Skip to content
The Believer's Library

Biblica® Open Kannada Contemporary Version 2022

Proverbs 13 OKCV

Show OKCV only
Verse × ×
1 A wise son heeds his father's instruction, but a scoffer does not listen to rebuke. ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.
2 From the fruit of his mouth a person enjoys good things, but the appetite of the treacherous is for violence. ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ, ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ.
3 Whoever guards his mouth protects his life, but one who opens his lips wide comes to ruin. ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.
4 The lazy person craves and gets nothing, but the appetite of the diligent is richly satisfied. ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.
5 The righteous hates falsehood, but the wicked brings shame and disgrace. ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ, ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ.
6 Righteousness guards the one whose way is blameless, but wickedness overthrows the sinner. ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ; ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ.
7 One person pretends to be rich, yet has nothing; another pretends to be poor, yet has great wealth. ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ.
8 A person's wealth may ransom his life, but the poor hears no threat. ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ.
9 The light of the righteous shines joyfully, but the lamp of the wicked will be snuffed out. ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; ದುಷ್ಟರ ದೀಪವು ಆರಿಹೋಗುವುದು.
10 Arrogance breeds nothing but strife, but wisdom is with those who seek advice. ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.
11 Wealth gained by fraud dwindles away, but whoever gathers little by little makes it grow. ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.
12 Hope deferred makes the heart sick, but desire fulfilled is a tree of life. ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.
13 Whoever despises the word brings ruin on himself, but the one who reveres the commandment will be rewarded. ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
14 The teaching of the wise is a fountain of life, turning a person away from the snares of death. ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ.
15 Good sense wins favor, but the way of the treacherous is their undoing. ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ.
16 Every prudent person acts with knowledge, but a fool flaunts his foolishness. ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.
17 A wicked messenger falls into trouble, but a faithful envoy brings healing. ದುಷ್ಟ ದೂತನು ಕೇಡಿಗೆ ಬೀಳುತ್ತಾನೆ; ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು.
18 Poverty and shame come to whoever ignores discipline, but the one who heeds correction is honored. ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು.
19 A desire fulfilled is sweet to the soul, but turning away from evil is detestable to fools. ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ; ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ.
20 Whoever walks with the wise grows wise, but the companion of fools suffers harm. ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.
21 Disaster pursues sinners, but good rewards the righteous. ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು.
22 A good person leaves an inheritance to his grandchildren, but the sinner's wealth is stored up for the righteous. ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.
23 The unplowed field of the poor could yield abundant food, but it is swept away for lack of justice. ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; ಅನ್ಯಾಯವು ಅದನ್ನು ಹಾರಿಸಿಬಿಡುವುದು.
24 Whoever withholds the rod hates his son, but the one who loves him is diligent to discipline him. ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.
25 The righteous eats to his heart's content, but the belly of the wicked goes hungry. ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]