Skip to content
The Believer's Library

Biblica® Open Kannada Contemporary Version 2022

Proverbs 19 OKCV

Show OKCV only
Verse × ×
1 Better is a poor person who walks in his integrity than one whose words are crooked and is a fool. ಬುದ್ಧಿಹೀನನ ವಕ್ರ ತುಟಿಗಳಿಗಿಂತ, ನಿರ್ದೋಷವಾಗಿ ನಡೆಯುವ ಬಡವನು ಉತ್ತಮ.
2 Also, desire without knowledge is not good, and whoever acts in haste misses the way. ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು.
3 A person's own foolishness ruins his way, yet his heart rages against our Father. ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
4 Wealth adds many friends, but the poor is separated from his friend. ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ; ಆದರೆ ಬಡವನು ತನ್ನ ಆಪ್ತಸ್ನೇಹಿತನಿಂದ ದೂರವಾಗುತ್ತಾನೆ.
5 A false witness will not go unpunished, and one who breathes out lies will not escape. ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.
6 Many seek the favor of a generous person, and everyone is a friend to one who gives gifts. ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
7 All the brothers of a poor person hate him; how much more do his friends keep far from him! He calls after them, but they are gone. ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ ಅವನಿಗೆ ಏನೂ ದೊರಕದು.
8 Whoever gets wisdom loves his own soul; whoever guards understanding will find good. ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ.
9 A false witness will not go unpunished, and one who breathes out lies will perish. ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು.
10 Luxury is not fitting for a fool—much less for a servant to rule over princes. ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ.
11 The good sense of a person makes him slow to anger, and it is his glory to overlook an offense. ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ.
12 A king's wrath is like the roaring of a lion, but his favor is like dew on the grass. ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
13 A foolish son is ruin to his father, and a wife's quarreling is a continual dripping. ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; ಜಗಳವಾಡುವ ಹೆಂಡತಿ ಯಾವಾಗಲೂ ತೊಟ್ಟಿಕ್ಕುವ ಹನಿ.
14 House and wealth are an inheritance from one's ancestors, but a prudent wife is from our Father. ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.
15 Laziness casts into deep sleep, and an idle person will go hungry. ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.
16 Whoever keeps the commandment keeps his life; whoever despises his ways will die. ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ, ಆದರೆ ಅವುಗಳನ್ನು ಅಸಡ್ಡೆ ಮಾಡುವವನು ಸಾಯುವನು.
17 Whoever is generous to the poor lends to our Father, and our Father will repay him for his deed. ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.
18 Discipline your son while there is hope, and do not set your heart on his destruction. ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಮರಣಕ್ಕೆ ನೀನು ಕಾರಣನಾಗಬೇಡ.
19 A person of great wrath must pay the penalty; for if you rescue him, you will only have to do it again. ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು.
20 Listen to counsel and accept discipline, that you may gain wisdom in the days to come. ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.
21 Many are the plans in a person's heart, but it is the counsel of our Father that will stand. ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.
22 What is desired in a person is covenant love, and a poor person is better than a liar. ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. ಬಡವನು ಸುಳ್ಳುಗಾರನಿಗಿಂತ ಲೇಸು.
23 The fear of our Father leads to life, and whoever has it rests satisfied, untouched by harm. ಯೆಹೋವ ದೇವರ ಭಯವು ಜೀವದಾಯಕವು; ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ.
24 The sluggard buries his hand in the dish and will not even bring it back to his mouth. ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!
25 Strike a mocker, and the simple will learn prudence; reprove a person of understanding, and he will gain knowledge. ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು.
26 Whoever does violence to his father and drives away his mother is a son who brings shame and disgrace. ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ.
27 Stop listening to instruction, my son, and you will stray from the words of knowledge. ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ.
28 A worthless witness mocks at justice, and the mouth of the wicked gulps down wickedness. ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು.
29 Punishment is prepared for mockers, and beatings for the backs of fools. ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]