Skip to content
The Believer's Library

Biblica® Open Kannada Contemporary Version 2022

Proverbs 18 OKCV

Show OKCV only
Verse × ×
1 Whoever isolates himself pursues his own desire; he lashes out against all sound wisdom. ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.
2 A fool takes no pleasure in understanding, but only in airing his own opinions. ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ.
3 When wickedness comes, contempt comes too, and with dishonor comes reproach. ದುಷ್ಟತ್ವವು ಬಂದಾಗ ತಾತ್ಸಾರವೂ, ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
4 The words of a person's mouth are deep waters; the fountain of wisdom is a flowing stream. ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ, ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
5 It is not good to show partiality to the wicked, denying justice to the righteous. ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ.
6 A fool's lips bring strife, and his mouth invites a beating. ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
7 A fool's mouth is his ruin, and his lips are a snare to his soul. ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.
8 The words of a gossip are like choice morsels; they go down into the inmost being. ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.
9 Whoever is slack in his work is brother to one who destroys. ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು, ಕೆಡುಕನಿಗೆ ಸಹೋದರನಾಗಿದ್ದಾನೆ.
10 The name of our Father is a strong tower; the righteous runs into it and is safe. ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.
11 A rich man's wealth is his fortified city; in his imagination it is like a high wall. ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ.
12 Before destruction the human heart is proud, but humility comes before honor. ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.
13 If one answers before he listens, it is his foolishness and his shame. ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ.
14 A person's spirit can sustain him through sickness, but a crushed spirit—who can bear it? ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?
15 The discerning heart acquires knowledge, and the ear of the wise seeks it out. ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.
16 A person's gift opens the way for him and brings him before important people. ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.
17 The first to state his case seems right, until another comes and examines him. ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ.
18 Casting the lot settles disputes and separates strong opponents. ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.
19 An offended brother is harder to win than a fortified city, and disputes are like the bars of a fortress. ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ.
20 From the fruit of a person's mouth his stomach is satisfied; with the yield of his lips he is filled. ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು; ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು.
21 Death and life are in the power of the tongue, and those who love it will eat its fruit. ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
22 He who finds a wife finds what is good and receives favor from our Father. ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.
23 The poor person pleads for mercy, but the rich answers harshly. ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.
24 A man of many companions may come to ruin, but there is a friend who sticks closer than a brother. ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]