Skip to content
The Believer's Library

Biblica® Open Kannada Contemporary Version 2022

Proverbs 6 OKCV

Show OKCV only
Verse × ×
1 My son, if you have put up security for your neighbor, if you have shaken hands in pledge for a stranger, ಮಗನೇ, ನಿನ್ನ ನೆರೆಯವನಿಗೆ ನೀನು ಹೊಣೆಯಾಗಿದ್ದರೆ, ಪರನಿಗಾಗಿ ನಿನ್ನ ಕೈಯನ್ನು ಒಡ್ಡಿದ್ದರೆ,
2 you have been snared by the words of your mouth, caught by the words of your mouth. ನೀನು ನುಡಿದ ನಿನ್ನ ಬಾಯಿ ಮಾತುಗಳಿಂದಲೇ ಸಿಕ್ಕಿಕೊಂಡಿರುವೆ. ನಿನ್ನ ಬಾಯಿ ಮಾತುಗಳೇ ನಿನ್ನನ್ನು ಸೆರೆಹಿಡಿದಿದೆ.
3 Then do this, my son, and free yourself, for you are now at your neighbor's mercy: go, humble yourself, and plead with your neighbor. ಮಗನೇ, ನೀನು ನಿನ್ನ ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ, ನಿನ್ನನ್ನು ನೀನು ತಪ್ಪಿಸಿಕೊಳ್ಳಲು ಇದನ್ನು ಮಾಡು: ಹೋಗಿ ನಿನ್ನನ್ನು ನೀನು ತಗ್ಗಿಸಿಕೋ, ನಿನ್ನ ನೆರೆಯವನಿಗೆ ವಿಶ್ರಾಂತಿಯನ್ನು ಕೊಡಬೇಡ.
4 Give no sleep to your eyes, no slumber to your eyelids. ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ನಿನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
5 Free yourself like a gazelle from the hand, like a bird from the hand of the trapper. ಬೇಟೆಗಾರನ ಕೈಯಿಂದ ಜಿಂಕೆಯೂ, ಬಲೆ ಬೀಸುವವನ ಕೈಯಿಂದ ಪಕ್ಷಿಯೂ ತಪ್ಪಿಸಿಕೊಳ್ಳುವಂತೆ ನೀನು ತಪ್ಪಿಸಿಕೋ.
6 Go to the ant, you sluggard; consider her ways and be wise. ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವಂತನಾಗು.
7 Without having any chief, officer, or ruler, ನಾಯಕನಾಗಲೀ, ಮೇಲ್ವಿಚಾರಕನಾಗಲೀ, ಅಧಿಕಾರಿಯಾಗಲೀ ಇರುವೆಗೆ ಇಲ್ಲದೆ ಹೋದರೂ,
8 she prepares her bread in summer and gathers her food in harvest. ಬೇಸಿಗೆಯಲ್ಲಿ ಅದು ತನ್ನ ಆಹಾರವನ್ನು ಸಂಗ್ರಹಿಸುತ್ತದೆ. ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿಕೊಳ್ಳುತ್ತದೆ.
9 How long will you lie there, sluggard? When will you arise from your sleep? ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆ ಮಾಡುವುದು? ನಿನ್ನ ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?
10 A little sleep, a little slumber, a little folding of the hands to rest, ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ?
11 and poverty will come upon you like a robber, and scarcity like an armed man. ಹೀಗೆ ನಿನಗೆ ಬಡತನವು ಕಳ್ಳನಂತೆಯೂ ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು.
12 A worthless person, a wicked man, goes about with crooked speech, ತೊಂದರೆಕೊಡುವವನೂ ಕೆಡುಕನೂ ಆಗಿರುವವನ ಬಾಯಿಂದ ಕುಟಿಲ ಮಾತೇ ಬರುವುದು.
13 winks with his eyes, signals with his feet, points with his fingers, ಅವನು ಕಣ್ಣು ಮಿಟುಕಿಸುತ್ತಾನೆ, ಕಾಲು ಕೆರೆಯುತ್ತಾನೆ, ಬೆರಳು ಸನ್ನೆಮಾಡುತ್ತಾನೆ,
14 with perverted heart he devises evil, continually sowing discord; ಅವನು ತನ್ನ ಹೃದಯದಲ್ಲಿ ಮೋಸಕರ ಯೋಜನೆಯನ್ನೇ ಮಾಡುತ್ತಾನೆ; ಯಾವಾಗಲೂ ಅವನು ಜಗಳವನ್ನು ಕಲ್ಪಿಸುತ್ತಾನೆ.
15 therefore calamity will come upon him suddenly; in a moment he will be broken beyond healing. ಆದ್ದರಿಂದ ಅವನಿಗೆ ವಿಪತ್ತು ಬೇಗ ಬರುವುದು; ಯಾವ ಪರಿಹಾರವಿಲ್ಲದೆ ಅವನು ತಟ್ಟನೆ ನಾಶವಾಗುವನು.
16 There are six things our Father hates, seven that are detestable to him: ಈ ಆರು ವಿಷಯಗಳನ್ನು ಯೆಹೋವ ದೇವರು ಹಗೆ ಮಾಡುತ್ತಾರೆ; ಹೌದು, ಏಳು ದೇವರಿಗೆ ಅಸಹ್ಯವಾಗಿವೆ, ಅವು ಯಾವವೆಂದರೆ:
17 haughty eyes, a lying tongue, and hands that shed innocent blood, ಹೆಮ್ಮೆಯ ದೃಷ್ಟಿ, ಸುಳ್ಳಾಡುವ ನಾಲಿಗೆ, ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,
18 a heart that devises wicked plans, feet that hurry to run to evil, ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ನುಗ್ಗಲು ತ್ವರೆಪಡುವ ಕಾಲುಗಳು,
19 a false witness who breathes out lies, and one who sows discord among brothers. ಅಸತ್ಯವನ್ನಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.
20 My son, keep your father's commandment, and do not forsake your mother's teaching. ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಗೊಳ್ಳು, ನಿನ್ನ ತಾಯಿಯ ಬೋಧನೆಯನ್ನು ತ್ಯಜಿಸಬೇಡ.
21 Bind them on your heart always; tie them around your neck. ಅವುಗಳನ್ನು ಯಾವಾಗಲೂ ನಿನ್ನ ಹೃದಯದಲ್ಲಿ ಬಂಧಿಸಿಕೋ. ಅವುಗಳನ್ನು ನಿನ್ನ ಕೊರಳಿಗೆ ಧರಿಸಿಕೋ.
22 When you walk, they will lead you; when you lie down, they will watch over you; and when you awake, they will talk with you. ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ. ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ.
23 For the commandment is a lamp and the teaching a light, and the reproofs of discipline are the way of life, ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ.
24 to keep you from the evil woman, from the smooth tongue of the adulteress. ಅವು ಕೆಟ್ಟ ಹೆಂಗಸಿನಿಂದಲೂ, ಪರಸ್ತ್ರೀಯ ವಂಚಕ ಮಾತಿನಿಂದಲೂ ನಿನ್ನನ್ನು ತಪ್ಪಿಸಿ ಕಾಪಾಡಬಲ್ಲವು.
25 Do not desire her beauty in your heart, and do not let her capture you with her eyelashes; ನಿನ್ನ ಹೃದಯ ಅವಳ ಸೌಂದರ್ಯವನ್ನು ಮೋಹಿಸದಿರಲಿ. ಅವಳ ಕಣ್ಣುರೆಪ್ಪೆಗಳಿಂದ ಅವಳು ನಿನ್ನನ್ನು ವಶಮಾಡಿಕೊಳ್ಳದೆ ಇರಲಿ.
26 for the price of a prostitute is only a loaf of bread, but a married woman hunts down a precious life. ಏಕೆಂದರೆ ವೇಶ್ಯೆಯನ್ನು ಊಟದಿಂದ ಕೊಂಡುಕೊಳ್ಳಬಹುದು, ಆದರೆ ವ್ಯಭಿಚಾರಿಣಿ ಅಮೂಲ್ಯ ಜೀವವನ್ನೇ ಬೇಟೆಯಾಡುವಳು.
27 Can a man carry fire next to his chest and his clothes not be burned? ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ, ಅವನ ವಸ್ತ್ರಗಳು ಸುಡುವುದಿಲ್ಲವೋ?
28 Or can one walk on hot coals and his feet not be scorched? ಒಬ್ಬನು ಧಗಧಗಿಸುವ ಕೆಂಡದ ಮೇಲೆ ನಡೆದರೆ, ಅವನ ಪಾದಗಳು ಸುಡುವುದಿಲ್ಲವೋ?
29 So is he who sleeps with his neighbor's wife; none who touches her will go unpunished. ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು.
30 People do not despise a thief if he steals to satisfy his appetite when he is hungry, ಹಸಿದಾಗ ಕಳ್ಳನು ತನ್ನ ಹಸಿವೆಯನ್ನು ತೃಪ್ತಿಪಡಿಸಲು ಕಳವು ಮಾಡಿದರೆ, ಜನರು ಅವನನ್ನು ಹೀಯಾಳಿಸುವುದಿಲ್ಲ.
31 but if he is caught, he will pay sevenfold; he will give all the goods of his house. ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡಬೇಕಾಗುವುದು. ತನ್ನ ಮನೆಯ ಆಸ್ತಿಯನ್ನೆಲ್ಲಾ ಸಹ ಅವನು ಕೊಡಬೇಕಾಗುವುದು.
32 He who commits adultery lacks sense; he who does it destroys himself. ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.
33 He will get wounds and dishonor, and his disgrace will not be wiped away. ಅವನಿಗೆ ಗಾಯವೂ ಅವಮಾನವೂ ಆಗುತ್ತವೆ. ಅವನ ನಿಂದೆಯು ಎಂದಿಗೂ ಅಳಿಸಲಾಗದು.
34 For jealousy makes a man furious, and he will show no mercy in the day of vengeance. ಏಕೆಂದರೆ ಮತ್ಸರವು ಪತಿಯ ಕ್ರೋಧವನ್ನು ಉದ್ರೇಕಿಸುವುದು. ಆದ್ದರಿಂದ ಮುಯ್ಯಿ ತೀರಿಸುವಾಗ ಅವನು ಕರುಣೆ ತೋರನು.
35 He will accept no compensation; he will refuse no matter how large the bribe. ಅವನು ಯಾವ ಪರಿಹಾರವನ್ನು ಒಪ್ಪುವುದಿಲ್ಲ; ಎಷ್ಟು ದೊಡ್ಡ ಲಂಚ ಕೊಟ್ಟರೂ ಅವನು ಅದನ್ನು ತಿರಸ್ಕರಿಸುವನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]