Skip to content
The Believer's Library

Biblica® Open Kannada Contemporary Version 2022

Obadiah 1 OKCV

Show OKCV only
Verse × ×
1 The vision of Obadiah. This is what the Sovereign Father says about Edom: We have heard a message from our Father, and an envoy sent among the nations—"Rise up! Let us rise against her for battle!" ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!”
2 Look, I will make you small among the nations; you will be utterly despised. “ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹು ತಾತ್ಸಾರಕ್ಕೆ ಗುರಿಯಾಗುವೆ.
3 The pride of your heart has deceived you, you who live in the clefts of the rock, whose home is the heights, who say to yourself, "Who can bring me down to the ground?" ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
4 Though you soar like the eagle, though you set your nest among the stars, from there I will bring you down, declares our Father. ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
5 If thieves came to you, if plunderers came by night—how you have been destroyed!—wouldn't they steal only what they wanted? If grape-pickers came to you, wouldn't they leave some grapes behind? “ನಿನ್ನಲ್ಲಿ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ? ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ?
6 How Esau has been ransacked, his hidden treasures plundered! ಆದರೆ ಏಸಾವಿನ ಆಸ್ತಿಯು ಸಂಪೂರ್ಣ ನಾಶವಾಗಿ ಅದರ ನಿಗೂಢ ನಿಕ್ಷೇಪಗಳು ಸೂರೆಯಾಗಿವೆ.
7 All your allies have driven you to the border; those who were at peace with you have deceived you and overpowered you; those who shared your table have set a trap beneath you—and you don't even see it. ನಿನ್ನ ಸಂಗಡ ಒಡಂಬಟ್ಟ ಮನುಷ್ಯರೆಲ್ಲರು ನಿನ್ನನ್ನು ಮೇರೆಯವರೆಗೂ ತಂದಿದ್ದಾರೆ. ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸಮಾಡಿ ನಿನ್ನ ಮೇಲೆ ಜಯ ಹೊಂದಿದ್ದಾರೆ. ನಿನ್ನ ರೊಟ್ಟಿಯನ್ನು ತಿನ್ನುವವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ. ಆದರೆ ನೀನು ಅದನ್ನು ತಿಳಿದುಕೊಳ್ಳಲಾರೆ.
8 Will I not on that day, declares our Father, destroy the wise men of Edom and wipe out understanding from the mountain of Esau? “ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಆ ದಿವಸದಲ್ಲಿ,’ ಎದೋಮಿನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೇ?
9 Your warriors will be shattered, Teman, so that everyone on the mountain of Esau will be cut down in the slaughter. ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶವಾಗುವ ಹಾಗೆ ತೇಮಾನೇ, ನಿನ್ನ ಪರಾಕ್ರಮಶಾಲಿಗಳು ಗಾಬರಿಪಡುವರು.
10 Because of the violence you did to your brother Jacob, shame will cover you, and you will be cut off forever. ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಹಿಂಸಾಕೃತ್ಯಗಳ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚುವುದು. ನೀನು ಎಂದೆಂದಿಗೂ ನಾಶವಾಗಿ ಹೋಗುವೆ.
11 On the day you stood by and did nothing, on the day strangers carried off his wealth and foreigners entered his gates and cast lots for Jerusalem—you too were like one of them. ನೀನು ಪ್ರತ್ಯೇಕವಾಗಿ ಎದುರು ನಿಂತ ದಿವಸದಲ್ಲಿ ಪರರು ಅವನ ಸೊತ್ತನ್ನು ತೆಗೆದುಕೊಂಡು ಹೋದ ದಿವಸದಲ್ಲಿ ಪರಕೀಯರು ಅವನ ಬಾಗಿಲುಗಳಲ್ಲಿ ಪ್ರವೇಶಿಸಿ, ಯೆರೂಸಲೇಮಿನ ಸೊತ್ತಿಗಾಗಿ ಚೀಟು ಹಾಕಿದಾಗ ನೀನೂ ಅವರಲ್ಲಿ ಒಬ್ಬನ ಹಾಗಿದ್ದೆ.
12 But do not gloat over your brother in the day of his misfortune; do not rejoice over the people of Judah in the day of their ruin; do not boast loudly in the day of distress. ನಿನ್ನ ಸಹೋದರನ ವಿಪತ್ತಿನ ದಿನದಲ್ಲಿ ನೀನು ಅವನನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಯೆಹೂದದ ಜನರು ನಾಶವಾದಾಗ ನೀನು ಸಂತೋಷಪಡಬಾರದಿತ್ತು. ಅವರ ಕಷ್ಟದ ದಿವಸದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
13 Do not enter the gate of my people in the day of their calamity; you of all people, do not gloat over his disaster in the day of his calamity; do not loot his wealth in the day of his calamity. ನನ್ನ ಜನರ ಆಪತ್ತಿನ ದಿವಸದಲ್ಲಿ ಅವರ ದ್ವಾರಗಳ ಮೂಲಕ ಪ್ರವೇಶಿಸಬಾರದಿತ್ತು. ಹೌದು, ನೀನು ಅವರ ಆಪತ್ತಿನ ದಿವಸದಲ್ಲಿ ಅವರನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಅವರ ಆಪತ್ತಿನ ದಿವಸದಲ್ಲಿ ಅವರ ಆಸ್ತಿಯ ಮೇಲೆ ಕೈ ಹಾಕಬಾರದಾಗಿತ್ತು.
14 Do not stand at the crossroads to cut down his fugitives; do not hand over his survivors in the day of distress. ಅವರಲ್ಲಿ ಓಡಿಹೋದವರನ್ನು ಕಡಿದುಬಿಡುವುದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು. ಕಷ್ಟದ ದಿವಸದಲ್ಲಿ ಅವರಲ್ಲಿ ಉಳಿದುಕೊಂಡವರನ್ನು ಹಿಡಿದುಕೊಡಬಾರದಾಗಿತ್ತು.
15 For the day of our Father is near for all the nations. As you have done, it will be done to you; your deeds will come back on your own head. “ಯೆಹೋವ ದೇವರ ದಿವಸವು ಎಲ್ಲಾ ಜನಾಂಗಗಳ ಮೇಲೆ ಸಮೀಪವಾಗಿದೆ. ನೀನು ಮಾಡಿದ ಹಾಗೆಯೇ ನಿನಗೂ ಮಾಡಲಾಗುವುದು. ನಿನ್ನ ಕಾರ್ಯಗಳು ನಿನ್ನ ತಲೆಯ ಮೇಲೆ ತಿರುಗುವುವು.
16 For as you drank on my holy mountain, so all the nations will drink continually; they will drink and swallow and become as though they had never been. ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ, ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವುವು. ಹೌದು, ಕುಡಿದು ಎಂದೂ ಇಲ್ಲದವರ ಹಾಗೆ ಆಗುವುದು.
17 But on Mount Zion there will be deliverance, and it will be holy, and the house of Jacob will possess their inheritance. ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.
18 The house of Jacob will be a fire and the house of Joseph a flame, and the house of Esau will be stubble; they will burn it and consume it, and there will be no survivor of the house of Esau, for our Father has spoken. ಯಾಕೋಬನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಂತೆ ಧಗಧಗನೆ ದಹಿಸಿ ನಾಶವಾಗುವರು. ಏಸಾವನ ಮನೆತನದವರಲ್ಲಿ ಯಾರೂ ಉಳಿಯರು.” ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.
19 Those of the Negev will possess the mountain of Esau, and those of the foothills the land of the Philistines; they will possess the land of Ephraim and the land of Samaria, and Benjamin will possess Gilead. ದಕ್ಷಿಣದವರು ಏಸಾವನ ಬೆಟ್ಟವನ್ನೂ ಬಯಲಿನವರು ಫಿಲಿಷ್ಟಿಯರ ದೇಶವನ್ನೂ ಸ್ವತಂತ್ರಿಸಿಕೊಳ್ಳುವರು. ಎಫ್ರಾಯೀಮಿನ ಹೊಲಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನಮಾಡಿಕೊಳ್ಳುವರು ಬೆನ್ಯಾಮೀನನು ಗಿಲ್ಯಾದನ್ನು ವಶಪಡಿಸಿಕೊಳ್ಳುವನು.
20 The exiles of this army of the people of Israel will possess the land of the Canaanites as far as Zarephath, and the exiles of Jerusalem who are in Sepharad will possess the cities of the Negev. ಚಾರೆಪತಿನವರೆಗೂ ಇರುವ ಪ್ರದೇಶವನ್ನು ಕಾನಾನ್ಯರಲ್ಲಿರುವ ಇಸ್ರಾಯೇಲ್ ಸೆರೆವಾಸಿಗಳು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿರುವ ಯೆರೂಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.
21 Deliverers will go up to Mount Zion to rule the mountain of Esau, and the kingdom will belong to our Father. ರಕ್ಷಕನು ಏಸಾವಿನ ಪರ್ವತವನ್ನು ಆಳಲು ಚೀಯೋನ್ ಪರ್ವತವನ್ನು ಏರುವನು. ಆಗ ರಾಜ್ಯವು ಯೆಹೋವ ದೇವರದಾಗಿರುವುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]