Skip to content
The Believer's Library

Biblica® Open Kannada Contemporary Version 2022

Proverbs 16 OKCV

Show OKCV only
Verse × ×
1 The plans of the heart belong to man, but the answer of the tongue comes from our Father. ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು, ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು.
2 All a man's ways are pure in his own eyes, but our Father weighs the motives. ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ, ಆದರೆ ಯೆಹೋವ ದೇವರು ಅವನ ಉದ್ದೇಶಗಳನ್ನು ಪರೀಕ್ಷಿಸುತ್ತಾರೆ.
3 Commit your works to our Father, and your plans will be established. ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು, ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.
4 Our Father has made everything for its purpose, even the wicked for the day of trouble. ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.
5 Everyone proud of heart is detestable to our Father; be assured, he will not go unpunished. ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.
6 Loving devotion and faithfulness atone for sin, and the fear of our Father turns a person away from evil. ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
7 When a man's ways please our Father, our Father makes even the man's enemies live at peace with him. ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.
8 Better a little with righteousness than great income with injustice. ಅನ್ಯಾಯದ ದೊಡ್ಡ ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
9 The heart of man plans his way, but our Father establishes his steps. ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.
10 A divine verdict is on the lips of a king; his mouth does not betray justice. ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ.
11 Honest scales and balances belong to our Father; every weight and measure is his work. ನ್ಯಾಯದ ತೂಕವೂ ತಕ್ಕಡಿಯೂ ಯೆಹೋವ ದೇವರದೇ. ಚೀಲದ ತೂಕಗಳು ಅವರ ಕೈಕೆಲಸವೇ.
12 It is detestable for kings to do wickedness, for a throne is established through righteousness. ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು. ಏಕೆಂದರೆ ನೀತಿಯಿಂದ ಸಿಂಹಾಸನವು ಸ್ಥಾಪಿಸಲಾಗುತ್ತದೆ.
13 Righteous lips are the delight of kings, and they love the one who speaks what is right. ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ.
14 A king's wrath is a messenger of death, but a wise man will appease it. ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.
15 In the light of a king's face is life, and his favor is like a cloud bringing the spring rain. ಪ್ರಕಾಶಮಾನವಾದ ಅರಸನ ಮುಖದಲ್ಲಿ ಜೀವ, ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
16 How much better to get wisdom than gold! Getting understanding is worth more than silver. ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.
17 The highway of the upright turns away from evil; whoever guards his way protects his life. ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ. ತನ್ನ ಮಾರ್ಗವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.
18 Pride goes before destruction, and a haughty spirit before a fall. ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.
19 Better to be lowly in spirit among the poor than to share the plunder with the proud. ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳುವದಕ್ಕಿಂತ, ದೀನರೊಂದಿಗೆ ದೀನ ಆತ್ಮವುಳ್ಳವರಾಗಿ ಇರುವುದು ಉತ್ತಮ.
20 Whoever heeds the word will find good, and blessed is the one who trusts in our Father. ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು. ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು.
21 The wise of heart is called discerning, and pleasant speech increases persuasiveness. ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು.
22 Understanding is a fountain of life to the one who has it, but fools are corrected by their own foolishness. ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ.
23 The heart of the wise makes his speech wise and adds persuasiveness to his lips. ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.
24 Pleasant words are a honeycomb, sweet to the soul and healing to the bones. ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ, ಎಲುಬುಗಳಿಗೆ ಕ್ಷೇಮವೂ ಆಗಿವೆ.
25 There is a way that seems right to a man, but its end is the way of death. ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ.
26 A worker's appetite works for him; his hunger drives him on. ದುಡಿಯುವವನಿಗೆ ಅವನ ಹಸಿವೇ ದುಡಿಯುವಂತೆ ಮಾಡುವುದು, ಅವನ ಹಸಿವು ಅವನನ್ನು ಒತ್ತಾಯ ಮಾಡುವುದು.
27 A worthless man digs up evil, and on his lips is a scorching fire. ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ. ಅವನ ತುಟಿಗಳು ಉರಿಯುವ ಬೆಂಕಿಯಂತಿವೆ.
28 A perverse man spreads strife, and a gossip separates close friends. ಮೂರ್ಖನು ಜಗಳವನ್ನು ಬಿತ್ತುತ್ತಾನೆ. ಚಾಡಿಕೋರನು ಪ್ರಮುಖ ಸ್ನೇಹಿತರನ್ನು ಅಗಲಿಸುತ್ತಾನೆ.
29 A violent man entices his neighbor and leads him down a harmful path. ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುತ್ತಾನೆ.
30 Whoever winks his eyes plots perversity; whoever purses his lips is bent on evil. ವಕ್ರಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ. ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
31 Gray hair is a crown of glory; it is gained in the way of righteousness. ನರೆಗೂದಲು ಉಜ್ವಲ ಕಿರೀಟ, ಅದು ನೀತಿಯ ಜೀವಿತದಲ್ಲಿ ಒದಗುತ್ತದೆ.
32 Better a patient person than a mighty one, and one who rules his spirit than one who takes a city. ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.
33 The lot is cast into the lap, but its every decision is from our Father. ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]