Skip to content
The Believer's Library

Biblica® Open Kannada Contemporary Version 2022

Proverbs 21 OKCV

Show OKCV only
Verse × ×
1 The king's heart is a stream of water in our Father's hand; he turns it wherever he pleases. ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
2 Every way of a person seems right in their own eyes, but our Father weighs the heart. ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ.
3 To do what is right and just is more pleasing to our Father than sacrifice. ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.
4 Haughty eyes and a proud heart—the lamp of the wicked—are sin. ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಇವೆಲ್ಲಾ ಪಾಪವೇ.
5 The plans of the diligent lead surely to abundance, but all who are hasty end up in poverty. ಶ್ರದ್ಧೆಯುಳ್ಳವನ ಯೋಜನೆಗಳಿಂದ ಸಮೃದ್ಧಿ; ಆತುರತೆಯು ಬಡತನಕ್ಕೆ ನಡೆಸುತ್ತದೆ.
6 Making a fortune by a lying tongue is a fleeting vapor, a deadly trap. ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು ಕ್ಷಣಿಕ ಆವಿಯಂತೆಯೂ ಮೃತ್ಯುಪಾಶದಂತೆಯೂ ಆಗಿದೆ.
7 The violence of the wicked will drag them away, because they refuse to do what is just. ದುಷ್ಟರ ಹಿಂಸೆಯು ಅವರನ್ನು ನಾಶಪಡಿಸುವುದು; ಏಕೆಂದರೆ ನ್ಯಾಯವಾದದ್ದನ್ನು ಮಾಡುವುದನ್ನು ಅವರು ನಿರಾಕರಿಸುತ್ತಾರೆ.
8 The way of the guilty is crooked, but the conduct of the pure is upright. ದೋಷಿಯ ಮಾರ್ಗವು ಡೊಂಕು, ಮುಗ್ಧನ ನಡತೆ ಯಥಾರ್ಥ.
9 Better to live in a corner of the roof than in a shared house with a quarrelsome wife. ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.
10 The soul of the wicked craves evil; their neighbor finds no mercy in their eyes. ದುಷ್ಟರು ಕೇಡನ್ನು ಅಪೇಕ್ಷಿಸುತ್ತಾರೆ; ಅವನು ತನ್ನ ನೆರೆಯವನಿಗೂ ಯಾವ ದಯೆಯನ್ನೂ ತೋರಿಸನು.
11 When a mocker is punished, the simple grow wise; when the wise are instructed, they gain knowledge. ಪರಿಹಾಸ್ಯಕಾರರನ್ನು ಶಿಕ್ಷಿಸಿದರೆ, ಮುಗ್ಧರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ, ಅವನು ಪರಿಜ್ಞಾನವನ್ನು ಹೊಂದುತ್ತಾನೆ.
12 Our Father, the Righteous One, observes the house of the wicked and brings the wicked to ruin. ನೀತಿವಂತನು ದುಷ್ಟರ ಮನೆಯನ್ನು ಗಮನಿಸುತ್ತಾನೆ; ದುಷ್ಟರನ್ನು ಕೇಡಿಗೆ ತಳ್ಳುವನು.
13 Whoever shuts their ears to the cry of the poor will also cry out and not be answered. ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.
14 A gift given in secret soothes anger, and a bribe slipped into the cloak calms strong wrath. ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು; ಮಡಿಲಲ್ಲಿ ಇಟ್ಟ ಲಂಚವು ಮಹಾ ಕೋಪವನ್ನು ಆರಿಸುವುದು.
15 When justice is done, it is a joy to the righteous but terror to those who do evil. ನ್ಯಾಯತೀರಿಸುವುದು ನೀತಿವಂತರಿಗೆ ಸಂತೋಷ; ಆದರೆ ಕೆಟ್ಟದ್ದನ್ನು ಮಾಡುವವರಿಗೆ ಭೀತಿ.
16 A person who strays from the way of understanding will rest in the assembly of the dead. ವಿವೇಕದ ಹಾದಿಯಿಂದ ತಪ್ಪಿಸಿಕೊಳ್ಳುವವನು ಸತ್ತವರ ಸಹವಾಸದಲ್ಲಿ ವಿಶ್ರಾಂತಿ ಪಡೆಯುವನು.
17 Whoever loves pleasure will become poor; whoever loves wine and oil will never grow rich. ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ, ತೈಲವನ್ನೂ ಅಪೇಕ್ಷಿಸುವವನು ಎಂದಿಗೂ ಧನವಂತನಾಗನು.
18 The wicked become a ransom for the righteous, and the treacherous for the upright. ದುಷ್ಟರು ನೀತಿವಂತರಿಗೂ, ದ್ರೋಹಿಗಳು ಸನ್ಮಾರ್ಗಿಗಳಿಗೂ ಈಡಾಗಿದ್ದಾರೆ.
19 Better to live in a desert land than with a quarrelsome and complaining wife. ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ, ಮರಭೂಮಿಯಲ್ಲಿ ವಾಸಿಸುವುದು ಲೇಸು.
20 Precious treasure and oil are in the home of the wise, but a fool devours all he has. ಜ್ಞಾನವಂತರ ನಿವಾಸದಲ್ಲಿ ಆಯ್ದ ಐಶ್ವರ್ಯವೂ, ಎಣ್ಣೆಯೂ ಇರುತ್ತವೆ; ಆದರೆ ಬುದ್ಧಿಹೀನನು ಇದ್ದದ್ದೆಲ್ಲವನ್ನು ನುಂಗಿಬಿಡುತ್ತಾನೆ.
21 Whoever pursues righteousness and faithful love will find life, righteousness, and honor. ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ.
22 A wise person scales the city of the mighty and brings down the stronghold they trust in. ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ, ಅವರು ಭರವಸವಿಟ್ಟ ಬಲವಾದ ಕೋಟೆಯನ್ನು ಕೆಡವಿ ಹಾಕುತ್ತಾನೆ.
23 Whoever guards their mouth and tongue keeps themselves out of trouble. ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.
24 "Mocker" is the name of the proud and arrogant who acts with outrageous insolence. ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ.
25 The craving of a lazy person kills him, for his hands refuse to work. ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ.
26 All day long the craving grows, but the righteous give and do not hold back. ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
27 The sacrifice of the wicked is detestable—how much more when brought with evil intent. ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.
28 A false witness will perish, but whoever listens will testify with lasting effect. ಸುಳ್ಳುಸಾಕ್ಷಿಯವನು ನಾಶವಾಗುವನು; ಆದರೆ ಕೇಳಿದ್ದನ್ನೇ ನುಡಿಯುವವನ ಸಾಕ್ಷಿ ಸದಾ ನಿಲ್ಲುವುದು.
29 The wicked put on a bold face, but the upright give thought to their ways. ದುಷ್ಟನು ತನ್ನ ಮುಖವನ್ನು ಕಠಿಣ ಮಾಡಿಕೊಳ್ಳುತ್ತಾನೆ; ಯಥಾರ್ಥವಂತನಾದರೋ ತನ್ನ ಮಾರ್ಗಗಳನ್ನು ಯೋಚಿಸುತ್ತಾರೆ.
30 There is no wisdom, no understanding, no counsel that can stand against our Father. ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.
31 The horse is made ready for the day of battle, but victory belongs to our Father. ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]