Skip to content
The Believer's Library

Biblica® Open Kannada Contemporary Version 2022

Proverbs 31 OKCV

Show OKCV only
Verse × ×
1 The words of King Lemuel—an oracle his mother taught him: ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವಿಕ ಬುದ್ಧಿಮಾತುಗಳು:
2 What, my son? What, son of my womb? What, son of my vows? ನನ್ನ ಮಗನೇ ಕೇಳು, ನನ್ನ ಗರ್ಭಪುತ್ರನೇ ಕೇಳು! ನನ್ನ ಪ್ರಾರ್ಥನೆಗೆ ಉತ್ತರವಾದ ನನ್ನ ಮಗನೇ ಕೇಳು!
3 Do not give your strength to women, or your ways to those who destroy kings. ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸದಿರು. ರಾಜರನ್ನೇ ಹಾಳುಮಾಡಬಲ್ಲ ಸ್ತ್ರೀಯರಿಗೆ ನಿನ್ನ ಹಣ ಸಮಯವನ್ನು ವ್ಯಯಮಾಡದಿರು.
4 It is not for kings, Lemuel—not for kings to drink wine, or for rulers to crave strong drink. ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ;
5 For if they drink, they will forget what is decreed and pervert the rights of all the oppressed. ಕುಡಿದರೆ ಅವರು ನಿಯಮವನ್ನು ಮರೆತು, ಬಾಧಿತರಿಗೆ ನ್ಯಾಯವನ್ನು ನೀಡುವುದಿಲ್ಲ.
6 Give strong drink to one who is perishing, and wine to those in bitter distress. ನಾಶವಾಗುವವರಿಗೆ ಮದ್ಯಪಾನವಿರಲಿ. ಮನೋವ್ಯಥೆಪಡುವವರಿಗೆ ಮದ್ಯವಿರಲಿ.
7 Let them drink and forget their poverty, and remember their misery no more. ಅವರು ಕುಡಿದು ಬಡತನವನ್ನು ಮರೆಯಲಿ. ತಮ್ಮ ಯಾತನೆಯನ್ನು ಜ್ಞಾಪಕಕ್ಕೆ ತಾರದಿರಲಿ.
8 Open your mouth for the voiceless, for the rights of all who are left destitute. ತಮಗಾಗಿ ಮಾತನಾಡಲು ಸಾಧ್ಯವಾಗದವರಿಗಾಗಿ ಮಾತನಾಡು, ಅನಾಥರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಟ್ಟು ಮಾತನಾಡು.
9 Open your mouth, judge righteously, and defend the rights of the poor and needy. ಅವರ ಪರವಾಗಿ ಮಾತನಾಡಿ, ನೀತಿನ್ಯಾಯವನ್ನು ಸ್ಥಾಪಿಸು. ಬಡವರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ಹಕ್ಕುಬಾಧ್ಯತೆಯನ್ನು ಕಾಪಾಡು.
10 A woman of valor—who can find her? She is far more precious than jewels. ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.
11 The heart of her husband trusts in her, and he will lack nothing of value. ಅವಳ ಪತಿಯ ಹೃದಯವು ಅವಳಲ್ಲಿ ಭರವಸೆ ಇಡುತ್ತದೆ, ಅವನಿಗೆ ಯಾವ ಆದಾಯದ ಕೊರತೆಯೂ ಇರುವುದಿಲ್ಲ.
12 She does him good and not harm, all the days of her life. ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೆಯದನ್ನೇ ಮಾಡುವಳು.
13 She seeks out wool and flax, and works with willing hands. ಆಕೆಯು ಉಣ್ಣೆಯನ್ನೂ ಸೆಣಬನ್ನೂ ತಂದು, ತನ್ನ ಚಟುವಟಿಕೆಯ ಕೈಗಳಿಂದ ಕೆಲಸ ಮಾಡುವಳು.
14 She is like the merchant ships, bringing her food from afar. ಆಕೆಯು ವರ್ತಕರ ಹಡಗುಗಳಂತೆ ಇರುವಳು; ದೂರದಿಂದ ಆಹಾರವನ್ನು ಆಕೆಯು ತರುವಳು.
15 She rises while it is still night, provides food for her household, and portions for her servant girls. ಇನ್ನೂ ಕತ್ತಲಿರುವಾಗಲೇ ಆಕೆಯು ಏಳುವಳು; ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು, ತನ್ನ ದಾಸಿಯರಿಗೆ ದಿನದ ಕೆಲಸವನ್ನು ಹಂಚುವಳು.
16 She considers a field and buys it; from the fruit of her hands she plants a vineyard. ಆಕೆಯು ಹೊಲವನ್ನು ನೋಡಿ, ಅದನ್ನು ಕೊಂಡುಕೊಳ್ಳುತ್ತಾಳೆ. ತನ್ನ ಕೈಕೆಲಸದ ಆದಾಯದಿಂದ ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
17 She wraps herself in strength and makes her arms strong. ಆಕೆಯು ನಡುಕಟ್ಟಿ ಆಸಕ್ತಿಯಿಂದ ಕೆಲಸ ಮಾಡುತ್ತಾಳೆ. ತನ್ನ ಶಕ್ತಿಯುತ ತೋಳುಗಳಿಂದ ಕೆಲಸ ಮಾಡುತ್ತಾಳೆ.
18 She perceives that her trading is profitable; her lamp does not go out at night. ತನ್ನ ವ್ಯಾಪಾರವು ಲಾಭದಾಯಕವೆಂದು ಅವಳು ನೋಡುತ್ತಾಳೆ. ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
19 She puts her hands to the spinning staff, and her hands grasp the spindle. ಅವಳು ರಾಟೆಯ ಮೇಲೆ ಕೈಹಾಕಿ, ಕದಿರನ್ನು ಹಿಡಿಯುತ್ತಾಳೆ.
20 She opens her hand to the poor and reaches out her hands to the needy. ಆಕೆಯು ಬಡವರಿಗಾಗಿ ಕೈ ಬಿಚ್ಚಿ ಕೊಡುತ್ತಾಳೆ. ಹೌದು, ದಿಕ್ಕಿಲ್ಲದವರಿಗೆ ದಾನ ಮಾಡುತ್ತಾಳೆ.
21 She has no fear for her household when it snows, for all her household are clothed in scarlet. ಚಳಿಗಾಲದಲ್ಲಿ ತನ್ನ ಮನೆಯವರ ಬಗ್ಗೆ ಆಕೆಯು ಚಿಂತಿಸಬೇಕಾಗಿಲ್ಲ. ಏಕೆಂದರೆ ಆಕೆಯ ಮನೆಯವರೆಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.
22 She makes coverings for herself; her clothing is fine linen and purple. ಆಕೆಯು ತಾನೇ ಕಂಬಳಿಗಳನ್ನು ನೇಯುತ್ತಾಳೆ. ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.
23 Her husband is known in the gates, when he sits among the elders of the land. ಆಕೆಯ ಪತಿಯು ಪಟ್ಟಣದಲ್ಲಿ ಸನ್ಮಾನಿತ. ದೇಶದ ಹಿರಿಯರ ಮಧ್ಯದಲ್ಲಿ ಪ್ರಸಿದ್ಧನಾಗಿ ಕುಳಿತಿರುವನು.
24 She makes linen garments and sells them, and supplies sashes to the merchants. ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ. ಆಕೆಯು ನಡುಕಟ್ಟುಗಳನ್ನು ತಯಾರಿಸಿ ವರ್ತಕರಿಗೆ ಒದಗಿಸುತ್ತಾಳೆ.
25 Strength and dignity are her clothing, and she laughs at the days to come. ಆಕೆಯ ಉಡುಪು ಬಲವೂ ಘನತೆಯೂ ಆಗಿವೆ. ಭವಿಷ್ಯತ್ತಿನ ಭಯವಿಲ್ಲದೆ ಆಕೆಯು ನಗುವಳು.
26 She opens her mouth with wisdom, and faithful instruction is on her tongue. ಆಕೆಯು ಜ್ಞಾನದಿಂದ ಮಾತನಾಡುತ್ತಾಳೆ. ಆಕೆಯ ನಾಲಿಗೆಯ ಮೇಲೆ ನಂಬಿಗಸ್ತ ಶಿಕ್ಷಣ ಇದೆ.
27 She watches over the ways of her household and does not eat the bread of idleness. ಆಕೆಯು ತನ್ನ ಗೃಹಕೃತ್ಯಗಳನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ. ಸೋಮಾರಿಯಾಗಿ ಕೆಲಸಮಾಡದೆ ಆಹಾರವನ್ನು ತಿನ್ನುವುದಿಲ್ಲ.
28 Her children rise up and call her blessed; her husband also, and he praises her: ಆಕೆಯ ಮಕ್ಕಳು ಎದ್ದು, ಆಕೆಯನ್ನು ಧನ್ಯಳೆಂದು ಕರೆಯುವರು. ಆಕೆಯ ಪತಿಯು ಸಹ ಆಕೆಯನ್ನು,
29 "Many daughters have done valiantly, but you surpass them all." “ಬಹುಮಂದಿ ಸ್ತ್ರೀಯರು ಗುಣವತಿಯರಾಗಿದ್ದಾರೆ. ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು,” ಎಂದು ಹೊಗಳುವನು.
30 Charm is deceptive and beauty is fleeting, but a woman who reveres our Father—she will be praised. ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ. ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.
31 Give her the fruit of her hands, and let her works praise her in the gates. ಆಕೆಯ ಕೈಕೆಲಸಕ್ಕೆ ತಕ್ಕ ಪ್ರತಿಫಲವನ್ನು ಸಲ್ಲಿಸಿ ಗೌರವಿಸಿರಿ. ಪಟ್ಟಣದ ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]