Skip to content
The Believer's Library

Biblica® Open Kannada Contemporary Version 2022

Proverbs 28 OKCV

Show OKCV only
Verse × ×
1 The wicked flee when no one pursues, but the righteous are as bold as a lion. ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
2 When a land rebels, it has many rulers, but with a man of understanding and knowledge, it stays stable. ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು.
3 A poor man who oppresses the helpless is like a driving rain that leaves no food. ಬಡವರನ್ನು ಹಿಂಸಿಸುವ ಅಧಿಕಾರಿಯು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
4 Those who forsake the law praise the wicked, but those who keep the law strive against them. ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ.
5 Evil people do not understand justice, but those who seek our Father understand it fully. ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
6 Better is a poor man who walks with integrity than a rich man crooked in his ways. ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರವಾಗಿರುವವನಿಗಿಂತ ನಿರ್ದೋಷಿಯಾಗಿ ನಡೆಯುವ ದರಿದ್ರನು ಶ್ರೇಷ್ಠನು.
7 Whoever keeps the law is a son with understanding, but a companion of gluttons shames his father. ವಿವೇಚನೆಯ ಮಗನು ದೇವರ ಶಿಕ್ಷಣವನ್ನು ಕೈಗೊಳ್ಳುವನು. ಆದರೆ ಹೊಟ್ಟೆಬಾಕರ ಸಂಗಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
8 Whoever multiplies his wealth by interest and unjust gain gathers it for one who is generous to the poor. ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.
9 If anyone refuses to listen to the law, even his prayer is detestable. ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.
10 Whoever leads the upright astray down an evil path will fall into his own pit, but the blameless will inherit good things. ಪ್ರಾಮಾಣಿಕರನ್ನು ದುರ್ಮಾರ್ಗದಲ್ಲಿ ದಾರಿತಪ್ಪಿಸುವವನು, ತಾನೇ ತೋಡಿದ ಗುಂಡಿಯಲ್ಲಿ ಬೀಳುವನು. ನಿರ್ದೋಷಿಗಳಾದರೋ ಒಳ್ಳೆಯ ಸೊತ್ತನ್ನು ಪಡೆಯುವರು.
11 A rich man is wise in his own eyes, but a poor man with understanding sees right through him. ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು.
12 When the righteous triumph, there is great glory, but when the wicked rise, people go into hiding. ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.
13 Whoever conceals his sins will not prosper, but whoever confesses and turns from them will find mercy. ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.
14 Blessed is the one who always remains reverent, but whoever hardens his heart will fall into calamity. ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
15 Like a roaring lion or a charging bear is a wicked ruler over a helpless people. ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.
16 A ruler who lacks understanding is a cruel oppressor, but whoever hates unjust gain will prolong his days. ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು. ಆದರೆ ಲೋಭವನ್ನು ಹಗೆಮಾಡುವವನು ದೀರ್ಘಾಯುಷ್ಯನು.
17 A man weighed down by the guilt of bloodshed will be a fugitive until death; let no one support him. ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.
18 Whoever walks in integrity will be kept safe, but whoever is crooked in his ways will suddenly fall. ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.
19 Whoever works his land will have plenty of bread, but whoever chases empty pursuits will have plenty of poverty. ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು. ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವುದು.
20 A faithful man will abound with blessings, but whoever rushes to get rich will not go unpunished. ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.
21 Showing partiality is not good, yet for a piece of bread a man will do wrong. ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹ ಮಾಡುವನು.
22 A stingy man rushes after wealth and does not know that poverty will overtake him. ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.
23 Whoever rebukes a man will in the end find more favor than one who flatters with his tongue. ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
24 Whoever robs his father or mother and says, "It is no sin," is a companion to one who destroys. ತನ್ನ ತಂದೆಯಾನ್ನಾಗಲಿ, ತಾಯಿಯನ್ನಾಗಲಿ ದೋಚಿಕೊಂಡು, “ಇದು ದೋಷವಲ್ಲ,” ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
25 A greedy man stirs up strife, but whoever trusts in our Father will be enriched. ದುರಾಶೆಯುಳ್ಳವನು ಕಲಹವನ್ನೆಬ್ಬಿಸುವನು; ಯೆಹೋವ ದೇವರಲ್ಲಿ ಭರವಸವಿಡುವವನು ಪುಷ್ಟನಾಗುವನು.
26 Whoever trusts in his own heart is a fool, but whoever walks in wisdom will be kept safe. ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.
27 Whoever gives to the poor will lack nothing, but whoever closes his eyes to them will receive many curses. ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.
28 When the wicked rise, people go into hiding, but when they perish, the righteous flourish. ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]