Skip to content
The Believer's Library

Biblica® Open Kannada Contemporary Version 2022

Proverbs 29 OKCV

Show OKCV only
Verse × ×
1 Whoever is often corrected yet refuses to listen will suddenly be broken beyond healing. ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.
2 When the righteous flourish, the people rejoice, but when the wicked rule, the people groan. ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ.
3 A man who loves wisdom brings joy to his father, but a companion of prostitutes squanders his wealth. ಜ್ಞಾನಪ್ರಿಯನು ತಂದೆಗೆ ಆನಂದ ಆದರೆ ವೇಶ್ಯೆಯರ ಸಹವಾಸದಿಂದ ಆಸ್ತಿಯ ವಿನಾಶ.
4 By justice a king gives a land stability, but one who is greedy for bribes tears it down. ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ.
5 A man who flatters his neighbor spreads a net for his feet. ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು, ನೆರೆಯವನ ಕಾಲಿಗೆ ಬಲೆಯನ್ನು ಒಡ್ಡುತ್ತಾನೆ.
6 An evil man is snared by his own sin, but the righteous sing and rejoice. ಕೆಟ್ಟವನು ತನ್ನ ಪಾಪದಿಂದಲೇ ಸಿಕ್ಕಿಹಾಕಿಕೊಳ್ಳುತ್ತಾನೆ, ಆದರೆ ನೀತಿವಂತನು ಸಂತೋಷದಿಂದ ಹಾಡಿ ಹರ್ಷಿಸುತ್ತಾನೆ.
7 The righteous care about justice for the poor, but the wicked have no such understanding. ಬಡವರ ನ್ಯಾಯಕ್ಕಾಗಿ ನೀತಿವಂತನು ಚಿಂತಿಸುತ್ತಾನೆ. ಆದರೆ ದುಷ್ಟನಿಗೆ ಅಂಥಾ ಚಿಂತೆಯೇ ಇಲ್ಲ.
8 Mockers set a city ablaze, but the wise calm the anger. ಪರಿಹಾಸ್ಯಗಾರರು ಪಟ್ಟಣದಲ್ಲಿ ಗಲಾಟೆ ಎಬ್ಬಿಸುತ್ತಾರೆ. ಆದರೆ ಜ್ಞಾನಿಗಳು ಕೋಪವನ್ನು ಆರಿಸುವರು.
9 When a wise man goes to court with a fool, the fool rages and scoffs, and there is no peace. ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯಮಾಡುವಾಗ, ಮೂರ್ಖನು ರೇಗಿದರೂ ಅಪಹಾಸ್ಯಮಾಡಿದರೂ ಸಮಾಧಾನವೇ ಇರುವುದಿಲ್ಲ.
10 The bloodthirsty hate the blameless and seek to kill the upright. ಕೊಲೆಪಾತಕರು ಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ಆದರೆ ಯಥಾರ್ಥವಂತರನ್ನು ನಾಶಮಾಡಲು ಯತ್ನಿಸುತ್ತಾರೆ.
11 A fool vents all his anger, but a wise man holds it back and keeps himself calm. ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು. ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ.
12 If a ruler listens to lies, all his officials become wicked. ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ.
13 The poor man and the oppressor have this in common: our Father gives sight to the eyes of both. ಬಡವರಿಗೂ ದಬ್ಬಾಳಿಕೆ ನಡೆಸುವವರಿಗೂ ಒಂದು ಸಂಗತಿ ಹುದುವಾಗಿರುವುದು: ಯೆಹೋವ ದೇವರು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವರು ಎಂಬುದೇ.
14 If a king judges the poor with fairness, his throne will be established forever. ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು.
15 The rod and a word of correction give wisdom, but a child left to himself brings shame to his mother. ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಆದರೆ ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
16 When the wicked flourish, wrongdoing flourishes, but the righteous will see the wicked's downfall. ದುಷ್ಟರು ವೃದ್ಧಿಯಾದಾಗ, ಪಾಪವು ವೃದ್ಧಿಯಾಗುತ್ತದೆ. ಆದರೆ ನೀತಿವಂತರು ದುಷ್ಟರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
17 Discipline your son, and he will give you peace; he will bring delight to your heart. ನಿನ್ನ ಮಕ್ಕಳನ್ನು ಶಿಕ್ಷಿಸಿದರೆ, ಅವರು ನಿನಗೆ ಮನಶಾಂತಿಯನ್ನು ಕೊಡುವರು; ಹೌದು, ಅವರು ನೀನು ಬಯಸುವ ಹರ್ಷವನ್ನು ನಿನಗೆ ತರುವರು.
18 Where there is no revelation, the people run wild, but blessed is the one who keeps the law. ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು.
19 A servant cannot be corrected by words alone; though he understands, he will not obey. ಮಾತಿನಿಂದ ಮಾತ್ರ ಕೆಲಸಗಾರರನ್ನು ತಿದ್ದಲು ಸಾಧ್ಯವಿಲ್ಲ; ಏಕೆಂದರೆ ಅವರು ಅರ್ಥಮಾಡಿಕೊಂಡರೂ, ಅದರಂತೆ ನಡೆಯುವುದಿಲ್ಲ.
20 Do you see a man who is hasty with his words? There is more hope for a fool than for him. ದುಡುಕಿ ಮಾತನಾಡುವ ವ್ಯಕ್ತಿಯನ್ನು ನೀನು ನೋಡಿದ್ದೀಯೋ? ಅಂಥವನಿಗಿಂತಲೂ ಬುದ್ಧಿಹೀನನ ವಿಷಯದಲ್ಲಿ ಹೆಚ್ಚು ನಿರೀಕ್ಷೆ ಇದೆ.
21 Pamper a servant from childhood, and in the end he will become like an heir. ಬಾಲ್ಯದಿಂದ ಕೆಲಸಗಾರನನ್ನು ಅನುಕೂಲವಾಗಿ ಸಾಕಿ ಬಿಟ್ಟರೆ, ತರುವಾಯ ಅವನು ಎದುರು ಬೀಳಲು ಸಾಧ್ಯ.
22 An angry man stirs up strife, and a hot-tempered man commits many sins. ಕೋಪಿಷ್ಟನು ಜಗಳವನ್ನೆಬ್ಬಿಸುವನು, ಮುಂಗೋಪಿಯು ಅನೇಕ ಪಾಪಗಳನ್ನು ಮಾಡುತ್ತಾನೆ.
23 A man's pride brings him low, but a humble spirit gains honor. ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.
24 An accomplice of a thief is his own enemy; he hears the curse but says nothing. ಕಳ್ಳರ ಸಹವಾಸ ಮಾಡುವವರು ತಮಗೆ ತಾವೇ ಶತ್ರುಗಳು. ಅವರು ಆಣೆ ಇಟ್ಟರೂ ಅವರಲ್ಲಿ ಬದಲಾವಣೆ ಇರುವುದಿಲ್ಲ.
25 Fear of man lays a snare, but whoever trusts in our Father is kept safe. ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.
26 Many seek a ruler's favor, but justice for a person comes from our Father. ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ.
27 An unjust man is detestable to the righteous, and an upright person is detestable to the wicked. ನೀತಿವಂತರು ಅಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ದುಷ್ಟರು ಪ್ರಾಮಾಣಿಕರನ್ನು ತಿರಸ್ಕರಿಸುತ್ತಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]