Skip to content
The Believer's Library

Biblica® Open Kannada Contemporary Version 2022

Philippians 3 OKCV

Show OKCV only
Verse × ×
1 Finally, brothers and sisters, rejoice in the Lord. Writing the same things again is no trouble for me, and it protects you. ಕಡೆಯದಾಗಿ ನನ್ನ ಪ್ರಿಯರೇ, ಕರ್ತನಲ್ಲಿ ಆನಂದಿಸಿರಿ. ಬರೆದದ್ದನ್ನೇ ನಿಮಗೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ, ಅದು ನಿಮಗೆ ಸುರಕ್ಷಿತವೇ.
2 Watch for the dogs, watch for the evil workers, watch for those who mutilate the flesh. ನಾಯಿಗಳಂತೆ ವರ್ತಿಸುವವರಿಗೆ ಎಚ್ಚರಿಕೆ. ದುಷ್ಟಕಾರ್ಯಮಾಡುವವರಿಗೆ ಎಚ್ಚರಿಕೆ, ಸುಳ್ಳು ಸುನ್ನತಿಗಾಗಿ ವಾಗ್ವಾದಿಸುವವರಿಗೆ ಎಚ್ಚರಿಕೆ.
3 We are the circumcision—worshiping by the Spirit of our Father, boasting in Christ Jesus, trusting nothing in the flesh, ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.
4 though I too could have confidence in the flesh. If anyone else thinks he has grounds for confidence in the flesh, I have more: ಮಾಂಸದಲ್ಲಿ ಭರವಸೆ ಇಡಲು ನನಗೆ ಸಾಕಷ್ಟು ಕಾರಣಗಳಿವೆ. ಬೇರೆ ಯಾವನಾದರೂ ಮಾನವೀಯ ಪ್ರಯತ್ನಗಳಲ್ಲಿ ಭರವಸೆ ಇಡಬಹುದೆಂದು ಭಾವಿಸುವುದಾದರೆ, ನಾನು ಅದಕ್ಕಿಂತಲೂ ಹೆಚ್ಚಾಗಿ ಹೇಳಬಹುದು:
5 Circumcised the eighth day; Israelite by birth, from Benjamin's tribe; Hebrew of Hebrews; a Pharisee under the law. ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು; ಬೆನ್ಯಾಮೀನನ ಕುಲದವನು; ಹೀಬ್ರಿಯರಿಂದ ಹುಟ್ಟಿದ ಹೀಬ್ರಿಯನು; ಮೋಶೆಯ ನಿಯಮದ ಅನುಸಾರವಾಗಿ ನಾನು ಫರಿಸಾಯನು.
6 In zeal, persecuting the church; in righteousness under the law, blameless. ಆಸಕ್ತಿಯನ್ನು ನೋಡಿದರೆ, ನಾನು ಸಭೆಯ ಹಿಂಸಕನು; ಮೋಶೆಯ ನಿಯಮದಲ್ಲಿರುವ ನೀತಿಯ ಅನುಸಾರವಾಗಿ ನಾನು ನಿರ್ದೋಷಿ.
7 But whatever was gain to me, I now count as loss for the sake of Christ. ನನಗೆ ಲಾಭವಾಗಿದ್ದ ಎಲ್ಲವನ್ನೂ ಈಗ ನಾನು ಕ್ರಿಸ್ತನ ನಿಮಿತ್ತ ನಷ್ಟವೆಂದು ಎಣಿಸುತ್ತೇನೆ.
8 Yes, I count everything as loss because of the priceless worth of knowing Christ Jesus my Lord. For his sake I've lost all things, and count them garbage, so I may gain Christ, ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.
9 and be found in him, not having my own righteousness from the law, but that through faith in Christ—the righteousness from our Father based on faith, ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.
10 so I may know him, his resurrection's power, sharing his sufferings, becoming like him in death, ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ.
11 if somehow I may attain to the resurrection from the dead. ಹೇಗಾದರೂ, ನಾನೂ ಸಹ ಸತ್ತವರೊಳಗಿಂದ ಪುನರುತ್ಥಾನ ಹೊಂದುವೆನು.
12 Not that I have already obtained it, or am already perfected, but I press on to grasp that for which Christ Jesus grasped me. ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.
13 Brothers, I don't count myself as having grasped it yet. But one thing: forgetting what's behind, reaching for what's ahead, ಪ್ರಿಯರೇ, ನಾನಂತೂ ಆ ಗುರಿಯನ್ನು ತಲುಪಿದ್ದೇನೆಂದು ಭಾವಿಸಿಕೊಂಡಿಲ್ಲ. ಆದರೆ ಒಂದು ಸಂಗತಿ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು, ಮುಂದಿನ ವಿಷಯಗಳನ್ನು ಮಾತ್ರ ಲಕ್ಷ್ಯವನ್ನಾಗಿ ಮಾಡಿಕೊಂಡು ಅದನ್ನೇ ಪಡೆದುಕೊಳ್ಳುವುದಕ್ಕಾಗಿ ಓಡುತ್ತಿದ್ದೇನೆ.
14 I press toward the goal for the prize of our Father's heavenward call in Christ Jesus. ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.
15 Let all of us who are mature think this way; if you think differently on anything, our Father will reveal that to you too. ಆದ್ದರಿಂದ ನಮ್ಮಲ್ಲಿ ಆತ್ಮಿಕ ಪರಿಪಕ್ವತೆಯುಳ್ಳವರು ಇದೇ ಮನೋಭಾವವುಳ್ಳವರಾಗಿರಬೇಕು. ಕೆಲವು ವಿಷಯಗಳ ಮೇಲೆ ಭಿನ್ನಾಭಿಪ್ರಾಯವಿದ್ದರೆ, ಅದನ್ನೂ ದೇವರು ನಿಮಗೆ ಸ್ಪಷ್ಟಪಡಿಸುವರು.
16 Only let us hold true to what we have already attained. ಆದರೂ ಈಗಾಗಲೇ ನಾವು ಯಾವುದರಲ್ಲಿ ಮುಂದುವರೆದಿದ್ದೇವೋ ಆ ಸೂತ್ರದ ಪ್ರಕಾರ ಒಂದೇ ಮನಸ್ಸುಳ್ಳವರಾಗಿ ಬಾಳೋಣ.
17 Brothers, imitate me together, and watch those who live by the pattern you have in us. ಪ್ರಿಯರೇ, ನೀವು ನನ್ನನ್ನು ಅನುಸರಿಸುವವರಾಗಿರಿ. ನಮ್ಮ ಹಾಗೆ ಬಾಳುವ ಆದರ್ಶದ ಪ್ರಕಾರ ನಡೆದುಕೊಳ್ಳುವವರನ್ನು ಗಮನಿಸಿರಿ.
18 Many live as enemies of Christ's cross—I've told you this often, and now say it in tears. ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ಬಾಳುತ್ತಿದ್ದಾರೆ. ಅವರ ವಿಷಯದಲ್ಲಿ ನಾನು ನಿಮಗೆ ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.
19 Their end is destruction, their god the stomach, their glory their shame, minds fixed on earthly things. ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.
20 But our citizenship is in heaven; from there we eagerly await a Savior, the Lord Jesus Christ, ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.
21 who will transform our lowly body to match his glorious body, by the power that subjects all things to himself. ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]