Skip to content
The Believer's Library

Biblica® Open Kannada Contemporary Version 2022

Proverbs 20 OKCV

Show OKCV only
Verse × ×
1 Wine is a mocker, strong drink a brawler, and whoever staggers under it is not wise. ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.
2 The terror of a king is like the growl of a lion; whoever provokes him to anger forfeits his own life. ಅರಸನ ಭಯವು ಸಿಂಹದ ಘರ್ಜನೆಯಂತಿದೆ; ಅವನ ಕೋಪವನ್ನೆಬ್ಬಿಸುವವರು, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವರು.
3 It is an honor for a person to keep clear of strife, but every fool is quick to quarrel. ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.
4 A lazy person will not plow in autumn; so at harvest he looks for a crop and finds nothing. ಮೈಗಳ್ಳನು ಮಳೆಗಾಲದಲ್ಲಿ ಉಳುಮೆ ಮಾಡುವುದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಅಪೇಕ್ಷಿಸಿದರೂ ಏನೂ ಸಿಕ್ಕುವುದಿಲ್ಲ.
5 The purposes of a person's heart are deep waters, but one who has understanding draws them out. ಮನುಷ್ಯನ ಹೃದಯದ ಆಲೋಚನೆಯು ಆಳವಾದ ಬಾವಿಯ ನೀರಿನಂತಿದೆ; ವಿವೇಕಿಯು ಅದನ್ನು ಸೇದುವನು.
6 Many a person proclaims his own loyal love, but a faithful one—who can find? ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
7 The righteous walk in their integrity; blessed are their children after them! ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು.
8 A king seated on the throne of judgment winnows out all evil with his eyes. ಅರಸನು ತನ್ನ ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವಾಗ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
9 Who can say, "I have kept my heart pure; I am cleansed from my sin"? “ನನ್ನ ಹೃದಯವನ್ನು ಶುದ್ಧವಾಗಿ ಇಟ್ಟುಕೊಂಡಿದ್ದೇನೆ. ನಾನು ಶುದ್ಧನೂ ಪಾಪರಹಿತನೂ,” ಎಂದು ಯಾರು ಹೇಳಬಲ್ಲರು?
10 Unequal weights and unequal measures—our Father detests them both. ಮೋಸದ ತೂಕಗಳೂ, ಮೋಸದ ಅಳತೆಗಳೂ ಇವೆರಡೂ ಯೆಹೋವ ದೇವರಿಗೆ ಅಸಹ್ಯ.
11 Even a child is known by his actions, by whether his conduct is pure and upright. ಚಿಕ್ಕ ಮಕ್ಕಳಾದರೋ ತಮ್ಮ ಕ್ರಿಯೆಗಳಿಂದಲೇ, ತಾವು ಶುದ್ಧರೋ ಯಥಾರ್ಥರೋ ಎಂಬುದನ್ನು ತೋರ್ಪಡಿಸಿಕೊಳ್ಳುತ್ತಾರೆ.
12 The hearing ear and the seeing eye—our Father made them both. ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಯೆಹೋವ ದೇವರು ಉಂಟುಮಾಡಿದ್ದಾನೆ.
13 Do not love sleep, or you will grow poor; open your eyes, and you will have plenty of bread. ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!
14 "Worthless, worthless!" says the buyer—then off he goes and boasts of his bargain. “ಇದು ಒಳ್ಳೆಯದಲ್ಲ ಇದು ಒಳ್ಳೆಯದಲ್ಲ!” ಎಂದು ಕೊಳ್ಳುವವನು ಹೇಳುತ್ತಾನೆ; ಆದರೆ ಅವನು ಕೊಂಡು ಹೋದ ಮೇಲೆ ಅದನ್ನೇ ಹೊಗಳುತ್ತಾನೆ.
15 There is gold and an abundance of jewels, but lips that speak knowledge are a rare treasure. ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ.
16 Take the garment of one who puts up security for a stranger; hold it as a pledge when he does so for foreigners. ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.
17 Bread gained by deceit tastes sweet, but afterward the mouth is full of gravel. ವಂಚನೆಯಿಂದ ಸಿಕ್ಕಿದ ಆಹಾರವು ರುಚಿ; ಆದರೆ ಆಮೇಲೆ ಅವನ ಬಾಯಿಯು ಮರಳಿನಿಂದ ತುಂಬುವುದು.
18 Plans are established by counsel; so wage war only with wise guidance. ಸಲಹೆಯಿಂದ ಯೋಜನೆಗಳು ನೆರವೆರುವವು; ಜ್ಞಾನಿಯ ಸಲಹೆಯಿಲ್ಲದೆ ಯುದ್ಧಕ್ಕೆ ಹೋಗಬೇಡಿ.
19 A gossip betrays a confidence; so do not keep company with a babbler. ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ.
20 Whoever curses his father or mother—his lamp will be snuffed out in deepest darkness. ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.
21 An inheritance gained too quickly at the start will not be blessed in the end. ಪ್ರಾರಂಭದಲ್ಲಿ ತ್ವರೆಯಾಗಿ ಪಡೆದುಕೊಂಡ ಆಸ್ತಿಯೂ ಅಂತ್ಯದಲ್ಲಿ ಆಶೀರ್ವಾದವಾಗಿರುವುದಿಲ್ಲ.
22 Do not say, "I will pay back evil for evil." Wait for our Father, and he will deliver you. ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.
23 Our Father detests unequal weights, and dishonest scales are no good. ವ್ಯತ್ಯಾಸದ ತೂಕಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಅಪ್ರಾಮಾಣಿಕ ತಕ್ಕಡಿಗಳು ಅವರನ್ನು ಮೆಚ್ಚಿಸುವುದಿಲ್ಲ.
24 A person's steps are directed by our Father; how then can anyone understand his own way? ಮನುಷ್ಯನ ಹೆಜ್ಜೆಗಳನ್ನು ಯೆಹೋವ ದೇವರು ನಿರ್ದೇಶಿಸುತ್ತಾರೆ. ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಳ್ಳಬಲ್ಲನು?
25 It is a trap to rashly dedicate something and only later reconsider the vow. ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.
26 A wise king winnows out the wicked and drives the threshing wheel over them. ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು.
27 The human spirit is the lamp of our Father, searching every inmost part. ಮನುಷ್ಯನ ಆತ್ಮವು ಯೆಹೋವ ದೇವರ ದೀಪವಾಗಿದೆ. ಅದು ಅವನ ಅಂತರಂಗವನ್ನು ಶೋಧಿಸುತ್ತದೆ.
28 Loyal love and faithfulness preserve a king; by loyal love his throne is upheld. ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
29 The glory of the young is their strength, but the splendor of the old is gray hair. ಯೌವನಸ್ಥರ ಮಹಿಮೆ ಅವರ ಬಲವೇ; ಮುದುಕರ ವೈಭವ ನರೆತ ತಲೆಯೇ.
30 Wounding blows scrub away evil, and beatings cleanse the inmost parts. ಗಾಯಗೊಳಿಸುವ ಏಟುಗಳು ದುಷ್ಟತ್ವವನ್ನು ತೊಳೆಯುತ್ತವೆ; ಪೆಟ್ಟುಗಳು ಅಂತರಂಗವನ್ನೂ ಶುದ್ಧಿಗೊಳಿಸುತ್ತವೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]