Skip to content
The Believer's Library

Biblica® Open Kannada Contemporary Version 2022

Proverbs 30 OKCV

Show OKCV only
Verse × ×
1 The words of Agur son of Jakeh—the oracle. The man declares: I am weary, O my Father; I am weary, O my Father, and worn out. ಜಾಕೆ ಎಂಬುವನ ಮಗನಾದ ಆಗೂರನ ದೈವಿಕ ಬುದ್ಧಿಮಾತುಗಳು. ಇವನು ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು: “ದೇವರೇ, ನಾನು ದಣಿದಿದ್ದೇನೆ, ಆದರೆ ನಾನು ಜಯಶಾಲಿಯಾಗುವೆನು.
2 Surely I am too brutish to be a man; I do not have the understanding of a man. ಖಂಡಿತವಾಗಿಯೂ ನಾನು ಮನುಷ್ಯನಲ್ಲ, ಮೃಗ. ನನಗೆ ಮನುಷ್ಯನ ಗ್ರಹಿಕೆ ಇಲ್ಲ.
3 I have not learned wisdom, nor do I have knowledge of the Holy One. ನಾನು ಜ್ಞಾನವನ್ನು ಕಲಿತುಕೊಂಡಿಲ್ಲ; ಅಲ್ಲದೆ ಪರಿಶುದ್ಧ ದೇವರ ಅರಿವು ನನಗಿಲ್ಲ.
4 Who has ascended to heaven and come down? Who has gathered the wind in the hollow of his hands? Who has wrapped the waters in a garment? Who has established all the ends of the earth? What is his name, and what is his son's name? Surely you know! ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? ಅವರ ಹೆಸರೇನು? ಅವರ ಮಗನ ಹೆಸರೇನು? ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು!
5 Every word of our Father proves true; he is a shield to those who take refuge in him. “ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು; ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ.
6 Do not add to his words, or he will rebuke you and prove you a liar. ದೇವರ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ. ಇಲ್ಲವಾದರೆ ದೇವರು ನಿನ್ನನ್ನು ಗದರಿಸಿ ನಿನ್ನನ್ನು ಸುಳ್ಳುಗಾರನೆಂದು ಸಾಬೀತುಪಡಿಸುವರು.
7 Two things I ask of you; do not withhold them from me before I die: “ಯೆಹೋವ ದೇವರೇ, ನಾನು ನಿಮ್ಮನ್ನು ಎರಡು ವಿಷಯಗಳನ್ನು ಕೇಳುತ್ತೇನೆ. ನಿರಾಕರಿಸಬೇಡಿ ನಾನು ಸಾಯುವ ಮೊದಲು ಅವೆರಡನ್ನು ಅನುಗ್ರಹಿಸಿರಿ.
8 Keep falsehood and lies far from me; give me neither poverty nor riches; feed me only the bread that is my portion, ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ. ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ. ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ.
9 for if I am full, I may deny you and say, "Who is God?" or if I am poor, I may steal and profane the name of my God. ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.
10 Do not slander a servant to his master, or he will curse you and you will be found guilty. “ಕೆಲಸಗಾರರ ವಿಷಯವಾಗಿ ಅವನ ಯಜಮಾನನಿಗೆ ದೂರು ಹೇಳಬೇಡ; ಇದರಿಂದ ಆ ಕೆಲಸಗಾರ ನಿನ್ನನ್ನು ಶಪಿಸಾನು, ಆಗ ನೀನು ದೋಷಿಯಾಗುವೆ.
11 There is a generation that curses its father and does not bless its mother. “ತಮ್ಮ ತಂದೆಯನ್ನು ಶಪಿಸಿ, ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವವರು ಇದ್ದಾರೆ.
12 There is a generation clean in its own eyes yet not washed of its filth. ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವವರು ಇದ್ದಾರೆ; ಆದರೆ ಅವರು ತಮ್ಮ ಕೊಳೆಯನ್ನು ತೊಳೆದುಕೊಂಡಿರುವುದಿಲ್ಲ.
13 There is a generation—how proud its eyes, how scornful its glances! ಅವರ ಕಣ್ಣುಗಳು ಯಾವಾಗಲೂ ಅಹಂಕಾರದಿಂದ ಕೂಡಿರುತ್ತವೆ. ಅವರ ದೃಷ್ಟಿ ಅಸಹ್ಯವಾಗಿದೆ.
14 There is a generation whose teeth are swords, whose fangs are knives, to devour the poor from the earth and the needy from among mankind. ಖಡ್ಗಗಳಂತೆ ಹಲ್ಲುಗಳುಳ್ಳವರೂ ಚೂರಿಗಳಂತೆ ದವಡೆಗಳುಳ್ಳವರೂ ಬಡವರನ್ನು ಭೂಮಿಯಿಂದಲೂ ದಿಕ್ಕಿಲ್ಲದವರನ್ನು ಮಾನವಕುಲದಿಂದಲೂ ಕಬಳಿಸುವವರೂ ಆಗಿದ್ದಾರೆ.
15 The leech has two daughters: "Give" and "Give." Three things are never satisfied; four never say, "Enough": “ಜಿಗಣೆಗೆ, ‘ಕೊಡು! ಕೊಡು!’ ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳುಂಟು. “ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ, ಹೌದು, ‘ಸಾಕು!’ ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ:
16 The grave, the barren womb, the land never satisfied with water, and the fire that never says, "Enough." ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ಎಂದೂ ತೃಪ್ತಿ ಹೊಂದದ ಭೂಮಿ, ‘ಸಾಕು!’ ಎಂದು ಹೇಳದಿರುವ ಬೆಂಕಿ.
17 The eye that mocks a father and scorns to obey a mother—the ravens of the valley will pluck it out, and the young vultures will eat it. “ತನ್ನ ತಂದೆಯನ್ನು ಹಾಸ್ಯಮಾಡಿ, ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. ರಣಹದ್ದುಗಳು ಅದನ್ನು ತಿಂದುಬಿಡುವವು.
18 Three things are too wonderful for me; four I do not understand: “ನನಗೆ ಆಶ್ಚರ್ಯವಾದ ಮೂರು ಸಂಗತಿಗಳಿವೆ, ಹೌದು, ನನಗೆ ಅರ್ಥವಾಗದಿರುವ ನಾಲ್ಕು ಸಂಗತಿಗಳಿವೆ:
19 the way of an eagle in the sky, the way of a serpent on a rock, the way of a ship in the heart of the sea, and the way of a man with a young woman. ಆಕಾಶದಲ್ಲಿ ಹದ್ದಿನ ಮಾರ್ಗ, ಬಂಡೆಯ ಮೇಲೆ ಸರ್ಪದ ಮಾರ್ಗ, ಸಮುದ್ರ ನಡುವೆ ಹಡಗಿನ ಮಾರ್ಗ, ಯುವಕ ಯುವತಿಯರ ಪ್ರೀತಿ ಮಾರ್ಗ.
20 This is the way of an adulteress: she eats and wipes her mouth and says, "I have done no wrong." “ಜಾರಸ್ತ್ರೀಯ ನಡತೆಯು ಹೀಗಿದೆ: ಅವಳು ತಿಂದು, ತನ್ನ ಬಾಯನ್ನು ಒರೆಸಿಕೊಂಡು ‘ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಹೇಳುತ್ತಾಳೆ.
21 Under three things the earth trembles; under four it cannot bear up: “ಭೂಮಿಯು ಮೂರು ವಿಷಯಗಳಿಂದ ಕಳವಳಗೊಳ್ಳುತ್ತದೆ, ನಾಲ್ವರನ್ನು ಅದು ತಾಳಲಾರದು:
22 a servant when he becomes king, and a fool when he is filled with food; ಅರಸನಾಗುವ ದಾಸನು, ತಿನ್ನಲು ಸಾಕಷ್ಟು ಪಡೆಯುವ ಮೂರ್ಖನು,
23 an unloved woman when she finally marries, and a servant girl when she displaces her mistress. ತಿರಸ್ಕಾರಕ್ಕೆ ಅರ್ಹಳಾದ ಮಹಿಳೆ, ಮದುವೆಯಾಗುವುದು. ಪತ್ನಿಯ ಸ್ಥಾನವನ್ನು ಕಸಿದುಕೊಂಡ ದಾಸಿ.
24 Four things on earth are small, yet they are exceedingly wise: “ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ:
25 the ants are a people not strong, yet they store up their food in the summer; ಇರುವೆಗಳು ಬಲಹೀನ ಜೀವಿಗಳು, ಆದರೂ ಅವು ಬೇಸಿಗೆಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.
26 the rock badgers are a people not mighty, yet they make their homes in the cliffs; ಬೆಟ್ಟದ ಮೊಲಗಳು ಬಲಹೀನ ಪ್ರಾಣಿಗಳಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುತ್ತವೆ.
27 the locusts have no king, yet all of them advance in ranks; ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.
28 the lizard you can catch in your hands, yet it is found in kings' palaces. ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ ಅರಸನ ಅರಮನೆಗಳಲ್ಲಿ ಕಂಡುಬರುತ್ತವೆ.
29 Three things are stately in their stride; four are stately in their walk: “ಗಂಭೀರ ಗಮನದ ಮೂರು ಪ್ರಾಣಿಗಳಿವೆ, ಹೌದು, ಗಂಭೀರ ಗತಿಯ ನಾಲ್ಕಿವೆ:
30 the lion, mightiest among beasts, which turns back before nothing; ಮೃಗಗಳಲ್ಲಿ ಬಲಿಷ್ಠವಾಗಿರುವ ಸಿಂಹವು, ಯಾವುದಕ್ಕೂ ಹಿಮ್ಮೆಟ್ಟದು.
31 the strutting rooster, the male goat, and a king whose army is with him. ಕತ್ತೆತ್ತಿ ನಡೆಯುವ ಹುಂಜ, ಹೋತವು, ತನ್ನ ಸುತ್ತಲೂ ಸೈನಿಕರಿರುವ ಅರಸನು.
32 If you have been foolish, exalting yourself, or if you have schemed evil, put your hand over your mouth. “ನೀನು ಹೆಮ್ಮೆಪಟ್ಟು ಮೂರ್ಖನಾಗಿ ನಡೆದಿದ್ದರೆ, ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ, ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೊ.
33 For pressing milk produces curds, pressing the nose produces blood, and pressing anger produces strife. ಹಾಲನ್ನು ಕಡೆಯುವುದರಿಂದ ಬೆಣ್ಣೆ, ಮೂಗನ್ನು ಹಿಂಡುವುದರಿಂದ ರಕ್ತ, ಹಾಗೆಯೇ ಕೋಪವನ್ನೆಬ್ಬಿಸುವುದರಿಂದ ಜಗಳ.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]