Skip to content
The Believer's Library

Biblica® Open Kannada Contemporary Version 2022

Proverbs 2 OKCV

Show OKCV only
Verse × ×
1 My son, if you receive my words and store up my commandments within you, ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಕಾದಿರಿಸು.
2 making your ear attentive to wisdom and turning your heart toward understanding; ನೀನು ಜ್ಞಾನಕ್ಕೆ ಕಿವಿಗೊಟ್ಟು, ತಿಳುವಳಿಕೆಗೆ ನಿನ್ನ ಹೃದಯವನ್ನು ತಿರುಗಿಸು,
3 yes, if you call out for insight and raise your voice for understanding, ಹೌದು, ನೀನು ಒಳನೋಟಕ್ಕಾಗಿ ಮೊರೆಯಿಟ್ಟು, ತಿಳುವಳಿಕೆಗಾಗಿ ನಿನ್ನ ಸ್ವರವೆತ್ತಿ,
4 if you seek it like silver and search for it as for hidden treasure, ಬೆಳ್ಳಿಯಂತೆ ನೀನು ಅದನ್ನು ಹಂಬಲಿಸಿದರೆ, ನಿಗೂಢ ನಿಕ್ಷೇಪದಂತೆ ನೀನು ಅದಕ್ಕಾಗಿ ಹುಡುಕಿದರೆ,
5 then you will understand the fear of our Father and find the knowledge of our Father. ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ತಿಳಿದುಕೊಳ್ಳುವೆ; ದೇವರ ಅರಿವನ್ನು ಕಂಡುಕೊಳ್ಳುವೆ.
6 For our Father gives wisdom; from his mouth come knowledge and understanding. ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.
7 He stores up sound wisdom for the upright; he is a shield to those who walk in integrity, ನೀತಿವಂತರಿಗೋಸ್ಕರ ದೇವರು ಸುಜ್ಞಾನವನ್ನು ಕೂಡಿಸಿಡುವರು, ನಿರ್ದೋಷಿಯಾಗಿ ನಡೆದುಕೊಳ್ಳುವವರಿಗೆ ದೇವರು ಗುರಾಣಿಯಾಗಿದ್ದಾರೆ.
8 guarding the paths of justice and watching over the way of his faithful ones. ನ್ಯಾಯವಂತರ ದಾರಿಗಳನ್ನು ದೇವರು ಕಾಯುತ್ತಾರೆ; ತಮ್ಮ ನಂಬಿಗಸ್ತರ ಮಾರ್ಗವನ್ನು ಭದ್ರಪಡಿಸುತ್ತಾರೆ.
9 Then you will understand righteousness and justice and fairness—every good path. ಆಗ ನೀನು ಸರಿಯಾದದ್ದನ್ನೂ ನ್ಯಾಯವನ್ನೂ ಯುಕ್ತವಾದದ್ದನ್ನು ಅರ್ಥಮಾಡಿಕೊಳ್ಳುವೆ, ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದುಕೊಳ್ಳುವೆ.
10 For wisdom will enter your heart, and knowledge will be pleasant to your soul; ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿಸಿ, ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಹಿತಕರವಾಗಿರುವುದು.
11 discretion will watch over you, and understanding will guard you, ನಿನ್ನ ವಿವೇಚನೆಯು ನಿನ್ನನ್ನು ಭದ್ರವಾಗಿ ಕಾಯುವುದು; ತಿಳುವಳಿಕೆಯು ನಿನ್ನನ್ನು ಕಾಪಾಡುವುದು.
12 rescuing you from the way of evil, from men who speak twisted things, ಜ್ಞಾನವು ದುಷ್ಟರ ಮಾರ್ಗಗಳಿಂದಲೂ, ವಕ್ರರ ಮಾತುಗಳಿಂದಲೂ ಕಾಪಾಡುವುದು.
13 who abandon the paths of uprightness to walk in the ways of darkness, ಅವರು ಕತ್ತಲೆಯ ಹಾದಿಗಳಲ್ಲಿ ನಡೆಯುವುದಕ್ಕೆ ನೇರವಾದ ದಾರಿಗಳನ್ನು ತೊರೆದುಬಿಡುತ್ತಾರೆ.
14 who delight in doing evil and rejoice in the perversity of evil, ಅವರು ಕೆಟ್ಟದ್ದನ್ನು ಮಾಡುವುದಕ್ಕೆ ಸಂತೋಷಿಸುತ್ತಾರೆ. ಕೇಡಿನ ವಕ್ರತನದಲ್ಲಿ ಆನಂದಿಸುತ್ತಾರೆ.
15 whose paths are crooked, and who are devious in their ways. ಅವರ ಮಾರ್ಗಗಳು ವಕ್ರವಾಗಿವೆ; ತಮ್ಮ ನಡತೆಗಳಲ್ಲಿ ಅವರು ತಪ್ಪಿಹೋಗಿದ್ದಾರೆ.
16 Wisdom will rescue you also from the forbidden woman, from the stranger with her smooth words, ಜಾರಿಣಿಯಿಂದಲೂ ದಾರಿತಪ್ಪಿದ ಪರಸ್ತ್ರೀಯ ವಶೀಕರಣದ ಮಾತುಗಳಿಂದಲೂ ಜ್ಞಾನವು ನಿನ್ನನ್ನು ರಕ್ಷಿಸುವುದು.
17 who forsakes the companion of her youth and forgets the covenant of her Father. ಅವಳು ತನ್ನ ಯೌವನ ಕಾಲದ ಪತಿಯನ್ನು ತ್ಯಜಿಸಿದ್ದಾಳೆ, ದೇವರ ಸನ್ನಿಧಿಯಲ್ಲಿ ಮಾಡಿಕೊಂಡ ಒಡಂಬಡಿಕೆಯನ್ನೂ ಕಡೆಗಣಿಸಿದ್ದಾಳೆ.
18 For her house sinks down to death, and her paths to the dead. ಏಕೆಂದರೆ ಅವಳ ಮನೆ ಮರಣ ಮಾರ್ಗ. ಅವಳ ದಾರಿ ಮೃತರ ಕಡೆಗೂ ನಡೆಸುತ್ತವೆ.
19 None who go to her return, nor do they reach the paths of life. ಅವಳ ಬಳಿಗೆ ಹೋಗುವ ಯಾವನೂ ಹಿಂದಿರುಗುವುದಿಲ್ಲ; ಜೀವಮಾರ್ಗಗಳನ್ನು ಅಂಥವರು ಹಿಡಿಯುವುದೇ ಇಲ್ಲ.
20 So you will walk in the way of the good and keep to the paths of the righteous. ಆದ್ದರಿಂದ ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯುವೆ ನೀತಿವಂತರ ದಾರಿಯನ್ನು ನೀನು ಹಿಡಿಯುವೆ.
21 For the upright will live in the land, and those of integrity will remain in it; ಏಕೆಂದರೆ ಪ್ರಾಮಾಣಿಕರು ದೇಶದಲ್ಲಿ ವಾಸಿಸುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿ ಇರುವರು.
22 but the wicked will be cut off from the land, and the treacherous will be torn away from it. ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು; ದ್ರೋಹಿಗಳು ಬೇರುಸಹಿತವಾಗಿ ಕಿತ್ತುಹಾಕಲಾಗುವರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]