Skip to content
The Believer's Library

Biblica® Open Kannada Contemporary Version 2022

Philippians 1 OKCV

Show OKCV only
Verse × ×
1 Paul and Timothy, servants of Christ Jesus, to all the holy ones in Christ Jesus at Philippi, with the overseers and deacons: ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:
2 Grace to you and peace from our Father and the Lord Jesus Christ. ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
3 I thank my Father every time I remember you, ನಾನು ನಿಮ್ಮನ್ನು ನೆನೆಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
4 always praying for all of you with joy in every prayer, ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಆನಂದದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.
5 because of your partnership in the gospel from the first day until now. ಏಕೆಂದರೆ, ನೀವು ಮೊದಲನೆಯ ದಿನದಿಂದ ಇಂದಿನವರೆಗೂ ಸುವಾರ್ತೆಯಲ್ಲಿ ಸಹಭಾಗಿಗಳಾಗಿದ್ದೀರಿ.
6 I'm confident of this very thing: the one who began a good work in you will complete it until the day of Christ Jesus. ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.
7 I'm right to feel this about you—I hold you in my heart, all of you sharing with me in grace, in my chains and in defending and confirming the gospel. ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.
8 For our Father is my witness, how I long for you all with Christ Jesus's deep affection. ಕ್ರಿಸ್ತ ಯೇಸುವಿನ ವಾತ್ಸಲ್ಯದಿಂದ ನಿಮ್ಮೆಲ್ಲರಿಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.
9 This is my prayer: that your love overflow more and more, with knowledge and all discernment, ನಿಮ್ಮ ಪ್ರೀತಿಯು ಹೆಚ್ಚುತ್ತಾ ಜ್ಞಾನದಲ್ಲಿಯೂ ಒಳನೋಟದಲ್ಲಿಯೂ ಬಹು ಹೆಚ್ಚಾಗಿ ಸಮೃದ್ಧಿಯಾಗಲಿ.
10 so you can discern what is best, staying pure and blameless until the day of Christ. ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ
11 Filled with the fruit of righteousness through Jesus Christ, to our Father's glory and praise. ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
12 I want you to know, brothers and sisters, that my circumstances have actually advanced the gospel, ಪ್ರಿಯರೇ, ನನಗೆ ಸಂಭವಿಸಿದ ಸಂಕಟಗಳು ಸುವಾರ್ತೆಯ ಪ್ರಗತಿಗಾಗಿಯೇ ಅನುಕೂಲವಾಯಿತು ಎಂಬುದನ್ನು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.
13 so my chains for Christ became known to the whole imperial guard and everyone else. ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ.
14 Most of the brothers and sisters, made confident in the Lord by my chains, now dare more to speak the word fearlessly. ನಾನು ಸೆರೆಯಲ್ಲಿರುವುದರಿಂದಲೇ ಕರ್ತ ದೇವರಲ್ಲಿರುವ ಅನೇಕ ಸಹೋದರರು ಭಯವಿಲ್ಲದೆಯೂ ಭರವಸೆಯಿಂದಲೂ ಸುವಾರ್ತೆಯ ವಾಕ್ಯವನ್ನು ಮಾತನಾಡುವುದಕ್ಕೆ ಪ್ರೋತ್ಸಾಹ ಹೊಂದಿದ್ದಾರೆ.
15 Some, it is true, preach Christ out of envy and rivalry, but others out of goodwill. ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ.
16 These act from love, knowing I'm assigned to defend the gospel. ಇವರಾದರೋ, ನಾನು ಸುವಾರ್ತೆಗಾಗಿ ನೇಮಕವಾಗಿದ್ದೇವೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.
17 The others proclaim Christ out of selfish ambition, not sincerely, thinking to stir up trouble for me in my chains. ಅವರಾದರೋ, ನಾನು ಬೇಡಿಗಳಿಂದ ಸೆರೆಮನೆಯಲ್ಲಿರುವಾಗ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧ ಪಡಿಸದೆ ಪ್ರತಿಸ್ಪರ್ಧೆಗಾಗಿ ಸಾರುತ್ತಾರೆ.
18 What then? Only that in every way—whether in pretense or truth—Christ is proclaimed, and I rejoice in this. Yes, I will keep rejoicing. ಹೇಗಾದರೇನು? ಕಪಟದಿಂದಾಗಲಿ, ಸತ್ಯದಿಂದಾಗಲಿ ಯಾವ ರೀತಿಯಿಂದಾದರೂ ಕ್ರಿಸ್ತನನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ. ಹೌದು ಮುಂದೆಯೂ ಸಂತೋಷಿಸುವೆನು.
19 For I know this will result in my rescue, through your prayers and the help of Jesus Christ's Spirit. ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು.
20 My eager expectation and hope: I will never be ashamed, but with full courage, now as always, Christ will be praised in my body, whether by life or by death. ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.
21 For to me, to live is Christ, and to die is gain. ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ,
22 If I am to go on living in the body, this will mean fruitful work for me. Yet I don't know which to choose. ಶರೀರದಲ್ಲಿಯೇ ಬದುಕುವುದು ನನಗೆ ಫಲದಾಯಕವಾದ ಪ್ರಯಾಸವಾಗಿದ್ದರೆ, ನಾನು ಯಾವುದನ್ನು ಆರಿಸಿಕೊಳ್ಳಬೇಕೋ ನನಗೆ ತಿಳಿಯದು.
23 Torn between the two, I want to leave and be with Christ—far better, ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.
24 but to remain in the body is more necessary for your sake. ಆದರೂ ನಾನು ಶರೀರದಲ್ಲಿಯೇ ಉಳಿದಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.
25 Convinced of this, I know I'll remain and stay with you all, for your progress and joy in the faith, ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರೊಡನೆ ಇರುವೆನೆಂದು ನಿಶ್ಚಯವಾಗಿ ತಿಳಿದಿದ್ದೇನೆ.
26 so your boasting in Christ Jesus may overflow because of me, when I come to you again. ಹೀಗೆ ನಾನು ಪುನಃ ನಿಮ್ಮ ಬಳಿಗೆ ಬರುವುದರಿಂದ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಸಂತೋಷವು ನನ್ನ ನಿಮಿತ್ತವಾಗಿ ಅತ್ಯಧಿಕವಾಗಿರುವುದು.
27 Just live worthy of the gospel of Christ, so that whether I come and see you, or am absent, I hear you stand firm in one spirit, contending together with one mind for the gospel's faith, ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
28 and not scared of your opponents at all—proof to them of their destruction, but of your salvation, and that from our Father. ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಿಯೂ ಅಂಜದೆ ಧೈರ್ಯದಿಂದಿರಿ. ನೀವು ಧೈರ್ಯದಿಂದಿರುವುದು, ಅವರ ವಿನಾಶಕ್ಕೂ, ನಿಮ್ಮ ರಕ್ಷಣೆಗೂ ದೇವರಿಂದಾದ ಸೂಚನೆಯಾಗಿದೆ.
29 For it has been graciously granted to you, for Christ's sake, not only to believe in him but also to suffer for him, ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.
30 going through the same struggle you saw me face, and now hear that I still face. ನೀವು ನನ್ನಲ್ಲಿ ಕಂಡು, ಈಗ ನನ್ನಲ್ಲಿರುವುದೆಂದು ಕೇಳುತ್ತಿರುವ ಅದೇ ಹೋರಾಟದ ಅನುಭವವೇ ನಿಮಗೂ ಇದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]