Skip to content
The Believer's Library

Biblica® Open Kannada Contemporary Version 2022

Philippians 2 OKCV

Show OKCV only
Verse × ×
1 So if any encouragement in Christ, any comfort from love, any deep communion in the Holy Spirit, any tenderness and compassion exist, ನೀವು ಕ್ರಿಸ್ತನೊಂದಿಗೆ ಐಕ್ಯವಾಗಿರುವುದರಿಂದ ಉತ್ತೇಜನ, ಅವರ ಪ್ರೀತಿಯಿಂದ ಸಂತೈಸುವಿಕೆ, ಆತ್ಮನಲ್ಲಿ ಅನ್ಯೋನ್ಯತೆ, ಕನಿಕರದ ವಾತ್ಸಲ್ಯಗಳು ಇರುವುದಾದರೆ,
2 complete my joy: think alike, love alike, unite in spirit, one in purpose. ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ.
3 Do nothing out of selfish ambition or empty conceit, but in humility consider others better than yourselves. ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.
4 Each of you should attend not only to your own interests, but also to others'. ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.
5 Have this mindset among yourselves—one that is yours in Christ Jesus, ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:
6 who, existing in the form of our Father, did not consider equality with our Father something to be grasped, ಅವರು ದೇವರ ಸ್ವರೂಪವಾಗಿದ್ದರೂ, ದೇವರಿಗೆ ಸಮಾನರಾಗಿರುವುದನ್ನು ಬಿಡಲೊಲ್ಲೆನೆಂದು ಎಣಿಸದೆ,
7 but emptied himself by taking on the form of a servant and being born in human likeness. ತಮ್ಮನ್ನು ತಾವೇ ಬರಿದುಮಾಡಿಕೊಂಡು ಗುಲಾಮನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದರು.
8 And appearing as a human being, he humbled himself by becoming obedient to death—even death on a cross. ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ ತಮ್ಮನ್ನು ತಾವೇ ತಗ್ಗಿಸಿಕೊಂಡು ಮರಣವನ್ನು ಎಂದರೆ ಶಿಲುಬೆಯ ಮರಣವನ್ನೂ ಹೊಂದುವಷ್ಟು ವಿಧೇಯರಾದರು.
9 Therefore our Father exalted him to the highest place and gave him the name that is above every name, ಈ ಕಾರಣದಿಂದಲೇ ದೇವರು ಅವರನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಅವರಿಗೆ ದಯಪಾಲಿಸಿದ್ದಾರೆ.
10 so that at the name of Jesus every knee should bow, in heaven and on earth and under the earth, ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,
11 and every tongue confess that Jesus Christ is Lord, to the glory of our Father. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.
12 So, my dear ones, as you've always obeyed—not only in my presence but now much more in my absence—keep working out your salvation with fear and trembling, ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.
13 for our Father works in you, giving both the will and the work for his good purpose. ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.
14 Do everything without grumbling or arguing, ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ.
15 so you may be blameless and pure, faultless children of our Father amid a crooked and depraved generation—shining among them like stars in the world, ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.
16 holding firmly to the word of life, so I can boast on Christ's day that I didn't run or work for nothing. ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು.
17 But even if I'm poured out as a drink offering on the sacrifice and service of your faith, I'm glad and rejoice with you all. ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.
18 So you too should be glad and rejoice with me. ಇದಕ್ಕಾಗಿಯೇ ನೀವೂ ಹರ್ಷಿಸಿರಿ. ನನ್ನೊಡನೆ ಆನಂದಿಸಿರಿ.
19 I hope, in the Lord Jesus, to send Timothy to you soon, so I too may be encouraged, knowing how you are. ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವುದಕ್ಕೆ ಕರ್ತ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಹೀಗೆ ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಉತ್ತೇಜನಗೊಳ್ಳುವೆನು.
20 I have no one else like him, who will genuinely care for your welfare. ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು, ನನ್ನ ಬಳಿ ಬೇರೆ ಯಾರೂ ಇಲ್ಲ.
21 For they all look after their own interests, not those of Jesus Christ. ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ.
22 You know Timothy's proven worth—like a son with a father, he served with me in the gospel work. ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ.
23 So I hope to send him as soon as I see how things go with me, ಆದ್ದರಿಂದ ನನಗೆ ಏನು ಸಂಭವಿಸುವುದು ಎಂದು ತಿಳಿದ ಕೂಡಲೇ ಅವನನ್ನು ಕಳುಹಿಸುವ ನಿರೀಕ್ಷೆಯಿದೆ.
24 and I am confident in the Lord that I myself will come soon. ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತ ದೇವರಲ್ಲಿ ಭರವಸೆಯುಳ್ಳವನಾಗಿದ್ದೇನೆ.
25 I thought it necessary to send Epaphroditus back to you—my brother, coworker, and fellow soldier, your messenger and servant for my needs. ಆದರೂ ನನ್ನ ಸಹೋದರನೂ ಜೊತೆ ಕೆಲಸದವನೂ ಸಹಸೈನಿಕನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ನಾನು ನೆನೆಸಿದ್ದೇನೆ. ಅವನು ನನ್ನ ಕೊರತೆಯಲ್ಲಿ ಸೇವೆ ಮಾಡುವಂತೆ ನೀವು ಕಳುಹಿಸಿದ ನಿಮ್ಮ ಸಂದೇಶಕನೂ ಆಗಿದ್ದಾನೆ.
26 He has longed for you all, and is troubled that you heard he was sick. ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ.
27 Indeed he was sick, and nearly died. But our Father had mercy on him—not only him but me too, sparing me sorrow upon sorrow. ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು.
28 So I'm more eager to send him, so seeing him again you'll rejoice and I'll worry less. ಆದ್ದರಿಂದ ನೀವು ಅವನನ್ನು ನೋಡಿ ಪುನಃ ಆನಂದಿಸುವಂತೆಯೂ ನನಗೆ ದುಃಖ ಕಡಿಮೆಯಾಗುವಂತೆಯೂ ನಾನು ಅವನನ್ನು ಅತ್ಯಾಸಕ್ತಿಯಿಂದ ಕಳುಹಿಸಿದ್ದೇನೆ.
29 Welcome him in the Lord with all joy, and honor people like him, ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.
30 because he neared death for Christ's work, risking his life to make up your missing help to me. ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]