Skip to content
The Believer's Library

Biblica® Open Kannada Contemporary Version 2022

Proverbs 11 OKCV

Show OKCV only
Verse × ×
1 Dishonest scales are an abomination to our Father, but accurate weights are his delight. ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ.
2 When pride comes, then comes disgrace, but wisdom comes with the humble. ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ಆದರೆ ದೀನತೆಯೊಂದಿಗೆ ಜ್ಞಾನ ಬರುವುದು.
3 The integrity of the upright guides them, but the crookedness of the treacherous destroys them. ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡೆಸುವುದು; ಅಪನಂಬಿಗಸ್ತರ ಕಪಟತನವೇ ಅವರನ್ನು ನಾಶಪಡಿಸುವುದು.
4 Wealth does not profit in the day of wrath, but righteousness delivers from death. ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.
5 The righteousness of the blameless makes their way straight, but the wicked falls by his own wickedness. ನಿಷ್ಕಳಂಕರ ನೀತಿಯು ಅವರ ಮಾರ್ಗವನ್ನು ಸರಾಗ ಮಾಡುವುದು; ಆದರೆ ದುಷ್ಟರು ತಮ್ಮ ದುಷ್ಟತ್ವದಿಂದಲೇ ಬೀಳುವರು.
6 The righteousness of the upright delivers them, but the treacherous are trapped by their own craving. ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವುದು; ಆದರೆ ಅಪನಂಬಿಗಸ್ತರು ದುಷ್ಟ ಆಸೆಗಳಿಂದ ಸಿಕ್ಕಿಹಾಕಿಕೊಳ್ಳುತ್ತಾರೆ.
7 When a wicked person dies, his hope perishes, and his confidence in his own strength comes to nothing. ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವುವು; ತನ್ನ ಬಲದಿಂದ ನಿರೀಕ್ಷಿಸಿದ್ದೆಲ್ಲವೂ ಇಲ್ಲದಂತಾಗುವುದು.
8 The righteous is delivered from trouble, and the wicked comes into it in his place. ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ, ದುಷ್ಟನು ಅದರ ಸ್ಥಳದಲ್ಲಿ ಸಿಕ್ಕಿಬೀಳುವನು.
9 With his mouth the godless destroys his neighbor, but through knowledge the righteous are delivered. ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು.
10 When things go well for the righteous, the city rejoices, and when the wicked perish, there are shouts of joy. ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ.
11 By the blessing of the upright a city is exalted, but by the mouth of the wicked it is torn down. ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಪ್ರಗತಿಯಾಗುತ್ತದೆ, ಆದರೆ ದುಷ್ಟರ ಬಾಯಿಂದ ಅದು ನಾಶವಾಗುತ್ತದೆ.
12 Whoever despises his neighbor lacks sense, but a person of understanding stays silent. ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ, ಆದರೆ ತಿಳುವಳಿಕೆಯುಳ್ಳವನು ಮೌನವಾಗಿರುತ್ತಾನೆ.
13 A gossip goes about revealing secrets, but someone with a trustworthy spirit can keep a secret. ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ, ಆದರೆ ನಂಬಿಗಸ್ತನು ಆ ಸಂಗತಿಯನ್ನು ಮುಚ್ಚುತ್ತಾನೆ.
14 Where there is no guidance, a people falls, but in an abundance of counselors there is safety. ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
15 Whoever puts up security for a stranger will surely suffer for it, but whoever hates shaking hands on a pledge is secure. ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ, ಹೊಣೆಗಾರನಾಗಿರದವನು ಸುರಕ್ಷಿತವಾಗಿರುವನು.
16 A gracious woman attains honor, and ruthless men attain riches. ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ, ನಿಷ್ಕರುಣ ವ್ಯಕ್ತಿ ಸಂಪತ್ತನ್ನು ಮಾತ್ರ ಪಡೆದುಕೊಳ್ಳುತ್ತಾನೆ.
17 A kind person benefits himself, but a cruel person brings trouble on himself. ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ, ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
18 The wicked earns deceptive wages, but whoever sows righteousness earns a true reward. ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.
19 Whoever is steadfast in righteousness finds life, but whoever pursues evil runs to his own death. ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ.
20 Those of crooked heart are an abomination to our Father, but those whose ways are blameless are his delight. ವಕ್ರ ಹೃದಯವುಳ್ಳವರು ಯೆಹೋವ ದೇವರಿಗೆ ಅಸಹ್ಯವಾದವರು, ಆದರೆ, ಸನ್ಮಾರ್ಗದಲ್ಲಿ ಯಥಾರ್ಥವಾಗಿ ಇರುವವರಲ್ಲಿ ಅವರು ಆನಂದಿಸುತ್ತಾರೆ.
21 You can be sure the evil person will not go unpunished, but the children of the righteous will go free. ದುಷ್ಟನಿಗೆ ಶಿಕ್ಷೆ ತಪ್ಪುವುದಿಲ್ಲ; ನೀತಿವಂತರ ವಂಶವು ಬಿಡುಗಡೆ ಹೊಂದುವುದು.
22 Like a gold ring in a pig's snout is a beautiful woman who shows no discretion. ಹಂದಿಯ ಮೂಗಿಗೆ ಬಂಗಾರದ ಮೂಗುತಿಯು ಹೇಗೋ, ಹಾಗೆಯೇ ವಿವೇಕವಿಲ್ಲದ ಸ್ತ್ರೀಗೆ ಸೌಂದರ್ಯವು.
23 The desire of the righteous ends only in good, but the hope of the wicked ends in wrath. ನೀತಿವಂತರ ಅಪೇಕ್ಷೆಯು ಶುಭಕ್ಕಾಸ್ಪದ, ದುಷ್ಟರ ಅಪೇಕ್ಷೆಯು ತೀರ್ಪಿಗೀಡು.
24 One person gives freely, yet grows all the richer; another withholds what is right, only to end up in need. ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ.
25 A generous soul will be enriched, and whoever refreshes others will himself be refreshed. ಉದಾರಿಯು ಅಭಿವೃದ್ಧಿ ಹೊಂದುವನು; ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು.
26 The people curse whoever holds back grain, but the one who sells it is blessed. ಧಾನ್ಯವನ್ನು ಬಚ್ಚಿಟ್ಟುಕೊಳ್ಳುವವನನ್ನು ಜನರು ಶಪಿಸುವರು; ಆದರೆ ಅದನ್ನು ಮಾರುವವನ ಮೇಲೆ ಆಶೀರ್ವಾದವು ನೆಲೆಯಾಗಿರುವುದು.
27 Whoever diligently seeks good seeks favor, but whoever searches for evil, evil will come to him. ಒಳ್ಳೆಯದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದುತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವುದು.
28 Whoever trusts in his riches will fall, but the righteous will flourish like green leaves. ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು.
29 Whoever brings trouble on his own household will inherit the wind, and the fool will be servant to the wise of heart. ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಮೂರ್ಖನು ಜ್ಞಾನನಿಗೆ ಸೇವಕನಾಗಿರುವನು.
30 The fruit of the righteous is a tree of life, and whoever wins souls is wise. ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.
31 If the righteous is repaid on earth, how much more the wicked and the sinner! ಇಗೋ, ಭೂಮಿಯ ಮೇಲೆ ನೀತಿವಂತರು ತಮ್ಮ ಫಲವನ್ನು ಹೊಂದಲಿಕ್ಕಿರುವಾಗ, ದುಷ್ಟರು ಮತ್ತು ಪಾಪಿಗಳು ಎಷ್ಟೋ ಹೆಚ್ಚಾಗಿ ತಮ್ಮ ಫಲವನ್ನು ಹೊಂದುತ್ತಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]