Skip to content
The Believer's Library

Biblica® Open Kannada Contemporary Version 2022

Proverbs 25 OKCV

Show OKCV only
Verse × ×
1 These also are proverbs of Solomon, which the men of Hezekiah king of Judah copied out. ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳೇ.
2 It is the glory of our Father to conceal a matter, but the glory of kings to search a matter out. ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.
3 As the heavens are high and the earth is deep, so the heart of kings is unsearchable. ಆಕಾಶದ ಎತ್ತರವನ್ನು, ಭೂಮಿಯ ಆಳವನ್ನು ಯಾರೂ ಗ್ರಹಿಸಲು ಸಾಧ್ಯವಿಲ್ಲ. ಹಾಗೆಯೇ ಅರಸರ ಹೃದಯವು ಅಗೋಚರ.
4 Take away the dross from the silver, and a vessel comes forth for the refiner. ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ರೂಪಗೊಳ್ಳುವುದು.
5 Take away the wicked from before the king, and his throne will be established in righteousness. ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು.
6 Do not put yourself forward in the king's presence, and do not stand in the place of the great; ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರಿಗೆ ಏರ್ಪಡಿಸಿದ ಸ್ಥಾನವನ್ನು ಕೇಳಬೇಡ.
7 for it is better to be told, "Come up here," than to be put in a lower place in front of a noble you can see. ಘನವಂತರ ಸನ್ನಿಧಿಯಲ್ಲಿ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ, “ಮೇಲಕ್ಕೆ ಬಾ,” ಎಂದು ಅರಸನು ನಿನಗೆ ಹೇಳುವುದು ಲೇಸು. ನೀವು ಏನನ್ನೋ ಕಂಡಿದ್ದರಿಂದ,
8 Do not rush into a quarrel, for what will you do in the end when your neighbor puts you to shame? ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?
9 Argue your case with your neighbor himself, but do not disclose another's secret, ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಇನ್ನೊಬ್ಬರ ಗುಟ್ಟನ್ನು ಬಹಿರಂಗಪಡಿಸಬೇಡ,
10 lest the one who hears it shame you, and your bad reputation never goes away. ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು; ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.
11 A word spoken at the right moment is like apples of gold in settings of silver. ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
12 Like a ring of gold or an ornament of fine gold is wise correction to a listening ear. ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.
13 Like the cold of snow in the time of harvest is a faithful messenger to those who send him; he refreshes the soul of his masters. ಸುಗ್ಗಿಯ ಕಾಲದಲ್ಲಿ ಹಿಮದ ಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ತನಾದ ಸೇವಕನಿದ್ದಾನೆ; ಏಕೆಂದರೆ ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
14 Like clouds and wind without rain is one who boasts of a gift never given. ದಾನ ಕೊಡದೆ ಕೊಟ್ಟಿದ್ದೇನೆಂದು ಹೊಗಳಿಕೊಳ್ಳುವವನು, ಮಳೆ ಇಲ್ಲದ ಮೋಡಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
15 By patience a ruler is persuaded, and a soft tongue breaks bone. ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ.
16 If you find honey, eat only enough, or you will have too much and vomit. ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟೇ ತಿನ್ನು; ಹೊಟ್ಟೆ ತುಂಬಾ ತಿಂದರೆ ಕಾರಬೇಕಾದೀತು.
17 Don't visit your neighbor's house too often, or he will grow weary of you and hate you. ನಿನ್ನ ನೆರೆಯವನ ಮನೆಗೆ ಅಪರೂಪಕ್ಕೆ ಹೆಜ್ಜೆ ಇಡು; ಇಲ್ಲವಾದರೆ ನಿನ್ನ ವಿಷಯವಾಗಿ ಅವನು ಬೇಸರಗೊಂಡು ನಿನ್ನನ್ನು ಹಗೆಮಾಡಾನು.
18 Like a club, a sword, and a sharp arrow is one who bears false witness against his neighbor. ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ.
19 Like a bad tooth or a foot out of joint is trust in a faithless person in time of trouble. ಕಷ್ಟಕಾಲದಲ್ಲಿ ಅಪನಂಬಿಗಸ್ತನಾದ ಮನುಷ್ಯನಲ್ಲಿಯ ಭರವಸೆಯು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
20 Like one who takes off a garment on a cold day, like vinegar poured on baking soda, is the one who sings songs to a heavy heart. ಮನಗುಂದಿದವನಿಗೆ ಸಂಗೀತ ಹಾಡುವುದು ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆಯೂ ಹುಳಿ ಉಪ್ಪನ್ನು ಗಾಯಕ್ಕೆ ಹಚ್ಚಿದಂತೆಯೂ.
21 If your enemy is hungry, give him bread to eat, and if he is thirsty, give him water to drink; ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು.
22 for you will heap coals of fire on his head, and our Father will reward you. ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು.
23 The north wind brings forth rain, and a secretive tongue, angry looks. ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ.
24 It is better to live in a corner of the rooftop than in a shared house with a quarrelsome wife. ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.
25 Like cold water to a weary soul is good news from a distant land. ಬಾಯಾರಿದವನಿಗೆ ತಣ್ಣೀರು ಹೇಗೋ ದೂರದೇಶದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
26 Like a muddied spring or a polluted fountain is a righteous person who gives way before the wicked. ದುಷ್ಟರ ಮುಂದೆ ನೀತಿವಂತನು ಸೋಲುವುದು, ಕೆಸರಿನ ಬುಗ್ಗೆಗೂ ಕೊಳಕು ಒರತೆಗೂ ಸಮಾನ.
27 It is not good to eat too much honey, nor to seek your own glory. ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ.
28 Like a city broken into and left without walls is a person who has no control over his own spirit. ತನ್ನ ಸ್ವಂತ ಆತ್ಮವನ್ನು ಆಳದಿರುವವನು, ಗೋಡೆ ಬಿದ್ದ ಹಾಳೂರಿಗೆ ಸಮಾನ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]