Skip to content
The Believer's Library

Biblica® Open Kannada Contemporary Version 2022

Proverbs 10 OKCV

Show OKCV only
Verse × ×
1 The proverbs of Solomon: A wise son brings joy to his father, but a foolish son brings grief to his mother. ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ.
2 Treasures gained by wickedness do not profit, but righteousness rescues from death. ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ, ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ.
3 Our Father will not let the righteous go hungry, but he thwarts the craving of the wicked. ನೀತಿವಂತನನ್ನು ಹಸಿವೆಯಿಂದ ಬಳಲುವಂತೆ ಯೆಹೋವ ದೇವರು ಬಿಡುವುದಿಲ್ಲ; ಆದರೆ ದುಷ್ಟರ ಆಶೆಯನ್ನು ಅವರು ಭಂಗಪಡಿಸುತ್ತಾರೆ.
4 Lazy hands make you poor, but diligent hands bring wealth. ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
5 He who gathers in summer is a prudent son, but he who sleeps during harvest is a son who brings shame. ಬೇಸಿಗೆಯಲ್ಲಿ ಫಸಲನ್ನು ಕೂಡಿಸುವವರು ಬುದ್ಧಿವಂತ ಮಕ್ಕಳು, ಸುಗ್ಗಿಯಲ್ಲಿ ನಿದ್ರೆ ಮಾಡುವವರು ನಾಚಿಕೆಗೆಟ್ಟ ಮಕ್ಕಳು.
6 Blessings rest on the head of the righteous, but the mouth of the wicked conceals violence. ನೀತಿವಂತರ ತಲೆಯ ಮೇಲೆ ಆಶೀರ್ವಾದವಿದೆ; ಆದರೆ ದುಷ್ಟರ ಬಾಯಲ್ಲಿ ಕ್ರೌರ್ಯ ಅಡಗಿದೆ.
7 The memory of the righteous is a blessing, but the name of the wicked will rot. ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.
8 A wise heart accepts commands, but a babbling fool comes to ruin. ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು; ಆದರೆ ಹರಟೆಯ ಮೂರ್ಖನು ಬೀಳುವನು.
9 Whoever walks in integrity walks securely, but he who makes his ways crooked will be found out. ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು.
10 Whoever winks causes trouble, and a babbling fool comes to ruin. ದುರುದ್ದೇಶದಿಂದ ಕಣ್ಣು ಮಿಟಕಿಸುವವನು ದುಃಖವನ್ನು ಉಂಟುಮಾಡುತ್ತಾನೆ, ಆದರೆ ಹರಟೆಯ ಮೂರ್ಖನು ಬೀಳುವನು.
11 The mouth of the righteous is a fountain of life, but the mouth of the wicked conceals violence. ನೀತಿವಂತನ ಬಾಯಿಯು ಜೀವದ ಬುಗ್ಗೆ; ಆದರೆ ದುಷ್ಟನ ಬಾಯಿ ಹಿಂಸೆಯನ್ನು ಮರೆಮಾಡುತ್ತದೆ.
12 Hatred stirs up conflict, but love covers all offenses. ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ.
13 On the lips of the discerning, wisdom is found, but a rod is for the back of one who lacks sense. ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕುತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
14 The wise store up knowledge, but the mouth of a fool invites ruin. ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ.
15 The wealth of the rich is their fortified city; the ruin of the poor is their poverty. ಐಶ್ವರ್ಯವಂತರಿಗೆ ಸಂಪತ್ತೇ ಅವರ ಬಲವಾದ ಕೋಟೆ; ಆದರೆ, ಬಡತನವೇ ಬಡವರ ನಾಶನಕ್ಕೆ ಕಾರಣ.
16 The wage of the righteous leads to life; the gain of the wicked leads to sin. ನೀತಿವಂತರ ದುಡಿತವು ಜೀವವಾಗುವುದು; ಆದರೆ, ದುಷ್ಟರ ಆದಾಯವು ಪಾಪ ಹಾಗು ಮರಣ.
17 Whoever accepts discipline is on the path to life, but he who ignores correction leads others astray. ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.
18 Whoever conceals hatred is a liar, and whoever spreads slander is a fool. ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ ಮತ್ತು ಚಾಡಿ ಹೇಳುವವನು ಮೂರ್ಖನು.
19 Where words are many, sin is never absent; but whoever holds his tongue is wise. ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ. ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು.
20 The tongue of the righteous is choice silver; the heart of the wicked is worth little. ನೀತಿವಂತರ ನಾಲಿಗೆಯು ಚೊಕ್ಕಬೆಳ್ಳಿಯಂತಿದೆ; ದುಷ್ಟರ ಹೃದಯವು ಬೆಲೆಯಿಲ್ಲದ್ದು.
21 The lips of the righteous nourish many, but fools die for lack of sense. ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ.
22 The blessing of our Father brings wealth, and he adds no sorrow with it. ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.
23 Doing wickedness is a game to a fool, but wisdom is the delight of a person of understanding. ಮೂರ್ಖನಿಗೆ ಕೇಡು ಮಾಡುವುದರಲ್ಲಿ ಆನಂದ; ಆದರೆ ತಿಳುವಳಿಕೆಯ ವ್ಯಕ್ತಿಯು ಜ್ಞಾನದಲ್ಲಿ ಸಂತೋಷಪಡುತ್ತಾನೆ.
24 What the wicked dreads will come upon him, but the desire of the righteous will be granted. ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು.
25 When the storm has passed, the wicked are gone, but the righteous are established forever. ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.
26 Like vinegar to the teeth and smoke to the eyes, so is the sluggard to those who send him. ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆಯೇ ಇರುವನು.
27 The fear of our Father lengthens life, but the years of the wicked will be cut short. ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರ್ಷಗಳು ಕಡಿಮೆ ಆಗುವವು.
28 The hope of the righteous brings joy, but the expectation of the wicked will perish. ನೀತಿವಂತರ ನಿರೀಕ್ಷೆಯು ಆನಂದಕರವಾಗಿರುವುದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವುದು.
29 The way of our Father is a refuge for the blameless, but ruin for those who do evil. ಯೆಹೋವ ದೇವರ ಮಾರ್ಗವು ನಿರ್ದೋಷಿಗಳಿಗೆ ಆಶ್ರಯವಾಗಿದೆ; ಆದರೆ ಕೇಡು ಮಾಡುವವರಿಗೆ ಅದು ವಿನಾಶಕರವಾಗಿದೆ.
30 The righteous will never be shaken, but the wicked will not remain in the land. ನೀತಿವಂತರು ಎಂದಿಗೂ ಕದಲುವುದೇ ಇಲ್ಲ; ಆದರೆ ದುಷ್ಟರು ಭೂಮಿಯಲ್ಲಿ ನಿಲ್ಲುವುದಿಲ್ಲ.
31 The mouth of the righteous yields wisdom, but the perverse tongue will be cut off. ನೀತಿವಂತರ ಬಾಯಲ್ಲಿ ಜ್ಞಾನವು ಫಲಿಸುತ್ತದೆ; ಆದರೆ ಮೂರ್ಖನ ನಾಲಿಗೆಯು ಕತ್ತರಿಸಲಾಗುವುದು.
32 The lips of the righteous know what is acceptable, but the mouth of the wicked, only what is perverse. ಯೋಗ್ಯವಾದದ್ದು ಯಾವುದೆಂದು ನೀತಿವಂತರ ತುಟಿಗಳಿಗೆ ತಿಳಿಯುವುದು, ಆದರೆ, ದುಷ್ಟರ ಬಾಯಿ ಮೂರ್ಖತನವನ್ನೇ ಹೊರಗೆಡವುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]