Skip to content
The Believer's Library

Biblica® Open Kannada Contemporary Version 2022

Proverbs 12 OKCV

Show OKCV only
Verse × ×
1 Whoever loves discipline loves knowledge, but whoever hates correction is senseless. ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು.
2 A good man obtains favor from our Father, but he condemns the man who schemes evil. ಒಳ್ಳೆಯವನು ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ, ಆದರೆ ಕುಯುಕ್ತಿ ಮಾಡುವವನನ್ನು ಅವರು ದುಷ್ಟನೆಂದು ಖಂಡಿಸುತ್ತಾರೆ.
3 No one is established by wickedness, but the root of the righteous will never be moved. ಒಬ್ಬ ಮನುಷ್ಯನು ದುಷ್ಟತನದಿಂದ ಸ್ಥಿರವಾಗುವುದಿಲ್ಲ. ಆದರೆ ನೀತಿವಂತರನ್ನು ಕಿತ್ತುಹಾಕಲಾಗುವುದಿಲ್ಲ.
4 A wife of noble character is her husband's crown, but one who brings shame is like decay in his bones. ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು.
5 The plans of the righteous are just, but the advice of the wicked is deceitful. ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.
6 The words of the wicked lie in wait for blood, but the speech of the upright rescues the innocent. ದುಷ್ಟರ ಮಾತುಗಳು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಅವರನ್ನು ಬಿಡಿಸುವುದು.
7 The wicked are overthrown and are no more, but the house of the righteous will stand. ದುಷ್ಟರು ನೆಲಕ್ಕುರುಳಿ ನಿರ್ಮೂಲರಾಗುವರು, ಆದರೆ ನೀತಿವಂತರ ಮನೆಯು ಸ್ಥಿರವಾಗಿ ನಿಲ್ಲುವುದು.
8 A person is praised according to their good sense, but one with a warped mind is despised. ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು.
9 Better to be lowly and have a servant than to pretend to greatness and go hungry. ಹೊಟ್ಟೆಗೆ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸಾಮಾನ್ಯ ಸೇವಕನೇ ಮೇಲು.
10 The righteous care for the needs of their animals, but even the mercy of the wicked is cruel. ನೀತಿವಂತನು ತನ್ನ ಪ್ರಾಣಿಗಳಿಗೂ ಕಾಳಜಿ ತೋರುವನು; ಆದರೆ ದುಷ್ಟರ ಕರುಣೆಯ ಕಾರ್ಯಗಳು ಕ್ರೂರತನವೇ.
11 Whoever works their land will have plenty of food, but whoever chases worthless pursuits lacks sense. ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು, ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನು ವಿವೇಕಶೂನ್ಯನು.
12 The wicked crave the plunder of evil men, but the root of the righteous yields fruit. ದುಷ್ಟರು ಕೆಟ್ಟವರ ಭದ್ರಕೋಟೆಯನ್ನು ಅಪೇಕ್ಷಿಸುತ್ತಾರೆ; ಆದರೆ ನೀತಿವಂತರ ಬೇರು ಫಲವನ್ನು ಕೊಡುತ್ತದೆ.
13 An evil man is trapped by his sinful talk, but the righteous escapes from trouble. ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು, ಆದರೆ ನೀತಿವಂತರು ಇಕ್ಕಟ್ಟಿನೊಳಗಿಂದ ತಪ್ಪಿಸಿಕೊಳ್ಳುವರು.
14 From the fruit of their words a person is filled with good things, and the work of their hands comes back to reward them. ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದರಿಂದ ತೃಪ್ತನಾಗುವನು, ಮನುಷ್ಯನ ಕೈಕೆಲಸಗಳು ಅವನಿಗೆ ಪ್ರತಿಫಲವನ್ನು ಕೊಡುವುವು.
15 The way of a fool seems right in his own eyes, but the wise listen to advice. ಮೂರ್ಖನ ಮಾರ್ಗವು ತನ್ನ ಕಣ್ಣುಗಳಿಗೆ ಸರಿಯಾಗಿದೆ, ಆದರೆ ಜ್ಞಾನಿಯು ಸಲಹೆಗೆ ಕಿವಿಗೊಡುವನು.
16 A fool shows his anger at once, but the prudent overlook an insult. ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು, ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ.
17 Whoever speaks the truth gives honest testimony, but a false witness tells lies. ಒಬ್ಬ ಪ್ರಾಮಾಣಿಕ ಸಾಕ್ಷಿ ಸತ್ಯವನ್ನು ಹೇಳುತ್ತಾನೆ, ಆದರೆ ಸುಳ್ಳುಸಾಕ್ಷಿಯು ಸುಳ್ಳನ್ನು ಹೇಳುತ್ತಾನೆ.
18 Reckless words pierce like a sword, but the tongue of the wise brings healing. ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ, ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.
19 Truthful lips endure forever, but a lying tongue lasts only a moment. ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು, ಸುಳ್ಳಾಡುವ ನಾಲಿಗೆಯು ಕ್ಷಣಿಕ.
20 Deceit fills the hearts of those who plot evil, but joy belongs to those who promote peace. ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
21 No harm overtakes the righteous, but the wicked are full of trouble. ನೀತಿವಂತನಿಗೆ ಯಾವ ಕೇಡೂ ಸಂಭವಿಸದು, ಆದರೆ ದುಷ್ಟರು ಕೇಡಿನಿಂದ ತುಂಬಿಕೊಳ್ಳುವರು.
22 Lying lips are detestable to our Father, but those who act faithfully are his delight. ಸುಳ್ಳಾಡುವ ತುಟಿಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಆದರೆ ಸತ್ಯವಂತರಲ್ಲಿ ಅವರು ಆನಂದಿಸುತ್ತಾರೆ.
23 The prudent keep their knowledge to themselves, but the heart of fools blurts out foolishness. ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುತ್ತಾನೆ; ಆದರೆ ಮೂರ್ಖನ ಹೃದಯವು ಮೂರ್ಖತನವನ್ನು ಹೇಳುತ್ತದೆ.
24 Diligent hands will rule, but laziness ends in forced labor. ಚುರುಕು ಕೈಯುಳ್ಳವನು ಆಳುವನು; ಸೋಮಾರಿಗಳು ಗುಲಾಮರಾಗುವರು.
25 Anxiety weighs down the heart, but a kind word cheers it up. ಆತಂಕವು ಹೃದಯವನ್ನು ಕುಗ್ಗಿಸುವುದು, ಆದರೆ ಕನಿಕರದ ಮಾತು ಹುರಿದುಂಬಿಸುವುದು.
26 The righteous guide their neighbor, but the way of the wicked leads them astray. ನೀತಿವಂತರು ತಮ್ಮ ಸ್ನೇಹಿತರನ್ನು ಎಚ್ಚರಿಕೆಯಿಂದ ಆರಿಸುತ್ತಾರೆ, ಆದರೆ ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆಯುತ್ತದೆ.
27 The lazy do not roast their game, but the diligent prize their possessions. ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವುದಿಲ್ಲ, ಆದರೆ ಶ್ರಮಪಡುವವರು ಅದನ್ನು ತೃಪ್ತಿಯಿಂದ ತಿನ್ನುತ್ತಾರೆ.
28 In the path of righteousness there is life, and along that way there is no death. ನೀತಿಯ ಮಾರ್ಗದಲ್ಲಿ ಜೀವವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]