Skip to content
The Believer's Library

Biblica® Open Kannada Contemporary Version 2022

Proverbs 17 OKCV

Show OKCV only
Verse × ×
1 Better a dry crust eaten in peace than a house full of feasting with strife. ವಿವಾದದೊಂದಿಗೆ ತುಂಬಿದ ಔತಣದ ಮನೆಗಿಂತ, ಶಾಂತಿ ಸಮಾಧಾನದ ಒಣ ತುತ್ತು ಮೇಲು.
2 A prudent servant will rule over a disgraceful son and will share the inheritance among the brothers. ನಾಚಿಕೆಪಡಿಸುವ ಮಗನ ಮೇಲೆ ಜಾಣನಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
3 The crucible is for silver and the furnace for gold, but our Father tests hearts. ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.
4 An evildoer listens to wicked lips; a liar listens to a destructive tongue. ಕೇಡು ಮಾಡುವವನು ಕೆಟ್ಟ ಮಾತುಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು.
5 Whoever mocks the poor insults his Maker; whoever gloats over disaster will not go unpunished. ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.
6 Grandchildren are the crown of the aged, and the glory of children is their parents. ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆತಾಯಿಗಳೇ.
7 Fine speech is not fitting for a fool—still less are lying lips for a noble. ಉತ್ತಮವಾದ ಪದಗಳು ಮೂರ್ಖನಿಗೆ ಸೂಕ್ತವಲ್ಲ; ಆಳುವವನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಆಯುಕ್ತವಲ್ಲವೇ.
8 A bribe seems like a magic charm to the one who gives it; wherever he turns, he thinks he will succeed. ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.
9 Whoever covers an offense seeks love, but whoever keeps bringing it up separates close friends. ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ; ಆದರೆ ದೋಷವನ್ನು ಎತ್ತಿ ಆಡುವವನು ಸ್ನೇಹಿತರಿಂದ ಪ್ರತ್ಯೇಕಗೊಳ್ಳುತ್ತಾನೆ.
10 A rebuke goes deeper into a person of understanding than one hundred blows into a fool. ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟುತ್ತದೆ.
11 A rebellious man seeks only evil, and a cruel messenger will be sent against him. ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು.
12 Better to meet a bear robbed of her cubs than a fool in his foolishness. ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು.
13 If anyone returns evil for good, evil will never leave his house. ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ.
14 Starting a quarrel is like breaching a dam, so drop the dispute before it bursts out. ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
15 Whoever justifies the wicked and whoever condemns the righteous—both alike are detestable to our Father. ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ.
16 Why should a fool have money in hand to buy wisdom, when he has no heart to learn? ಜ್ಞಾನವನ್ನು ಸಂಪಾದಿಸುವುದಕ್ಕೆ ಬುದ್ಧಿಹೀನನ ಕೈಯಲ್ಲಿ ಹಣ ಏಕೆ? ಅವನಿಗೆ ಕಲಿಯಲು ಮನಸ್ಸಿಲ್ಲವಲ್ಲ.
17 A friend loves at all times, and a brother is born for a time of trouble. ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ; ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.
18 One who lacks sense shakes hands on a pledge and puts up security for his neighbor. ಬುದ್ಧಿಹೀನನು ಕೈ ಕುಲುಕಿ ತನ್ನ ನೆರೆಯವನಿಗೆ ಜಾಮಿನನಾಗುತ್ತಾನೆ.
19 Whoever loves wrongdoing loves strife; whoever builds his gate high invites destruction. ಕಲಹವನ್ನು ಪ್ರೀತಿಮಾಡುವವನು ಪಾಪವನ್ನು ಪ್ರೀತಿಮಾಡುತ್ತಾನೆ; ತನ್ನ ಗೋಡೆಯನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಆಮಂತ್ರಿಸುತ್ತಾನೆ.
20 A crooked heart finds no good, and a twisted tongue falls into trouble. ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ; ಮೋಸದ ನಾಲಿಗೆಯುಳ್ಳವನು ಹಾನಿಗೆ ಬೀಳುವನು.
21 Whoever fathers a fool brings grief on himself; the father of a godless fool has no joy. ಬುದ್ಧಿಹೀನ ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವುದಿಲ್ಲ.
22 A joyful heart is good medicine, but a crushed spirit dries up the bones. ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
23 A wicked man takes a bribe in secret to pervert the ways of justice. ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ.
24 A discerning person keeps wisdom in view, but the eyes of a fool wander to the ends of the earth. ವಿವೇಕಿಯು ಜ್ಞಾನವನ್ನು ತನ್ನ ಮುಂದೆ ಇಟ್ಟುಕೊಳ್ಳುತ್ತಾನೆ. ಆದರೆ ಬುದ್ಧಿಹೀನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಅಲೆಯುವವು.
25 A foolish son is a grief to his father and bitterness to the mother who bore him. ಬುದ್ಧಿಹೀನನಾದ ಮಗನು ತನ್ನ ತಂದೆಗೆ ದುಃಖವೂ, ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
26 To punish the righteous is not good, nor to flog the noble for their integrity. ನೀತಿವಂತನಿಗೆ ದಂಡ ವಿಧಿಸುವುದು ಒಳ್ಳೆಯದಲ್ಲದಿದ್ದರೆ, ಖಂಡಿತವಾಗಿಯೂ ಪ್ರಾಮಾಣಿಕ ಅಧಿಕಾರಿಗಳನ್ನು ಹೊಡೆಯುವುದು ಸರಿಯಲ್ಲ.
27 Whoever holds back his words has knowledge, and one with a calm spirit is a person of understanding. ಪರಿಜ್ಞಾನ ಹೊಂದಿರುವವನು ಮಿತವಾಗಿ ಮಾತನಾಡುತ್ತಾನೆ; ತಿಳುವಳಿಕೆಯನ್ನು ಹೊಂದಿರುವವನು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.
28 Even a fool who keeps silent is thought wise; when he closes his lips, he seems discerning. ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿ ಎನಿಸಿಕೊಳ್ಳುವನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]