Skip to content
The Believer's Library

Biblica® Open Kannada Contemporary Version 2022

Proverbs 3 OKCV

Show OKCV only
Verse × ×
1 My son, do not forget my teaching, but let your heart keep my commandments, ಮಗನೇ, ನನ್ನ ಉಪದೇಶವನ್ನು ಮರೆಯಬೇಡ; ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
2 for they will add length of days and years of life and peace to you. ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು, ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.
3 Do not let covenant love and faithfulness leave you; bind them around your neck, write them on the tablet of your heart. ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.
4 So you will find favor and a good reputation with our Father and with people. ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ, ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.
5 Trust in our Father with all your heart, and do not lean on your own understanding. ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.
6 In all your ways know him, and he will make your paths straight. ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು. ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.
7 Do not be wise in your own eyes; fear our Father, and turn away from evil. ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.
8 This will bring healing to your body and refreshment to your bones. ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು; ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು.
9 Honor our Father with your wealth and with the firstfruits of all your produce, ನಿನ್ನ ಆಸ್ತಿಯಿಂದಲೂ ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.
10 then your barns will be filled with plenty, and your vats will overflow with new wine. ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು; ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿರುವುದು.
11 My son, do not despise the discipline of our Father or be weary of his correction, ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
12 for our Father disciplines the one his heart loves, just as a father disciplines the son he delights in. ಏಕೆಂದರೆ ತಂದೆಯು ತನ್ನ ಮುದ್ದುಮಗನನ್ನು ಶಿಕ್ಷಿಸುವಂತೆ, ಯೆಹೋವ ದೇವರು ಯಾರನ್ನು ಪ್ರೀತಿಸುತ್ತಾರೋ, ಅವರನ್ನು ಶಿಸ್ತುಗೊಳಿಸುವರು.
13 Blessed is the one who finds wisdom, and the one who gains understanding, ಜ್ಞಾನವನ್ನು ಕಂಡುಕೊಳ್ಳುವವನು ಧನ್ಯನು, ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
14 for the gain from her is better than gain from silver, and her profit better than gold. ಏಕೆಂದರೆ ಜ್ಞಾನವು ಬೆಳ್ಳಿಗಿಂತ ಹೆಚ್ಚು ಲಾಭವೂ; ಬಂಗಾರಕ್ಕಿಂತ ಹೆಚ್ಚು ಆದಾಯವನ್ನು ಕೊಡುವುದು.
15 She is more precious than jewels, and nothing you desire can compare with her. ಜ್ಞಾನವು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯ; ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವುದಿಲ್ಲ.
16 Long life is in her right hand; in her left hand are riches and honor. ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ; ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
17 Her ways are pleasant, and all her paths are peace. ಜ್ಞಾನದ ಮಾರ್ಗಗಳು ಸಂತೋಷಕರ; ಅದರ ದಾರಿಗಳೆಲ್ಲಾ ಶಾಂತಿಯ ದಾರಿಗಳೇ.
18 She is a tree of life to those who take hold of her; those who hold her fast are called blessed. ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು.
19 Our Father by wisdom founded the earth; by understanding he established the heavens; ಯೆಹೋವ ದೇವರು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದರು, ತಮ್ಮ ತಿಳುವಳಿಕೆಯ ಮೂಲಕ ಅವರು ಆಕಾಶಗಳನ್ನು ಸ್ಥಿರಪಡಿಸಿದರು.
20 by his knowledge the depths burst open, and the clouds drop down the dew. ದೇವರು ತಮ್ಮ ಅರಿವಿನಿಂದಲೇ ಸೆಲೆಗಳು ಒಡೆದು, ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
21 My son, do not lose sight of these; keep sound wisdom and discretion, ಮಗನೇ, ಜ್ಞಾನವನ್ನೂ ತಿಳುವಳಿಕೆಯನ್ನೂ ಕಾಪಾಡಿಕೋ, ನಿನ್ನ ಕಣ್ಣುಗಳಿಂದ ಅವು ತಪ್ಪಿಹೋಗದೆ ಇರಲಿ.
22 and they will be life for your soul and an adornment for your neck. ಅವು ನಿನಗೆ ಜೀವವಾಗಿರಲಿ. ನಿನ್ನ ಕೊರಳಿಗೆ ಆಭರಣವೂ ಆಗಿರುವುವು.
23 Then you will walk on your way securely, and your foot will not stumble. ಆಗ ನಿನ್ನ ಮಾರ್ಗದಲ್ಲಿ ಸುರಕ್ಷಿತವಾಗಿರುವೆ; ನೀನು ಎಡವದೆ ನಡೆಯುವೆ.
24 If you lie down, you will not be afraid; when you lie down, your sleep will be sweet. ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ; ನೀನು ಮಲಗಿದಾಗ ನಿದ್ರೆಯು ಸುಖವಾಗಿರುವುದು.
25 Do not be afraid of sudden terror, or of the ruin of the wicked when it comes, ಆಕಸ್ಮಿಕ ವಿಪತ್ತಿಗೆ ನೀನು ಅಂಜುವುದಿಲ್ಲ; ದುಷ್ಟರ ಮೇಲೆ ಬರುವ ನಾಶನಕ್ಕೂ ನೀನು ಭಯಪಡದಿರುವೆ.
26 for our Father will be your confidence and will keep your foot from being caught. ಏಕೆಂದರೆ ಯೆಹೋವ ದೇವರೇ ನಿನಗೆ ಭರವಸೆ ಆಗಿದ್ದಾರೆ, ನಿನ್ನ ಪಾದವು ಉರುಲಿಗೆ ಸಿಕ್ಕದಂತೆ ಅವರು ಕಾಪಾಡುವರು.
27 Do not withhold good from those who deserve it, when it is in your power to do it. ನಿನಗೆ ಶಕ್ತಿಯಿರುವಾಗಲೇ ಇತರರಿಗೆ ಉಪಕಾರಮಾಡು ಒಳಿತು ಮಾಡುವುದನ್ನು ನಿನ್ನಲ್ಲಿಯೇ ಇಟ್ಟುಕೊಳ್ಳಬೇಡ.
28 Do not say to your neighbor, "Go, and come back, and tomorrow I will give it"—when you have it with you. ಕೊಡತಕ್ಕದ್ದು ಈಗಾಗಲೇ ನಿನ್ನಲ್ಲಿರುವಾಗ, “ಹೋಗಿ ಬಾ, ನಾಳೆ ನಿನಗೆ ಕೊಡುತ್ತೇನೆ,” ಎಂದು ನಿನ್ನ ನೆರೆಯವನಿಗೆ ಹೇಳಬೇಡ.
29 Do not plot evil against your neighbor, who lives trustingly beside you. ನಿನ್ನ ನೆರೆಯವನು ಭರವಸೆಯಿಂದ ನಿನ್ನ ಪಕ್ಕದಲ್ಲಿ ವಾಸಮಾಡುತ್ತಿರುವಾಗ, ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸಬೇಡ.
30 Do not quarrel with anyone for no reason, when he has done you no harm. ಒಬ್ಬನು ನಿನಗೆ ಯಾವ ತೊಂದರೆ ಮಾಡದಿದ್ದರೆ, ಅವನೊಂದಿಗೆ ಕಾರಣವಿಲ್ಲದೆ ದೂರು ನುಡಿಯಬೇಡ.
31 Do not envy a violent man, and do not choose any of his ways, ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೆಕಿಚ್ಚುಪಡಬೇಡ; ಅವನ ಮಾರ್ಗಗಳಲ್ಲಿ ಯಾವುದನ್ನೂ ನೀನು ಆರಿಸಿಕೊಳ್ಳಬೇಡ.
32 for the devious person is detestable to our Father, but he takes the upright into his confidence. ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ; ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.
33 The curse of our Father is on the house of the wicked, but he blesses the home of the righteous. ದುಷ್ಟರ ಮನೆಯ ಮೇಲೆ ದೈವಶಾಪವಿದೆ. ಆದರೆ ನೀತಿವಂತರ ನಿವಾಸದ ಮೇಲೆ ದೈವಾಶೀರ್ವಾದವಿರುವುದು.
34 Toward the mockers he is scornful, but to the humble he gives grace. ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ; ದೀನರಿಗಾದರೋ ದೇವರು ಕೃಪೆಯನ್ನು ಕೊಡುತ್ತಾರೆ.
35 The wise will inherit honor, but fools get only disgrace. ಜ್ಞಾನಿಗಳು ಸನ್ಮಾನಕ್ಕೆ ಬಾಧ್ಯನಾಗುವರು; ಆದರೆ ಜ್ಞಾನಹೀನರ ಪ್ರತಿಫಲವು ಅವಮಾನವೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]