Skip to content
The Believer's Library

Biblica® Open Kannada Contemporary Version 2022

Proverbs 27 OKCV

Show OKCV only
Verse × ×
1 Do not boast about tomorrow, for you do not know what a day may bring. ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಏಕೆಂದರೆ ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.
2 Let someone else praise you, and not your own mouth; a stranger, and not your own lips. ನಿನ್ನ ಬಾಯಿ ಅಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
3 A stone is heavy and the sand a burden, but a fool's provocation is heavier than both. ಕಲ್ಲು ಭಾರ, ಮರಳು ಭಾರ; ಆದರೆ ಇವೆರಡಕ್ಕಿಂತ ಮೂಢನ ಕೋಪವು ಬಹು ಭಾರ.
4 Wrath is cruel and anger is overwhelming, but who can stand before jealousy? ಕ್ರೋಧವು ಕ್ರೂರ, ಕೋಪವು ಪ್ರವಾಹ; ಆದರೆ ಅಸೂಯೆದ ಮುಂದೆ ಯಾವನು ನಿಂತಾನು?
5 Open rebuke is better than love that stays hidden. ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
6 A friend's wounds are faithful, but an enemy's kisses are deceitful. ಸ್ನೇಹಿತನು ಮಾಡುವ ಗಾಯಗಳು ಭರವಸೆಗೆ ಯೋಗ್ಯವಾದದ್ದು; ಆದರೆ ಶತ್ರುವಿನ ಮುದ್ದುಗಳು ಹೇರಳವಾಗಿವೆ.
7 A well-fed person tramples honeycomb, but to the hungry even what is bitter tastes sweet. ತೃಪ್ತಿ ಹೊಂದಿದವನು ಜೇನುತುಪ್ಪವನ್ನೂ ಅಸಹ್ಯಿಸಿಕೊಳ್ಳುತ್ತಾನೆ; ಆದರೆ ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.
8 A man who strays from his home is like a bird that strays from its nest. ತನ್ನ ಮನೆಯನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿಯಂತೆ ಇದ್ದಾನೆ.
9 Oil and incense gladden the heart, and the sweetness of a friend comes from heartfelt counsel. ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.
10 Do not forsake your friend or your father's friend, and do not go to your brother's house when disaster strikes; better a neighbor nearby than a brother far off. ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
11 Be wise, my son, and make my heart glad, so that I can answer anyone who taunts me. ನನ್ನನ್ನು ನಿಂದಿಸುವವರಿಗೆ ನಾನು ಉತ್ತರಿಸುವಂತೆಯೂ, ನನ್ನ ಹೃದಯವನ್ನು ಸಂತೋಷಪಡಿಸುವಂತೆಯೂ, ನನ್ನ ಮಗುವೇ, ಜ್ಞಾನಿಯಾಗಿರು.
12 The prudent sees danger and takes cover, but the simple keep going and pay the price. ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ.
13 Take the garment of one who puts up security for a stranger; hold it as collateral when he does so for a foreign woman. ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.
14 Whoever blesses his neighbor with a loud voice early in the morning, it will be taken as a curse. ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ, ಅದು ಶಾಪವೆಂದು ಪರಿಗಣಿಸಲಾಗುವುದು.
15 A quarrelsome wife is like a constant dripping on a rainy day. ಜಗಳ ಮಾಡುವ ಹೆಂಡತಿಯು ಮಳೆಗಾಲದಲ್ಲಿ ಸೋರುವ ಛಾವಣಿಯಂತಿದೆ.
16 Restraining her is like restraining the wind, or grasping oil with the right hand. ಅವಳನ್ನು ಅಡಗಿಸುವುದು, ಗಾಳಿಯನ್ನು ಅಡಗಿಸಿದಂತೆ; ಕೈಯಿಂದ ಎಣ್ಣೆಯನ್ನು ಹಿಡಿದಂತೆ.
17 Iron sharpens iron, and one person sharpens another. ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು.
18 Whoever tends a fig tree will eat its fruit, and whoever guards his master will be honored. ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು.
19 As water reflects the face, so the heart reflects the person. ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವು ಅವನ ಹೃದಯವನ್ನು ಪ್ರತಿಬಿಂಬಿಸುತ್ತದೆ.
20 The grave and Destruction are never satisfied, and a person's eyes are never satisfied. ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ.
21 The crucible is for silver and the furnace for gold, and a person is tested by the praise he receives. ಬೆಳ್ಳಿ, ಬಂಗಾರಗಳ ಪುಟಕ್ಕೆ ಕುಲುಮೆ ಹೇಗೆಯೋ, ಹಾಗೆಯೇ ಹೊಗಳಿಕೆಯು ಮನುಷ್ಯನನ್ನು ಪರೀಕ್ಷಿಸುತ್ತದೆ.
22 Though you grind a fool in a mortar with a pestle, along with the grain, his foolishness will not leave him. ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ, ಒಣಕೆಯಿಂದ ಕುಟ್ಟಿದರೂ, ಅವನಿಂದ ಮೂರ್ಖನತವು ತೊಲಗುವುದಿಲ್ಲ.
23 Know well the condition of your flocks, and give careful attention to your herds. ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
24 For riches do not last forever, nor does a crown endure to every generation. ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ತಲತಲಾಂತರಕ್ಕೂ ಇರುವುದಿಲ್ಲ.
25 When the grass is gone and the new growth appears and the mountain herbs are gathered, ಒಣಹುಲ್ಲನ್ನು ಕೊಯ್ದು ನಂತರ ಹೊಸ ಬೆಳೆ ಕಾಣಿಸಿಕೊಂಡಾಗ ಮತ್ತು ಬೆಟ್ಟಗಳಿಂದ ಹುಲ್ಲು ಸಂಗ್ರಹಿಸಿದಾಗ,
26 the lambs will provide your clothing, and the goats will provide the price of a field; ಆಗ ಕುರಿಮರಿಗಳು ನಿಮಗೆ ಬಟ್ಟೆಗಳನ್ನು ಒದಗಿಸುತ್ತವೆ, ಆಡುಗಳ ಬೆಲೆಗೆ ನೀವು ಹೊಲವನ್ನು ಖರೀದಿಸಬಹುದು,
27 and there will be enough goats' milk for your food, for the food of your household and to sustain your servant girls. ನಿನ್ನ ಊಟಕ್ಕಾಗಿಯೂ, ನಿನ್ನ ಮನೆಯವರ ಆಹಾರಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಬೇಕಾದಷ್ಟು ಆಡುಗಳ ಹಾಲು ಸಾಕಾಗುತ್ತದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]