Skip to content
The Believer's Library

Biblica® Open Kannada Contemporary Version 2022

Proverbs 26 OKCV

Show OKCV only
Verse × ×
1 Like snow in summer and like rain at harvest, honor is not fitting for a fool. ಬೇಸಿಗೆಯಲ್ಲಿ ಹಿಮದಂತೆಯೂ, ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನವು ಸರಿಯಲ್ಲ.
2 Like a fluttering sparrow or a darting swallow, an undeserved curse does not come to rest. ಅಲೆದಾಡುವ ಪಕ್ಷಿಯಂತೆಯೂ, ಹಾರಾಡುವ ಬಾನಕ್ಕಿಯಂತೆಯೂ ಕಾರಣವಿಲ್ಲದೆ ಕೊಡುವ ಶಾಪವು ತಗಲದು.
3 A whip for the horse, a bridle for the donkey, and a rod for the backs of fools. ಕುದುರೆಗೆ ಬಾರುಗೋಲು, ಕತ್ತೆಗೆ ಕಡಿವಾಣವು, ಮೂಢನ ಬೆನ್ನಿಗೆ ಬೆತ್ತ.
4 Do not answer a fool according to his foolishness, or you yourself will be like him. ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನೂ ಅವನಿಗೆ ಸಮಾನನಾದೀಯೆ.
5 Answer a fool according to his foolishness, or he will be wise in his own eyes. ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
6 Whoever sends a message through a fool cuts off his own feet and drinks down violence. ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ತನ್ನ ಪಾದಗಳನ್ನು ತಾನೇ ಕಡಿದುಕೊಂಡು ಇಲ್ಲವೆ ಕೇಡನ್ನು ಕುಡಿಯುತ್ತಾನೆ.
7 Like the legs of a lame man hanging useless is a proverb in the mouth of fools. ಕುಂಟನ ಕಾಲುಗಳು ಜೋಲಾಡುವ ಹಾಗೆಯೇ, ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುತ್ತದೆ.
8 Like binding a stone in a sling is giving honor to a fool. ಮೂಢನಿಗೆ ಕೊಡುವ ಮಾನವು ಕವಣಿಯಲ್ಲಿಟ್ಟ ಕಲ್ಲಿನ ಹಾಗೆ.
9 Like a thornbush in the hand of a drunkard is a proverb in the mouth of fools. ಕುಡುಕನ ಕೈಯಲ್ಲಿ ಮುಳ್ಳು ಕೋಲಿನಂತೆ ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುವುದು.
10 Like an archer who wounds everyone is one who hires a fool or hires any passerby. ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವ ಬಿಲ್ಲುಗಾರನಂತೆ.
11 As a dog returns to its vomit, so a fool repeats his foolishness. ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
12 Do you see someone wise in his own eyes? There is more hope for a fool than for him. ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.
13 The lazy person says, "There is a lion in the road! A lion in the streets!" ಸೋಮಾರಿಯು, “ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಭೀಕರ ಸಿಂಹ ಇದೆ,” ಎಂದು ಹೇಳುತ್ತಾನೆ.
14 As a door turns on its hinges, so the lazy person turns on his bed. ಬಾಗಿಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ, ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುತ್ತಾನೆ.
15 The lazy person buries his hand in the dish; it wearies him to bring it back to his mouth. ಸೋಮಾರಿಯು ತಟ್ಟೆಯಲ್ಲಿ ತನ್ನ ಕೈಯನ್ನು ಹಾಕಿ, ತಿರುಗಿ ಅದನ್ನು ತನ್ನ ಬಾಯಿಗೆ ತರಲಾರದಷ್ಟು ಆಯಾಸಪಡುತ್ತಾನೆ.
16 The lazy person is wiser in his own eyes than seven who answer wisely. ಜ್ಞಾನದಿಂದ ಉತ್ತರಿಸಬಲ್ಲ ಏಳು ಜನರಿಗಿಂತ, ತಾನೇ ಜ್ಞಾನಿ ಎಂದು ಸೋಮಾರಿಯು ಭಾವಿಸುತ್ತಾನೆ.
17 Like grabbing a dog by the ears is a passerby who meddles in a quarrel not his own. ಒಬ್ಬನು ಹಾದುಹೋಗುತ್ತಾ ತನಗೆ ಸಂಬಂಧಿಸದೇ ಇರುವ ವ್ಯಾಜ್ಯದಲ್ಲಿ ತಲೆಹಾಕುವವನು ನಾಯಿಯ ಕಿವಿ ಹಿಡಿದವನಂತೆ ಇದ್ದಾನೆ.
18 Like a madman shooting firebrands, arrows, and death, ತನ್ನ ನೆರೆಯವನನ್ನು ಮೋಸಗೊಳಿಸಿ, “ಇದು ತಮಾಷೆಗೋಸ್ಕರ ಮಾಡುತ್ತೇನೆ,” ಎಂದು ಹೇಳುವವನು, ಕೊಳ್ಳಿಗಳನ್ನೂ, ಬಾಣಗಳನ್ನೂ, ಸಾವನ್ನೂ ಬೀರುವ ಹುಚ್ಚನಂತೆಯೇ.
19 so is the one who deceives his neighbor and says, "I was only joking!" Not in this edition
20 Without wood a fire goes out, and without a gossip a quarrel dies down. ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿಹೋಗುತ್ತದೆ; ಹಾಗೆಯೇ ಚಾಡಿಕೋರನು ಇಲ್ಲದಿರುವಲ್ಲಿ ಜಗಳ ಶಮನವಾಗುವುದು.
21 As charcoal to embers and wood to fire, so a quarrelsome person kindles strife. ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹ ಮಾಡುವವನು ಇರುವನು.
22 The words of a gossip are like choice morsels; they sink down into the inmost parts. ಚಾಡಿಕೋರನ ಮಾತುಗಳು ರುಚಿಕರ ಭಕ್ಷ್ಯದ ಹಾಗೆ ಹೊಟ್ಟೆಯ ಅಂತರ್ಭಾಗಗಳಿಗೆ ಇಳಿಯುತ್ತವೆ.
23 Like a glaze covering an earthen pot are smooth lips with an evil heart. ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು, ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ.
24 An enemy disguises himself with his lips, but in his heart he harbors deceit. ಶತ್ರುಗಳು ತಮ್ಮ ತುಟಿಗಳಿಂದ ವೇಷ ಧರಿಸುತ್ತಾರೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾರೆ.
25 When he speaks graciously, do not believe him, for seven abominations fill his heart. ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.
26 Though his hatred is hidden by deceit, his wickedness will be exposed in the assembly. ಅವನ ಹಗೆತನವು ಮೋಸದಿಂದ ಮುಚ್ಚಲ್ಪಟ್ಟಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವುದು.
27 Whoever digs a pit will fall into it, and a stone rolls back on the one who rolls it. ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರುಗಿ ಹೊರಳುವುದು.
28 A lying tongue hates those it crushes, and a flattering mouth works ruin. ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ಹಗೆ ಮಾಡುವನು; ಮುಖಸ್ತುತಿ ಮಾಡುವ ಬಾಯಿಯು ನಾಶವನ್ನುಂಟುಮಾಡುತ್ತದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]