Skip to content
The Believer's Library

Biblica® Open Kannada Contemporary Version 2022

Proverbs 23 OKCV

Show OKCV only
Verse × ×
1 When you sit down to dine with a ruler, consider carefully what is before you, ಆಳುವವನ ಸಂಗಡ ನೀನು ಊಟಕ್ಕೆ ಕುಳಿತಿರುವಾಗ, ನಿನ್ನ ಎದುರಿನಲ್ಲಿ ಏನಿದೆ ಎಂದು ಶ್ರದ್ಧೆಯಿಂದ ಗಮನಿಸು.
2 and put a knife to your throat if you are a person ruled by appetite. ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಕುತ್ತಿಗೆಗೆ ಖಡ್ಗವನ್ನು ಇಟ್ಟುಕೋ.
3 Do not crave his delicacies, for they are deceptive food. ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿಸಬೇಡ; ಏಕೆಂದರೆ ಅದು ಮೋಸದ ಆಹಾರವು.
4 Do not wear yourself out to get rich; have the wisdom to restrain yourself. ಐಶ್ವರ್ಯವಂತನಾಗುವುದಕ್ಕೆ ಪ್ರಯಾಸಪಡಬೇಡ; ಅದಕ್ಕಾಗಿ ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
5 The moment you look at wealth, it is gone, for it suddenly sprouts wings and flies off toward the heavens like an eagle. ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.
6 Do not eat the bread of a stingy man, and do not crave his delicacies, ಜಿಪುಣನ ಆಹಾರವನ್ನು ತಿನ್ನಬೇಡ; ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ.
7 for he is the kind of man who keeps counting the cost. "Eat and drink!" he says to you, but his heart is not with you. ಏಕೆಂದರೆ, ಅವನು ಎಲ್ಲದಕ್ಕೂ ಬೆಲೆ ಕಟ್ಟುವ ಯೋಚನೆಯುಳ್ಳವನಂತೆ ಇದ್ದಾನೆ; ಅವನು, “ತಿನ್ನು, ಕುಡಿ,” ಎಂದು ಹೇಳುತ್ತಾನೆ; ಆದರೆ ಅವನ ಹೃದಯವು ನಿನ್ನೊಂದಿಗಿಲ್ಲ.
8 You will vomit up the little you have eaten and will have wasted your pleasant words. ನೀನು ತಿಂದ ಸ್ವಲ್ಪ ತುತ್ತನ್ನು ಕಕ್ಕಿಬಿಡುವೆ; ನಿನ್ನ ಸವಿಮಾತುಗಳೆಲ್ಲಾ ವ್ಯರ್ಥವೇ.
9 Do not speak in the hearing of a fool, for he will despise the wisdom of your words. ಬುದ್ಧಿಹೀನರ ಸಂಗಡ ಮಾತಾಡಬೇಡ; ಏಕೆಂದರೆ ನಿನ್ನ ಜ್ಞಾನದ ಮಾತುಗಳನ್ನು ಅವರು ತಿರಸ್ಕರಿಸುವನು.
10 Do not move an ancient boundary stone or encroach on the fields of the fatherless, ಪೂರ್ವಕಾಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲಗಳನ್ನು ಅತಿಕ್ರಮಿಸಬೇಡ.
11 for their Redeemer is strong; our Father will take up their cause against you. ಏಕೆಂದರೆ ಅವನ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.
12 Apply your heart to instruction and your ears to words of knowledge. ಶಿಸ್ತಿಗೆ ನಿನ್ನ ಹೃದಯವನ್ನೂ ತಿಳುವಳಿಕೆಯ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.
13 Do not withhold discipline from a child; if you strike him with the rod, he will not die. ಮಕ್ಕಳನ್ನು ಶಿಕ್ಷಿಸಲು ಹಿಂದೆಗೆಯಬೇಡ; ಬೆತ್ತದಿಂದ ಹೊಡೆದರೆ, ಅವರು ಸಾಯುವುದಿಲ್ಲ.
14 Strike him with the rod, and you will deliver his soul from the grave. ಅವರನ್ನು ಬೆತ್ತದಿಂದ ಹೊಡೆದು, ಪಾತಾಳದಿಂದ ಅವರ ಮರಣವನ್ನು ತಪ್ಪಿಸುವೆ.
15 My son, if your heart is wise, my own heart will be glad as well. ಮಗನೇ, ನಿನ್ನ ಹೃದಯವು ಜ್ಞಾನವುಳ್ಳದ್ದಾಗಿದ್ದರೆ, ನನ್ನ ಹೃದಯವು ಹರ್ಷಿಸುವುದು.
16 My inmost being will rejoice when your lips speak what is right. ನಿನ್ನ ತುಟಿಗಳು ಯಥಾರ್ಥವಾದವುಗಳನ್ನು ಮಾತಾಡಿದರೆ, ನನ್ನ ಅಂತರಾತ್ಮವು ಸಂತೋಷಿಸುವುದು.
17 Do not let your heart envy sinners, but continue in the fear of our Father all day long. ಪಾಪಿಗಳನ್ನು ನೋಡಿ ನಿನ್ನ ಹೃದಯವು ಅಸೂಯೆಪಡದಿರಲಿ; ಆದರೆ ಯೆಹೋವ ದೇವರ ಭಯದಲ್ಲಿರಲು ಯಾವಾಗಲೂ ಆಸಕ್ತನಾಗಿರು.
18 Surely there is a future, and your hope will not be cut off. ಖಂಡಿತವಾಗಿಯೂ ನಿನಗೆ ಮುಂದಿನ ನಿರೀಕ್ಷೆಯಿದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
19 Hear, my son, and be wise, and keep your heart on the right road. ಮಗನೇ, ಕೇಳಿ ಜ್ಞಾನವಂತನಾಗು; ನೀತಿ ಮಾರ್ಗದಲ್ಲಿ ನಿನ್ನ ಹೃದಯವನ್ನು ನಡೆಸು.
20 Do not be among those who get drunk on wine or those who gorge themselves on meat, ಅತಿ ಮದ್ಯಪಾನ ಮಾಡುವವರಲ್ಲಿ ಅತಿ ಮಾಂಸಭಕ್ಷರಲ್ಲಿಯೂ ಸೇರಬೇಡ.
21 for the drunkard and the glutton will come to poverty, and drowsiness will clothe them in rags. ಏಕೆಂದರೆ ಕುಡುಕರೂ ಹೊಟ್ಟೆಬಾಕರೂ ದುರ್ಗತಿಗೆ ಬರುವರು; ತೂಕಡಿಕೆಯು ಹರಕು ಬಟ್ಟೆಗಳನ್ನು ಹೊದಿಸುವದು.
22 Listen to your father, who gave you life, and do not despise your mother when she is old. ನಿನ್ನನ್ನು ಹೆತ್ತ ತಂದೆಯ ಮಾತಿಗೆ ಕಿವಿಗೊಡು, ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆ ಮಾಡಬೇಡ.
23 Buy truth and do not sell it; buy wisdom, instruction, and understanding. ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ.
24 The father of a righteous child will greatly rejoice; whoever fathers a wise son will delight in him. ನೀತಿವಂತನ ತಂದೆಯು ಬಹಳವಾಗಿ ಸಂತೋಷಪಡುವನು; ಜ್ಞಾನಿಯಾದ ಮಗುವನ್ನು ಪಡೆದವನಿಗೆ ಅವನಿಂದ ಆನಂದವಾಗುವುದು.
25 Let your father and mother be glad; let her who gave you birth rejoice. ನಿನ್ನ ತಂದೆತಾಯಿಗಳು ಸಂತೋಷಿಸುವರು; ನಿನ್ನ ಹೆತ್ತ ತಾಯಿ ಆನಂದಿಸುವಳು.
26 My son, give me your heart, and let your eyes delight in my ways. ಮಗನೇ, ನಿನ್ನ ಮನಸ್ಸನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ಅನುಸರಿಸುವಲ್ಲಿ ನಿಮ್ಮ ಕಣ್ಣುಗಳು ಆನಂದಿಸಲಿ.
27 For a prostitute is a deep pit, and an adulterous woman is a narrow well. ವೇಶ್ಯೆಯು ಆಳವಾದ ಕುಣಿ; ವ್ಯಭಿಚಾರಿಣಿಯು ಇಕ್ಕಟ್ಟಾದ ಗುಂಡಿ.
28 She lies in wait like a robber and leads many men into faithlessness. ಕಳ್ಳನಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.
29 Who has misery? Who has sorrow? Who has strife? Who has complaints? Who has wounds for no reason? Who has bleary eyes? ಯಾರಿಗೆ ಕಷ್ಟ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೊಣಗುಟ್ಟುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಯಾರಿಗೆ ಕೆಂಪೇರಿದ ಕಣ್ಣುಗಳು?
30 Those who linger long over wine, those who go to sample bowls of mixed wine. ಮದ್ಯಪಾನದಲ್ಲಿ ಆಸಕ್ತರಾಗಿ, ಮಿಶ್ರ ಮದ್ಯಪಾನವನ್ನು ಕುಡಿಯ ಬಯಸುವವರೇ ಅಲ್ಲವೇ!
31 Do not gaze at wine while it is red, while it sparkles in the cup and goes down smoothly. ದ್ರಾಕ್ಷಾರಸವು ಕೆಂಪಾಗಿದ್ದು, ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ, ಅದನ್ನು ನೋಡಬೇಡ.
32 In the end it bites like a serpent and stings like a viper. ಕೊನೆಗೆ ಅದು ಹಾವಿನಂತೆ ಕಚ್ಚುವುದು ಮತ್ತು ಸರ್ಪದಂತೆ ವಿಷವುಕ್ಕಿಸುವುದು.
33 Your eyes will see strange things, and your heart will utter twisted things. ನಿಮ್ಮ ಕಣ್ಣುಗಳು ವಿಚಿತ್ರ ದೃಶ್ಯಗಳನ್ನು ನೋಡುತ್ತವೆ. ನಿಮ್ಮ ಮನಸ್ಸು ಗೊಂದಲಮಯ ವಿಷಯಗಳನ್ನು ಕಲ್ಪಿಸುತ್ತದೆ.
34 You will be like one lying down in the heart of the sea, like one lying on the top of a ship's mast. ನೀನು ಸಮುದ್ರದ ಮಧ್ಯದಲ್ಲಿ ಮಲಗಿರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇರುವಿ.
35 "They struck me, but I felt no pain; they beat me, but I did not know it. When will I wake up? I will look for another drink." “ಜನರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ನಾನು ಎಚ್ಚರವಾಗುವುದು ಯಾವಾಗ? ಪುನಃ ನಾನು ಅದನ್ನು ಕುಡಿದೇನು?” ಎಂದುಕೊಳ್ಳುವೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]