Skip to content
The Believer's Library

Biblica® Open Kannada Contemporary Version 2022

Proverbs 1 OKCV

Show OKCV only
Verse × ×
1 The proverbs of Solomon, son of David, king of Israel: ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:
2 To know wisdom and instruction, to understand words of insight, ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ; ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ;
3 to receive instruction in wise conduct, in righteousness, justice, and fairness, ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು;
4 to give prudence to the simple, knowledge and discretion to the young, ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.
5 let the wise also hear and increase in learning, and let the one who understands gain guidance, ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.
6 to understand a proverb and a parable, the words of the wise and their riddles. ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ.
7 The fear of our Father is the beginning of knowledge; fools despise wisdom and instruction. ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.
8 Listen, my son, to your father's instruction, and don't turn away from your mother's teaching, ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು, ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
9 for they are a graceful garland for your head and pendants for your neck. ಅವು ನಿನ್ನ ತಲೆಗೆ ಸುಂದರ ಕಿರೀಟ ನಿನ್ನ ಕೊರಳನ್ನು ಅಲಂಕರಿಸುವ ಹಾರ.
10 My son, if sinners entice you, do not give in. ಮಗನೇ, ಪಾಪಿಗಳು ನಿನ್ನನ್ನು ಸೆಳೆದರೆ ನೀನು ಒಪ್ಪಬೇಡ.
11 If they say, "Come with us, let us lie in wait for blood, let us ambush the innocent without cause; ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ, ಜನರ ರಕ್ತಕ್ಕಾಗಿ ಒಳಸಂಚು ಮಾಡೋಣ, ನಿರಪರಾಧಿಯ ರಕ್ತಕ್ಕಾಗಿ;
12 like the grave let us swallow them alive, and whole, like those who go down to the pit; ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ.
13 we will find all kinds of precious goods, we will fill our houses with plunder; ಅಮೂಲ್ಯವಾದ ಸೊತ್ತನ್ನೆಲ್ಲಾ ನಾವು ಕಂಡುಹಿಡಿದು ಕೊಳ್ಳೆಹೊಡೆದು ನಮ್ಮ ಮನೆಗಳನ್ನು ತುಂಬಿಕೊಳ್ಳೋಣ;
14 throw in your lot with us; we will all share one purse," ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಾವೆಲ್ಲರೂ ಹಣಹಂಚಿಕೊಳ್ಳೋಣ,” ಎಂದು ಹೇಳುವುದಾದರೆ.
15 my son, do not walk in the way with them; hold back your foot from their paths, ಮಗನೇ, ಅವರೊಂದಿಗೆ ಸೇರಬೇಡ, ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.
16 for their feet run to evil, and they hurry to shed blood. ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತಸುರಿಸುವುದಕ್ಕೆ ಆತುರಪಡುತ್ತವೆ.
17 For a net spread out before any bird's eyes catches nothing; ಪಕ್ಷಿಗಳ ಕಣ್ಣೆದುರಿಗೆ ಕಾಣುವಂತೆ ಬಲೆಯನ್ನು ಹರಡುವುದು ವ್ಯರ್ಥವಲ್ಲವೇ!
18 but these lie in wait for their own blood; they ambush their own lives. ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ. ಅವರು ಮಾಡುವ ದುರಾಲೋಚನೆ ಅವರನ್ನೇ ನಾಶಮಾಡುವುದು.
19 Such are the ways of everyone greedy for unjust gain; it takes away the life of its possessors. ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ. ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.
20 Wisdom cries aloud in the street; in the open squares she lifts her voice. ಜ್ಞಾನವೆಂಬಾಕೆಯು ಬೀದಿಯಲ್ಲಿ ಕೂಗುತ್ತಾಳೆ, ಬಹಿರಂಗ ಸ್ಥಳಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
21 At the head of the noisy streets she calls out; at the entrance of the city gates she speaks: ಜನಭರಿತ ಬೀದಿಗಳಲ್ಲಿ ಆಕೆ ಕರೆಯುತ್ತಾಳೆ, ಪಟ್ಟಣದ ಹೆಬ್ಬಾಗಿಲುಗಳಲ್ಲಿ ಹೀಗೆಂದು ಭಾಷಣ ಮಾಡುತ್ತಾಳೆ:
22 "How long, simple ones, will you love being simple? How long will mockers delight in their mocking and fools hate knowledge? “ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?
23 If you respond to my correction, I, Wisdom, will pour out my spirit on you; I will make my words known to you. ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.
24 Because I have called and you refused, I stretched out my hand and no one paid attention, ನಾನು ಕರೆದಾಗ ನೀವು ನನ್ನನ್ನು ತಿರಸ್ಕರಿಸಿದ್ದೀರಿ ನಾನು ನನ್ನ ಕೈಚಾಚಿದಾಗ ಯಾರೂ ಮನುಷ್ಯನೂ ಗಮನಿಸಲಿಲ್ಲ.
25 and you ignored all my counsel and rejected all my correction, ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ
26 I also will laugh at your calamity; I will mock when terror overtakes you, ಬಿರುಗಾಳಿಯಂತೆ ನಿಮಗೆ ವಿಪತ್ತು ಬಂದಾಗ ನಾನು ನಗುವೆನು. ಆಪತ್ತು ನಿಮ್ಮನ್ನು ಹಿಂದಿಕ್ಕಿದಾಗ, ನಾನು ಪರಿಹಾಸ್ಯ ಮಾಡುವೆನು.
27 when terror overtakes you like a storm and your calamity comes like a whirlwind, when distress and anguish come upon you. ಚಂಡಮಾರುತವು ನಿಮ್ಮನ್ನು ಬಿರುಗಾಳಿಯಂತೆ ತಾಕಿದಾಗ, ವಿಪತ್ತು ಸುಂಟರಗಾಳಿಯಂತೆ ನಿಮ್ಮ ಮೇಲೆ ಬೀಸಿದಾಗ, ಯಾತನೆ ಮತ್ತು ತೊಂದರೆ ನಿಮ್ಮನ್ನು ಆವರಿಸಿದಾಗಲೂ ಪರಿಹಾಸ್ಯಕ್ಕೆ ಒಳಗಾಗುವಿರಿ.
28 Then they will call on me, but I will not answer; they will seek me earnestly but will not find me, “ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ.
29 because they hated knowledge and did not choose the fear of our Father, ಏಕೆಂದರೆ ಅವರು ಅರಿವನ್ನು ಹಗೆಮಾಡಿ, ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು.
30 they rejected my counsel and despised all my correction. ನನ್ನ ಬುದ್ಧಿವಾದವನ್ನು ಸ್ವೀಕರಿಸದೆ, ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದರು.
31 So they will eat the fruit of their own way and have their fill of their own schemes. ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ, ತಮ್ಮ ಸ್ವಂತ ಕುಯುಕ್ತಿಗಳಿಂದಲೇ ಹೊಟ್ಟೆ ತುಂಬಿಕೊಳ್ಳುವರು.
32 For the waywardness of the simple will kill them, and the complacency of fools will destroy them; ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು.
33 but whoever listens to me will dwell secure and be at ease, without dread of disaster." ನನಗೆ ಕಿವಿಗೊಡುವವರಾದರೋ ಸುರಕ್ಷಿತರಾಗಿ ಜೀವಿಸುವರು, ಕೇಡಿನ ಭಯವಿಲ್ಲದೇ ನೆಮ್ಮದಿಯಿಂದ ಇರುವರು.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]