Skip to content
The Believer's Library

Biblica® Open Kannada Contemporary Version 2022

Numbers 9 OKCV

Show OKCV only
Verse × ×
1 Our Father spoke to Moses in the Sinai wilderness, in the first month of the second year after they left Egypt: ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೀಗೆ ಹೇಳಿದರು:
2 "Let the people of Israel keep the Passover at its appointed time. “ಇಸ್ರಾಯೇಲರು ಪಸ್ಕವನ್ನು ನೇಮಿಸಿದ ಸಮಯದಲ್ಲಿ ಆಚರಿಸಬೇಕು.
3 On this month's fourteenth day, at twilight, observe it at its set time, by all its statutes and all its rules." ಈ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಅದನ್ನು ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರವಾಗಿಯೂ, ಅದರ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಿರಿ.”
4 So Moses told the people of Israel that they should keep the Passover. ಆಗ ಮೋಶೆಯು ಪಸ್ಕವನ್ನು ಆಚರಿಸುವುದಕ್ಕೆ ಇಸ್ರಾಯೇಲರ ಸಂಗಡ ಮಾತನಾಡಿದನು.
5 In the wilderness of Sinai, they kept the Passover on day fourteen of the first month, at twilight, as our Father commanded Moses; so the children of Israel did. ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಸ್ಕವನ್ನು ಆಚರಿಸಿದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ, ಇಸ್ರಾಯೇಲರು ಮಾಡಿದರು.
6 Some men were unclean from touching a corpse and could not observe Passover that day, so they came before Moses and Aaron that day. ಆದರೆ ಕೆಲವು ಜನರು ಮನುಷ್ಯನ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿವಸದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ ಅದಕ್ಕೆ ಅದೇ ದಿನ ಅವರು ಮೋಶೆ ಮತ್ತು ಆರೋನರ ಬಳಿಗೆ ಬಂದು
7 Those men said to him, "We are unclean from a dead body. Why must we be kept from presenting our Father's offering at its appointed time among the Israelites?" ಮೋಶೆಯ ಸಂಗಡ ಮಾತನಾಡಿ, “ನಾವು ಮನುಷ್ಯನ ಶವದ ಸೋಂಕಿನಿಂದ ಅಶುದ್ಧರಾಗಿದ್ದೇವೆ. ಆದ್ದರಿಂದ ನಾವು ಇಸ್ರಾಯೇಲರೊಡನೆ ನೇಮಕವಾದ ಸಮಯದಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಲು ನಮಗೆ ಏಕೆ ಅಡ್ಡಿಯಾಗಬೇಕು,” ಎಂದರು.
8 And Moses said to them, "Wait here until I hear what our Father will command about this." ಮೋಶೆ ಅವರಿಗೆ, “ಸ್ವಲ್ಪ ಕಾಯಿರಿ, ಯೆಹೋವ ದೇವರು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ನಾನು ಕೇಳುತ್ತೇನೆ,” ಎಂದನು.
9 Our Father spoke to Moses, saying, ಯೆಹೋವ ದೇವರು ಮೋಶೆ ಸಂಗಡ ಮಾತನಾಡಿ ಅವನಿಗೆ,
10 "Tell the Israelites: if any of you or your descendants is unclean from a corpse, or off on a distant journey, he may still keep the Passover to our Father. ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು.
11 In month two, on day fourteen, at twilight, they must keep it, eating it with unleavened bread and bitter herbs. ಆದರೆ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಆಚರಿಸಲಿ. ಆ ಕುರಿಯನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡ ಕಹಿಯಾದ ಸೊಪ್ಪುಗಳೊಂದಿಗೆ ಊಟಮಾಡಬೇಕು.
12 They are to leave none of it until morning, break no bone of it, and keep it by every statute of the Passover. ಅವರು ಅದರಿಂದ ಮರುದಿವಸಕ್ಕೆ ಏನನ್ನೂ ಉಳಿಸಬಾರದು. ಅದರಲ್ಲಿ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು, ಪಸ್ಕದ ಸಮಸ್ತ ಕಟ್ಟಳೆಗಳ ಪ್ರಕಾರವಾಗಿ ಅದನ್ನು ಆಚರಿಸಬೇಕು.
13 But if a man is clean and not traveling, yet does not keep the Passover, that person must be cut off from his people, because he failed to bring our Father's offering at its set time; that man will bear his sin. ಆದರೆ ಒಬ್ಬ ಮನುಷ್ಯನೂ ಆಚಾರವಾಗಿ ಶುದ್ಧನಾದವನು, ಪ್ರಯಾಣ ಮಾಡದವನಾಗಿದ್ದು ಪಸ್ಕವನ್ನು ಆಚರಿಸಲು ತಪ್ಪಿದರೆ, ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು. ಅವನು ಯೆಹೋವ ದೇವರ ಅರ್ಪಣೆಯನ್ನು ಅದರ ಸಮಯದಲ್ಲಿ ತರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
14 "If a foreigner living among you wants to keep the Passover to our Father, he must follow the Passover's statute and rule. One statute applies to both foreigner and native of the land." “ಪರದೇಶಿಯಾದವನು ನಿಮ್ಮ ಸಂಗಡ ಇದ್ದು, ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ, ಅದರ ಆಜ್ಞಾವಿಧಿಗಳ ಪ್ರಕಾರವೇ ಆಚರಿಸಲಿ. ಸ್ಥಳೀಯ ಮೂಲದ ಇಸ್ರಾಯೇಲರಿಗೂ ಮತ್ತು ನಿಮ್ಮ ನಡುವೆ ವಾಸಿಸುವ ಪರದೇಶಸ್ತನಿಗೂ ಒಂದೇ ನಿಯಮ ಇರಬೇಕು,” ಎಂದು ಹೇಳಿದರು.
15 When the tabernacle—the tent of the testimony—was set up, the cloud covered it; from evening until morning it looked like fire over the tabernacle. ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರವನ್ನು ಮುಚ್ಚಿತು. ಸಂಜೆಯಿಂದ ಮುಂಜಾನೆಯವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.
16 So it was continually: the cloud covered it by day, and the appearance of fire by night. ಈ ಪ್ರಕಾರ ಯಾವಾಗಲೂ, ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.
17 Whenever the cloud lifted from over the tent, the Israelites set out; wherever it settled, the Israelites camped. ಆ ಮೇಘವು ಗುಡಾರದ ಮೇಲಿನಿಂದ ಹೋದಾಗ, ಇಸ್ರಾಯೇಲರು ಪ್ರಯಾಣ ಮಾಡುತ್ತಿದ್ದರು, ಮೇಘವು ನೆಲಸಿದ ಸ್ಥಳದಲ್ಲಿ ಇಸ್ರಾಯೇಲರು ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಿದ್ದರು.
18 At our Father's command Israel's people set out; at our Father's command they camped. As long as the cloud rested over the tabernacle, they remained camped. ಯೆಹೋವ ದೇವರ ಆಜ್ಞೆಯ ಪ್ರಕಾರ ಇಸ್ರಾಯೇಲರು ಪ್ರಯಾಣಮಾಡಿದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.
19 When the cloud lingered over the tabernacle many days, the Israelites kept our Father's charge and did not set out. ಮೇಘವು ದೇವದರ್ಶನದ ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ, ಇಸ್ರಾಯೇಲರು ಯೆಹೋವ ದೇವರ ಅಪ್ಪಣೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.
20 Sometimes the cloud stayed on the dwelling only a few days: at the command of our Father they camped, at the command of our Father they set out. ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ, ಅವರು ಯೆಹೋವ ದೇವರ ಆಜ್ಞೆಯ ಪ್ರಕಾರ ಇಳಿದುಕೊಳ್ಳುತ್ತಿದ್ದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.
21 Sometimes the cloud stayed from evening to morning; when it lifted in the morning, they set out. Whether by day or night, when the cloud lifted, they set out. ಮೇಘವು ಸಂಜೆಯಿಂದ ಮುಂಜಾನೆಯವರೆಗೆ ಇದ್ದು, ಬೆಳಿಗ್ಗೆ ಮೇಲಕ್ಕೆ ಎದ್ದಾಗ, ಅವರು ಪ್ರಯಾಣ ಮಾಡುತ್ತಿದ್ದರು, ಹಗಲುರಾತ್ರಿ ಇದ್ದು ಮೇಘವು ಮೇಲಕ್ಕೇರಿದಾಗ ಅವರು ಪ್ರಯಾಣ ಮಾಡುತ್ತಿದ್ದರು.
22 Whether two days, a month, or longer, while the cloud remained over the tabernacle, Israel stayed in camp and did not set out; when it lifted, they set out. ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು.
23 At our Father's command they camped; at his command they set out. They kept his charge, at our Father's command through Moses. ಯೆಹೋವ ದೇವರ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಾ, ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಯೆಹೋವ ದೇವರ ಅಪ್ಪಣೆಯನ್ನು ಕೈಗೊಳ್ಳುತ್ತಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]