕು, ಆಗ ಲೇವಿಯರು ನನ್ನವರಾಗುವರು.
15 Then the Levites will enter to serve the tent of meeting, once you've cleansed and waved them as a wave offering. “ಅದರ ತರುವಾಯ ಲೇವಿಯರು ಸೇವೆ ಮಾಡವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸುವರು. ಆಗ ನೀನು ಅವರನ್ನು ಶುದ್ಧೀಮಾಡಿ, ನೈವೇದ್ಯದಂತೆ ಸಮರ್ಪಿಸಬೇಕು.
16 For they are fully given to me from among Israel's sons, in place of every womb-opener—firstborn of all Israel's sons—I took them for myself. ಏಕೆಂದರೆ ಅವರು ಇಸ್ರಾಯೇಲರಲ್ಲಿ ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಾಯೇಲರ ಜೇಷ್ಠಪುತ್ರರಿಗೆ ಬದಲಾಗಿ ನಾನು ಅವರನ್ನೇ ನನಗೋಸ್ಕರ ತೆಗೆದುಕೊಂಡಿದ್ದೇನೆ.
17 All Israel's firstborn, human or animal, are mine; the day I struck all Egypt's firstborn, I set them apart for myself. ಏಕೆಂದರೆ ಇಸ್ರಾಯೇಲರಲ್ಲಿ ಮನುಷ್ಯರಾದರೂ ಪಶುಗಳಾದರೂ ಜೇಷ್ಠರಾದದ್ದೆಲ್ಲಾ ನನ್ನದೇ. ನಾನು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲರಲ್ಲಿ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತ್ಯೇಕಿಸಿಕೊಂಡೆನು.
18 And I have taken the Levites in place of all the firstborn among the people of Israel. ಇಸ್ರಾಯೇಲರಲ್ಲಿರುವ ಎಲ್ಲಾ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನು ನಾನು ತೆಗೆದುಕೊಂಡೆನು.
19 I have given the Levites to Aaron and his sons, a gift from Israel's people, to serve Israel's people at the tent of meeting, atone for Israel's people, so no plague strikes Israel's people nearing the sanctuary." ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.”
20 Moses, Aaron, and Israel's whole assembly did to the Levites all our Father commanded Moses about the Levites; Israel's people did to them. ಆಗ ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆಯೂ ಆರೋನನೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.
21 The Levites purified themselves from sin, washed their clothes; Aaron offered them as a wave offering before our Father, atoned for them to cleanse them. ಲೇವಿಯರು ತಮ್ಮನ್ನು ಶುದ್ಧಿಮಾಡಿಕೊಂಡು, ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಯೆಹೋವ ದೇವರ ಮುಂದೆ ನೈವೇದ್ಯದಂತೆ ಅರ್ಪಿಸಿದನು. ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
22 After that, the Levites came to serve in the tent of meeting before Aaron and his sons; they did to the Levites as our Father commanded Moses. ತರುವಾಯ ಲೇವಿಯರು ದೇವದರ್ಶನದ ಗುಡಾರದಲ್ಲಿ ಆರೋನನ ಮುಂದೆಯೂ, ಅವನ ಪುತ್ರರ ಮುಂದೆಯೂ ಅವರ ಸೇವೆ ಮಾಡುವುದಕ್ಕೆ ಒಳಗೆ ಪ್ರವೇಶಿಸಿದರು. ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮಾಡಿದನು.
23 Our Father spoke to Moses, saying: ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
24 "This applies to the Levites: from age twenty-five, they are to come to serve in the work at the tent of meeting. “ಲೇವಿಯರಿಗೆ ಸಂಬಂಧಪಟ್ಟದ್ದು ಇದಾಗಿದೆ: ಇಪ್ಪತ್ತೈದು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ದೇವದರ್ಶನದ ಗುಡಾರದ ಸೇವೆಗಾಗಿ ಒಳಗೆ ಸೇರಬೇಕು.
25 From age fifty they must retire from service work and serve no longer. ಆದರೆ ಐವತ್ತು ವರ್ಷದವರಾದ ನಂತರ ಸೇವೆಯನ್ನು ಬಿಟ್ಟು ನಿವೃತ್ತರಾಗಬೇಕು ಮತ್ತು ತದನಂತರ ಕೆಲಸಮಾಡಬಾರದು.
26 They may assist their brothers at the tent of meeting by standing guard, but do no work. This is how you are to assign the Levites' duties." ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]