Skip to content
The Believer's Library

Biblica® Open Kannada Contemporary Version 2022

Proverbs 22 OKCV

Show OKCV only
Verse × ×
1 A good name is to be chosen rather than great riches, and favor is better than silver or gold. ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.
2 The rich and the poor meet together; our Father is the Maker of them all. ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.
3 The prudent sees danger and takes cover, but the simple keep going and pay the price. ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.
4 The reward for humility and the fear of our Father is riches and honor and life. ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ, ಐಶ್ವರ್ಯವೂ ಮಾನವೂ ಜೀವವೂ ಆಗಿದೆ.
5 Thorns and snares lie in the path of the crooked; whoever guards his soul stays far from them. ದುಷ್ಟರ ದಾರಿಯಲ್ಲಿ ಮುಳ್ಳುಗಳೂ, ಉರುಲುಗಳೂ ಇವೆ; ತನ್ನ ಜೀವವನ್ನು ಕಾಪಾಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
6 Train up a child in the way he should go, and even when he is old he will not depart from it. ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.
7 The rich rules over the poor, and the borrower is slave to the lender. ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.
8 Whoever sows injustice will reap calamity, and the rod of his fury will fail. ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.
9 Whoever has a generous eye will be blessed, for he shares his bread with the poor. ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
10 Drive out the scoffer, and strife goes with him; quarreling and abuse will cease. ಪರಿಹಾಸ್ಯ ಮಾಡುವವನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವುದು; ವಿವಾದವೂ ನಿಂದೆಯೂ ನಿಂತುಹೋಗುವುವು.
11 Whoever loves a pure heart and speaks graciously will have the king as his friend. ಶುದ್ಧ ಹೃದಯವನ್ನು ಪ್ರೀತಿಸಿ, ಕೃಪೆಯಿಂದ ಮಾತನಾಡುವವನಿಗೆ ಅರಸನು ಸ್ನೇಹಿತನಾಗಿರುವನು.
12 The eyes of our Father keep watch over knowledge, but he overturns the words of the traitor. ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ; ಅವರು ದ್ರೋಹಿಯ ಮಾತುಗಳನ್ನು ಕೆಡವಿ ಹಾಕುತ್ತಾರೆ.
13 The lazy person says, "There is a lion outside! I will be killed in the streets!" ಸೋಮಾರಿಯು, “ಹೊರಗೆ ಸಿಂಹವಿದೆ! ಅದು ನನ್ನನ್ನು ಬೀದಿಗಳಲ್ಲಿ ಕೊಂದುಹಾಕುತ್ತದೆ,” ಎಂದು ಹೇಳುತ್ತಾನೆ.
14 The mouth of forbidden women is a deep pit; whoever draws our Father's anger will fall into it. ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಯೆಹೋವ ದೇವರಿಗೆ ಸಿಟ್ಟನ್ನು ಎಬ್ಬಿಸುವವನು ಅದರಲ್ಲಿ ಬೀಳುವನು.
15 Foolishness is bound up in the heart of a child, but the rod of discipline drives it far away. ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ; ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು.
16 Whoever oppresses the poor to enrich himself, or gives to the rich, will come only to poverty. ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
17 Listen carefully to the words of the wise, and apply your heart to my knowledge, ಜ್ಞಾನಿಗಳ ಮಾತುಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ನಿನ್ನ ಹೃದಯವು ಅನ್ವಯಿಸಲಿ.
18 for it will be pleasant if you keep them within you, if all of them are ready on your lips. ಏಕೆಂದರೆ ಅವುಗಳನ್ನು ನಿನ್ನ ಹೃದಯದಲ್ಲಿ ಇಟ್ಟು ಕಾಪಾಡು, ಅವು ನಿನ್ನ ತುಟಿಗಳ ಮೇಲೆ ಸಿದ್ಧವಿದ್ದರೆ ಮೆಚ್ಚುಗೆಯಾಗಿವೆ.
19 So that your trust may be in our Father, I have made them known to you today, even to you. ನಿನ್ನ ಭರವಸೆಯು ಯೆಹೋವ ದೇವರಲ್ಲಿ ಇರುವಂತೆ ಈ ದಿವಸ ನಿನಗೇ ತಿಳಿಯಪಡಿಸಿದ್ದೇನೆ.
20 Have I not written for you thirty sayings of counsel and knowledge, ನಾನು ನಿಮಗಾಗಿ ಮೂವತ್ತು ಹೇಳಿಕೆಗಳನ್ನು ಬರೆದಿಲ್ಲವೋ? ಸಲಹೆ ಮತ್ತು ಪರಿಜ್ಞಾನದ ಹೇಳಿಕೆಗಳು,
21 to teach you what is right and true, so that you may give a true answer to those who sent you? ಪ್ರಾಮಾಣಿಕವಾಗಿರಲು ಮತ್ತು ಸತ್ಯವನ್ನು ಮಾತನಾಡಲು ನಿಮಗೆ ಕಲಿಸುವುದು, ಆದ್ದರಿಂದ ನೀವು ಸೇವೆ ಸಲ್ಲಿಸುವವರಿಗೆ ಸತ್ಯವಾದ ವರದಿಗಳನ್ನು ಹಿಂತಿರುಗಿಸುವಂತೆ ನಾನು ನಿಮಗೆ ಬರೆದಿದ್ದೇನೆ.
22 Do not rob the poor because he is poor, or crush the afflicted at the gate, ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ.
23 for our Father will plead their cause and will rob of life those who rob them. ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು.
24 Do not befriend a man given to anger, and do not go with a hot-tempered man, ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ; ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ;
25 or you will learn his ways and entangle yourself in a snare. ಹಾಗೆ ಮಾಡಿದರೆ ನೀನು ಅವನ ನಡತೆಗಳನ್ನು ಕಲಿತು, ನಿನ್ನನ್ನೇ ಉರುಲಿಗೆ ಸಿಕ್ಕಿಸಿಕೊಳ್ಳುವೆ.
26 Do not be one of those who give pledges, who put up security for debts. ಬೇರೆಯವರ ಸಾಲವನ್ನು ಖಾತರಿಪಡಿಸಲೂ ಬೇರೊಬ್ಬರಿಗೆ ಭದ್ರತೆಯನ್ನು ನೀಡಲು ಒಪ್ಪಬೇಡ.
27 If you have nothing to pay with, why should your bed be taken from under you? ಸಾಲ ತೀರಿಸಲು ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದುಕೊಂಡು ಹೋಗುವನಲ್ಲವೇ?
28 Do not move the ancient boundary stone that your fathers set up. ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.
29 Do you see a man skillful in his work? He will stand before kings; he will not stand before ordinary men. ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]