Skip to content
The Believer's Library

Biblica® Open Kannada Contemporary Version 2022

Proverbs 5 OKCV

Show OKCV only
Verse × ×
1 My son, pay attention to my wisdom; listen closely to my understanding, ಮಗನೇ, ನನ್ನ ಜ್ಞಾನಕ್ಕೆ ಗಮನಕೊಡು; ನನ್ನ ಒಳನೋಟದ ಮಾತುಗಳಿಗೆ ಕಿವಿಗೊಡು.
2 so that you may guard discretion and your lips may preserve knowledge. ಆಗ ನಿನ್ನ ವಿವೇಚನೆಯನ್ನು ಉಳಿಸಿಕೊಳ್ಳುವೆ. ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.
3 For the lips of the forbidden woman drip honey, and her mouth is smoother than oil, ಏಕೆಂದರೆ ಜಾರಿಣಿಯ ತುಟಿಗಳು ಜೇನುಗರೆಯುವುದು; ಅವಳ ಮಾತು ಎಣ್ಣೆಗಿಂತಲೂ ಮೃದು.
4 but in the end she is bitter as poison, sharp as a double-edged sword. ಆದರೆ ಅಂತ್ಯದಲ್ಲಿ ಅವಳು ಮಾಚಿಪತ್ರೆಯಂತೆ ಕಹಿಯೂ, ಇಬ್ಬಾಯಿ ಖಡ್ಗದಂತೆ ಹರಿತವೂ ಆಗಿರುವಳು.
5 Her feet go down to death; her steps take hold of the grave. ಅವಳ ಪಾದಗಳು ಮರಣದ ಕಡೆಗೆ ಇಳಿದುಹೋಗುತ್ತವೆ; ಅವಳ ಹೆಜ್ಜೆಗಳು ನೇರವಾಗಿ ಪಾತಾಳಕ್ಕೆ ನಡೆಸುತ್ತವೆ.
6 She gives no thought to the path of life; her ways wander, and she does not know it. ಜೀವಮಾರ್ಗದ ವಿಚಾರ ಅವಳಿಗಿಲ್ಲ; ಆದ್ದರಿಂದ ಅವಳ ಮಾರ್ಗಗಳು ಚಂಚಲವಾಗಿವೆ, ಅದರ ಅರಿವೂ ಅವಳಿಗಿಲ್ಲ.
7 And now, my sons, listen to me, and do not turn away from the words of my mouth. ಮಕ್ಕಳಿರಾ, ನನ್ನ ಕಡೆಗೆ ಈಗ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳಿಂದ ದೂರವಾಗಬೇಡಿರಿ.
8 Keep your way far from her, and do not go near the door of her house, ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು; ಅವಳ ಮನೆಯ ಬಾಗಿಲ ಹತ್ತಿರಕ್ಕೆ ಹೋಗದೆ ಇರು.
9 lest you give your honor to others and your years to one who is cruel, ನೀನು ನಿನ್ನ ಗೌರವವನ್ನು ಬೇರೆಯವರಿಗೆ ಕಳೆಯಬೇಡ, ನಿನ್ನ ಘನತೆನ್ನು ಕ್ರೂರನಿಗೂ ಕೊಡಬೇಡ.
10 lest strangers take their fill of your strength, and your hard-earned labors go to the house of a foreigner, ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆ ಎಚ್ಚರಿಕೆ, ನಿನ್ನ ಪ್ರಯಾಸದ ಫಲವು ಪರರ ಮನೆ ಸೇರದಂತೆ ನೋಡಿಕೋ.
11 and at your end you groan, when your flesh and body are consumed, ನಿನ್ನ ಜೀವನದ ಅಂತ್ಯದಲ್ಲಿ ನಿನ್ನ ದೇಹವೂ ಕ್ಷೀಣಿಸಿದಾಗ, ನೀನು ನರಳಬೇಕಾದೀತು.
12 and you say, "How I hated discipline, and my heart despised correction! ಆಗ ನೀನು, “ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
13 I did not listen to the voice of my teachers or heed my instructors. ನನ್ನ ಬೋಧಕರ ಸ್ವರಕ್ಕೆ ನಾನು ವಿಧೇಯನಾಗದೆ ಹೋದೆ. ನನ್ನ ಉಪದೇಶಕರಿಗೆ ನಾನು ಕಿವಿಗೊಡದೆ ಹೋದೆ.
14 I was at the brink of utter ruin in the midst of the assembled congregation." ನಾನು ದೇವರ ಸಭೆಯಲ್ಲಿ ಗಂಭೀರ ಸಮಸ್ಯೆಗೆ ಒಳಗಾದೆ,” ಎಂದು ಹೇಳುವೆ.
15 Drink water from your own cistern, flowing water from your own well. ನಿನ್ನ ಸ್ವಂತ ಕೊಳದ ನೀರನ್ನು ಕುಡಿ, ನಿನ್ನ ಸ್ವಂತ ಬಾವಿಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
16 Should your springs overflow in the streets, your streams of water in the public squares? ನಿನ್ನ ಬುಗ್ಗೆಗಳು ಬೀದಿಗಳಲ್ಲಿ ಹರಡುವುದು ಯುಕ್ತವೋ? ನೀರಿನ ಒರತೆಗಳು ಬೀದಿಚೌಕಗಳಲ್ಲಿ ಹರಿಯುವುದು ಸರಿಯೇ?
17 Let them be yours alone, and not shared with strangers. ಅವು ನಿನಗೆ ಸ್ವಂತವಾಗಿರಲಿ; ಪರರು ಭಾಗಿಗಳಾಗಿರಬಾರದು.
18 May your fountain be blessed, and rejoice in the wife of your youth, ನಿನ್ನ ಬುಗ್ಗೆಯು ಆಶೀರ್ವಾದ ಹೊಂದಲಿ; ನಿನ್ನ ಆನಂದವು ಯೌವನದ ಕಾಲದ ಹೆಂಡತಿಯೊಂದಿಗಿರಲಿ.
19 a loving doe, a graceful deer. May her love satisfy you always; may you be captivated continually by her love. ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ; ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ; ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು.
20 Why then, my son, should you be captivated by a forbidden woman and embrace another man's wife? ಮಗನೇ, ಬೇರೆಯವನ ಹೆಂಡತಿಗೆ ವಶವಾಗುವುದೇಕೆ? ಅನ್ಯಳ ಎದೆಯನ್ನೇಕೆ ಅಪ್ಪಿಕೊಳ್ಳುವೆ?
21 For a man's ways are before the eyes of our Father, and he examines all the man's paths. ನಿನ್ನ ಮಾರ್ಗಗಳು ಯೆಹೋವ ದೇವರ ಮುಂದೆಯೇ ಇವೆ. ಅವರು ನಿನ್ನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾರೆ.
22 The wicked are caught by their own wrongdoing and held fast in the cords of their sin. ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.
23 He will die for lack of discipline, and he will go astray because of his great foolishness. ಶಿಸ್ತುಪಾಲನೆಯಿಲ್ಲದೆ ಅವನು ನಾಶವಾಗುವನು; ತನ್ನ ಅತಿಮೂರ್ಖತನದಿಂದಲೇ ತಪ್ಪಿಹೋಗುವನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]