Skip to content
The Believer's Library

Biblica® Open Kannada Contemporary Version 2022

Proverbs 4 OKCV

Show OKCV only
Verse × ×
1 Listen, my children, to a father's instruction; pay attention, and gain understanding. ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ; ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ.
2 I am giving you sound teaching, so do not abandon my instruction. ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು, ನನ್ನ ಉಪದೇಶವನ್ನು ಬಿಟ್ಟುಬಿಡಬೇಡಿರಿ.
3 For I too was a son to my father, tender and the only beloved of my mother. ನಾನೂ ಕೂಡ ನನ್ನ ತಂದೆಗೆ ನೆಚ್ಚಿನ ಮಗನೂ ನನ್ನ ತಾಯಿಗೆ ಮುದ್ದು ಮಗನೂ ಆಗಿದ್ದೆನು.
4 He taught me and said, "Let your heart hold on to my words; keep my commands and you will live. ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ, “ನನ್ನ ಮಾತುಗಳನ್ನು ಮನಃಪೂರ್ವಕವಾಗಿ ಪಾಲಿಸು; ನನ್ನ ಆಜ್ಞೆಗಳನ್ನು ಕೈಗೊಳ್ಳು, ಆಗ ನೀನು ಬಾಳುವೆ.
5 Get wisdom, get understanding; do not forget, and do not turn away from the words of my mouth. ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು; ನನ್ನ ಮಾತುಗಳನ್ನು ಮರೆಯದಿರು, ಅವುಗಳಿಂದ ದೂರವಾಗಬೇಡ.
6 Do not forsake her, and she will protect you; love her, and she will watch over you. ಜ್ಞಾನವನ್ನು ಬಿಟ್ಟುಬಿಡಬೇಡ, ಆಕೆ ನಿನ್ನನ್ನು ಕಾಪಾಡುವಳು; ಆಕೆಯನ್ನು ಪ್ರೀತಿಸು, ಆಕೆ ನಿನ್ನನ್ನು ಕಾಯುವಳು.
7 The beginning of wisdom is this: get wisdom; and with all you acquire, get understanding. ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು; ನಿನ್ನಲ್ಲಿರುವ ಎಲ್ಲಾ ಸಂಪತ್ತನ್ನು ವ್ಯಯಮಾಡಿದರೂ ತಿಳುವಳಿಕೆಯನ್ನು ಪಡೆದುಕೋ.
8 Cherish her, and she will lift you high; embrace her, and she will bring you honor. ಜ್ಞಾನವನ್ನು ನೀನು ಅಮೂಲ್ಯವೆಂದು ಎಣಿಸು, ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿಕೊ, ಆಕೆಯು ನಿನ್ನನ್ನು ಘನಪಡಿಸುವಳು.
9 She will set a garland of grace on your head; she will present you with a crown of glory." ಆಕೆಯನ್ನು ನಿನ್ನ ತಲೆಗೆ ಮಹಿಮೆಯ ಕಿರೀಟವಾಗಿರುವಳು; ಆಕೆಯನ್ನು ನಿನಗೆ ಘನತೆಯ ಕಿರೀಟವನ್ನು ಸಮರ್ಪಿಸುವಳು.”
10 Listen, my son, and receive my words, and the years of your life will be many. ಮಗನೇ, ಆಲಿಸಿ ನನ್ನ ಮಾತುಗಳನ್ನು ಸ್ವೀಕರಿಸು, ಆಗ ನಿನ್ನ ಜೀವನದ ವರ್ಷಗಳು ಹೆಚ್ಚುವವು.
11 I have taught you the way of wisdom; I have led you along straight paths. ಜ್ಞಾನ ಮಾರ್ಗದಲ್ಲಿ ನಾನು ನಿನಗೆ ಶಿಕ್ಷಣಕೊಡುವೆನು, ನೇರ ಮಾರ್ಗಗಳಲ್ಲಿ ನಿನ್ನನ್ನು ಮುನ್ನಡಿಸುವೆನು.
12 When you walk, your steps will not be held back; and when you run, you will not stumble. ನೀನು ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು; ನೀನು ಓಡುವಾಗ ಮುಗ್ಗರಿಸಿ ಬೀಳುವುದಿಲ್ಲ.
13 Hold on to instruction, do not let go; guard her, for she is your life. ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.
14 Do not set foot on the path of the wicked, and do not walk in the way of evildoers. ದುಷ್ಟರ ದಾರಿಯೊಳಗೆ ನೀನು ಪ್ರವೇಶಿಸದಿರು ಕೆಟ್ಟವರ ಮಾರ್ಗದಲ್ಲಿ ನೀನು ಹೋಗಬೇಡ.
15 Avoid it, do not travel on it; turn away from it and pass on by. ಆ ದಾರಿಯಿಂದ ತೊಲಗು, ಅದರ ಪಕ್ಕದಲ್ಲಿ ಹಾದು ಹೋಗಬೇಡ; ಅದರಿಂದ ತಪ್ಪಿಸಿಕೊಂಡು, ನಿನ್ನ ಮಾರ್ಗದಲ್ಲಿ ಮುಂದೆ ನಡೆ.
16 For they cannot sleep unless they do wrong; they are robbed of rest unless they make someone stumble. ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.
17 They feed on the bread of wickedness and drink the wine of violence. ಅವರಿಗೆ ದುಷ್ಟತನವೇ ಆಹಾರ, ಬಲಾತ್ಕಾರವೇ ಅವರಿಗೆ ದ್ರಾಕ್ಷಾರಸ.
18 But the path of the righteous is like the light of dawn, shining brighter and brighter until the full light of day. ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.
19 The way of the wicked is like deep darkness; they do not know what makes them stumble. ಆದರೆ, ದುಷ್ಟರ ಮಾರ್ಗವು ಕಗ್ಗತ್ತಲಿನಂತಿದೆ. ಅವರು ಯಾವುದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
20 My son, pay attention to my words; listen closely to my sayings. ಮಗನೇ, ನನ್ನ ಮಾತುಗಳಿಗೆ ಗಮನಕೊಡು; ನನ್ನ ನುಡಿಗಳಿಗೆ ಕಿವಿಗೊಡು.
21 Never lose sight of them; keep them deep within your heart. ಆ ನುಡಿಗಳು ನಿನ್ನ ಕಣ್ಣುಗಳಿಂದ ತಪ್ಪಿ ಹೋಗದಿರಲಿ; ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.
22 For they are life to those who find them, and healing to their whole body. ಏಕೆಂದರೆ ಆ ನುಡಿಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ, ದೇಹಕ್ಕೆಲ್ಲಾ ಆರೋಗ್ಯವೂ ಆಗಿವೆ.
23 Above all else, guard your heart, for everything you do flows from it. ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.
24 Keep crooked speech from your mouth, and keep deceitful lips far from you. ವಕ್ರಮಾತುಗಳನ್ನು ನಿನ್ನ ಬಾಯಿಂದ ತೊಲಗಿಸಿ; ಕೆಟ್ಟ ಮಾತುಗಳು ನಿನ್ನ ತುಟಿಗಳಿಂದ ದೂರವಿರಲಿ.
25 Let your eyes look straight ahead; fix your gaze directly before you. ನಿನ್ನ ದೃಷ್ಟಿ ನೇರವಾಗಿಯೇ ನೋಡಲಿ; ನಿನ್ನ ನೋಟವು ನೇರವಾಗಿ ನಿನ್ನ ಮುಂದೆಯೇ ನಾಟಿರಲಿ.
26 Give careful thought to the path for your feet, and all your ways will be secure. ನೀನು ನಡೆಯುವ ದಾರಿಯ ಬಗ್ಗೆ ಗಮನವಿರಲಿ; ನೀನು ಕೈಗೊಳ್ಳುವ ಹಾದಿ ಸ್ಥಿರವಾಗಿರಲಿ.
27 Do not turn to the right or the left; keep your foot away from evil. ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]