Skip to content
The Believer's Library

Biblica® Open Kannada Contemporary Version 2022

Philemon 1 OKCV

Show OKCV only
Verse × ×
1 Paul, a prisoner of Christ Jesus, and Timothy our brother, to Philemon, our dear friend and co-worker, ಸುವಾರ್ತೆಯನ್ನು ಸಾರಿದ್ದರಿಂದ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆಮೋನನಿಗೂ
2 and to our sister Apphia, our fellow soldier Archippus, and the church that meets in your house: ಸಹೋದರಿ ಅಪ್ಫಿಯಳಿಗೂ ನಮ್ಮ ಸಹ ಸೈನಿಕನಾದ ಅರ್ಖಿಪ್ಪನಿಗೂ ನಿಮ್ಮ ಮನೆಯಲ್ಲಿ ಸೇರುವ ಸಭೆಯವರಿಗೂ ಬರೆಯುವುದೇನೆಂದರೆ:
3 Grace and peace to you from our Father and the Lord Jesus Christ. ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಇರಲಿ.
4 I always thank my Father as I remember you in my prayers, ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
5 because I hear of your love and faith in the Lord Jesus and for all his holy people. ಏಕೆಂದರೆ, ನಮ್ಮ ಕರ್ತ ಆಗಿರುವ ಯೇಸುವಿನಲ್ಲಿ ನಿನಗಿರುವ ವಿಶ್ವಾಸವನ್ನೂ ಪರಿಶುದ್ಧರೆಲ್ಲರಿಗಾಗಿ ನಿನಗಿರುವ ಪ್ರೀತಿಯನ್ನೂ ಕುರಿತು ನಾನು ಕೇಳಿದ್ದೇನೆ.
6 I pray your shared faith becomes effective as you come to understand every good thing we have in Christ. ನಿನ್ನ ವಿಶ್ವಾಸದಲ್ಲಿ ಅನ್ಯೋನ್ಯತೆಯು ನಿನ್ನ ಎಲ್ಲಾ ಒಳ್ಳೆಯದರ ಆಳವಾದ ತಿಳುವಳಿಕೆಯನ್ನು ಕ್ರಿಸ್ತ ಯೇಸುವಿಗಾಗಿ ಪರಿಣಾಮಗೊಳಿಸಿ ಹಂಚುವಂತೆ ನಾನು ಪ್ರಾರ್ಥಿಸುತ್ತೇನೆ.
7 Your love has brought me great joy and comfort, brother, since you've refreshed the hearts of his holy people. ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಉತ್ತೇಜನವಾದ್ದರಿಂದ, ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಆನಂದವೂ ಆದರಣೆಯೂ ಉಂಟಾದವು.
8 Therefore, although in Christ I am bold enough to command you to do what is right, ಆದಕಾರಣ, ನಾನು ಈಗ ನಿನಗೆ ಏನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಬಹು ಧೈರ್ಯವಿದ್ದರೂ
9 instead, for love's sake I appeal—I, Paul, an old man, now also a prisoner of Christ Jesus. ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
10 I appeal to you for my child Onesimus, whose father I became while I was in chains. ನಾನು ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ಏಕೆಂದರೆ ನಾನು ಸೆರೆಯಲ್ಲಿದ್ದಾಗ ಅವನು ನನಗೆ ಆತ್ಮಿಕ ಮಗನಾದನು.
11 He was once useless to you, but now is useful to you and me. ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.
12 I am sending him back to you—and in doing so I am sending my very heart. ನನಗೆ ಪ್ರಾಣವಾಗಿರುವ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ನಾನು ಕಳುಹಿಸಿ ಕೊಡುತ್ತಿದ್ದೇನೆ.
13 I wanted to keep him with me, to serve me on your behalf while I'm in chains for the gospel. ಸುವಾರ್ತೆಯ ನಿಮಿತ್ತ ಸೆರೆಯಲ್ಲಿರುವ ನನಗೆ ಉಪಚಾರ ಮಾಡುವಂತೆ ನಿನಗೆ ಬದಲಾಗಿ ಓನೇಸಿಮನನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಲು ಅಪೇಕ್ಷಿಸಿದ್ದೆನು.
14 But I wanted to do nothing without your consent, so your good deed would not be forced, but voluntary. ಆದರೆ ನಿನ್ನ ಉಪಚಾರವು ಬಲಾತ್ಕಾರದಿಂದಾಗದೆ, ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ, ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.
15 Perhaps this is why he was separated from you briefly, so you'd have him back forever. ಓನೇಸಿಮನು ಸ್ವಲ್ಪಕಾಲ ನಿನ್ನಿಂದ ಅಗಲಿದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ!
16 No longer as a slave, but more than a slave—a beloved brother, especially to me, but even more to you, both in the flesh and in the Lord. ಇನ್ನು ಮೇಲೆ ಅವನು ದಾಸನಾಗದೆ, ದಾಸನಿಗಿಂತ ಮೇಲಾಗಿ ಪ್ರಿಯ ಸಹೋದರನಂತಾಗಬೇಕು. ಅವನು ವಿಶೇಷವಾಗಿ ನನಗೆ ಬಹು ಪ್ರಿಯನಾಗಿದ್ದಾನೆ. ಆದರೂ ಓನೇಸಿಮನು ನಿನಗೆ ಮಾನವ ರೀತಿಯಲ್ಲಿಯೂ ಕರ್ತ ಯೇಸುವಿನಲ್ಲಿಯೂ ಒಬ್ಬ ಸಹೋದರನಾಗಿ ಇನ್ನು ಎಷ್ಟೋ ಪ್ರಿಯನಾಗಿರಬೇಕಲ್ಲವೇ.
17 So if you consider me a partner, welcome him as you would welcome me. ಆದಕಾರಣ ನಾನು ನಿನಗೆ ಅನ್ಯೋನ್ಯತೆವುಳ್ಳವನೆಂದು ನೀನು ಎಣಿಸುವುದಾದರೆ ನನ್ನನ್ನು ಸ್ವೀಕರಿಸಿಕೊಳ್ಳುವ ಪ್ರಕಾರವೇ ಅವನನ್ನು ಸ್ವೀಕರಿಸು.
18 If he wronged you at all, or owes anything, put it on my account. ಅವನು ನಿನಗೆ ಏನಾದರೂ ತಪ್ಪು ಮಾಡಿದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾಗಿದ್ದರೆ, ಅದನ್ನು ನನ್ನ ಲೆಕ್ಕಕ್ಕೆ ಹಾಕು.
19 I, Paul, write this with my own hand: I'll repay it—not to mention you owe me yourself as well. ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ನನ್ನ ಸ್ವಂತ ಕೈಯಲ್ಲಿ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನು ನಿನ್ನ ಪ್ರಾಣವನ್ನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕಾಗಿಲ್ಲ.
20 Yes, brother, do me this favor in the Lord—refresh my heart in Christ. ಸಹೋದರನೇ ಹೌದು, ಕರ್ತ ಯೇಸುವಿನಲ್ಲಿ ನಿನ್ನಿಂದ ನನಗೆ ಈ ಸಹಾಯಮಾಡು; ಅದು ಕ್ರಿಸ್ತ ಯೇಸುವಿನಲ್ಲಿ ನನ್ನ ಹೃದಯವನ್ನು ಉತ್ತೇಜನಗೊಳಿಸಲಿ.
21 Trusting you'll obey, I write to you, knowing you'll do even more than I ask. ನಿನ್ನ ವಿಧೇಯತೆಯಲ್ಲಿ ಭರವಸೆಯುಳ್ಳವನಾಗಿ ನಾನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುವೆಯೆಂದು ನನಗೆ ಗೊತ್ತಿದೆ.
22 Also prepare a guest room for me—I hope through your prayers to be graciously given back to you. ಇದಲ್ಲದೆ: ನಿಮ್ಮ ಪ್ರಾರ್ಥನೆಯ ದೆಸೆಯಿಂದ ನಾನು ಪುನಃ ನಿಮ್ಮ ಬಳಿಗೆ ಬರುತ್ತೇನೆಂದು ನನಗೆ ನಿರೀಕ್ಷೆ ಇರುವುದು. ಆದಕಾರಣ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಮಾಡು.
23 Epaphras, my fellow prisoner in Christ Jesus, sends you greetings, ಕ್ರಿಸ್ತ ಯೇಸುವಿಗಾಗಿ ನನ್ನ ಜೊತೆ ಸೆರೆಯಾಳಾಗಿರುವ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.
24 and so do Mark, Aristarchus, Demas, and Luke, my fellow workers. ನನ್ನ ಜೊತೆಕೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ ಹಾಗೂ ಲೂಕ ನಿನ್ನನ್ನು ವಂದಿಸುತ್ತಾರೆ.
25 The grace of the Lord Jesus Christ be with your spirit. Amen. ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]