Skip to content
The Believer's Library

Biblica® Open Kannada Contemporary Version 2022

Proverbs 7 OKCV

Show OKCV only
Verse × ×
1 My son, keep my words, and store up my commandments within you. ಮಗನೇ, ನನ್ನ ಮಾತುಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
2 Keep my commandments and live; guard my teaching as the apple of your eye. ನನ್ನ ಆಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣುಗುಡ್ಡೆಯಂತೆ ನನ್ನ ಕಟ್ಟಳೆಗಳನ್ನು ಕಾಪಾಡು.
3 Bind them on your fingers; write them on the tablet of your heart. ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿಟ್ಟುಕೋ; ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
4 Say to wisdom, "You are my sister," and call understanding your dearest friend, ಜ್ಞಾನಕ್ಕೆ, “ನೀನು ನನ್ನ ಸಹೋದರಿ,” ಎಂದೂ, ಒಳನೋಟಕ್ಕೆ, “ನನ್ನ ಬಂಧು” ಎಂದೂ ಹೇಳು.
5 to keep you from the forbidden woman, from the stranger with her smooth words. ಅವು ವ್ಯಭಿಚಾರಿಣಿಯಿಂದಲೂ ಸವಿಮಾತನಾಡುವ ದಾರಿತಪ್ಪಿದ ಸ್ತ್ರೀಯಿಂದಲೂ ನಿನ್ನನ್ನು ಕಾಪಾಡುತ್ತವೆ.
6 For at the window of my house I looked down through my lattice, ನಾನು ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ಇಣಕಿ ನೋಡಿದಾಗ,
7 and I saw among the naive, I noticed among the young men, a youth who lacked sense, ಮುಗ್ಧರ ನಡುವೆ, ಯುವಕರ ಮಧ್ಯದಲ್ಲಿ, ತಿಳುವಳಿಕೆಯಿಲ್ಲದ ಯೌವನಸ್ಥನನ್ನು ಕಂಡೆನು.
8 passing through the street near her corner, taking the road to her house, ಅವನು ಅವಳ ಮೂಲೆ ಮನೆಯ ದಿಕ್ಕಿನಲ್ಲಿ ಬೀದಿಯಿಂದ ಹಾದುಹೋಗುತ್ತಿದ್ದನು.
9 in the twilight, as the day faded, in the dark of night and gloom. ಸಂಜೆಯ ಮಬ್ಬಿನಲ್ಲಿ ರಾತ್ರಿಯ ಕತ್ತಲೆಯು ಕವಿಯುತ್ತಿತ್ತು.
10 And there a woman comes to meet him, dressed like a prostitute, with cunning in her heart. ಇಗೋ, ವೇಶ್ಯೆಯ ವಸ್ತ್ರವನ್ನು ಧರಿಸಿಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು.
11 She is loud and defiant; her feet will not stay at home. ಅವಳು ಕೂಗಾಟದವಳು, ಹಟಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವುದೇ ಇಲ್ಲ.
12 Now in the street, now in the squares, she lurks at every corner. ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ ಹೀಗೆ ಅವಳು ಮೂಲೆ ಮೂಲೆಗೂ ಹೊಂಚು ಹಾಕುತ್ತಾಳೆ.
13 She grabs him and kisses him, and with a brazen face she says to him: ಅವಳು ಆ ಯುವಕನನ್ನು ಹಿಡಿದುಕೊಂಡು ಮುದ್ದಿಟ್ಟು, ನಾಚಿಕೆಯಿಲ್ಲದೆ ಅವಳು ಹೀಗೆನ್ನುತ್ತಾಳೆ:
14 "I had peace offerings to bring; today I have paid my vows. “ಈ ದಿವಸ ನನ್ನ ಹರಕೆಗಳನ್ನು ನಾನು ಸಲ್ಲಿಸಿದ್ದೇನೆ. ನಾನು ನನ್ನ ಸಮಾಧಾನದ ಯಜ್ಞವನ್ನು ಅರ್ಪಿಸಿದ್ದೇನೆ.
15 So I came out to meet you, to look for you eagerly, and I have found you. ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ಹುಡುಕಿ ಕಂಡುಕೊಂಡಿದ್ದೇನೆ.
16 I have spread my bed with coverings, with colored linens from Egypt. ಈಜಿಪ್ಟಿನ ನಯವಾದ ನಾರು ಮಡಿಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
17 I have perfumed my bed with myrrh, aloes, and cinnamon. ರಕ್ತಬೋಳ, ಅಗರು, ಲವಂಗ, ಚಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆಗೊಳಿಸಿದ್ದೇನೆ.
18 Come, let us drink deep of love until morning; let us lose ourselves in love. ಬಾ, ಬೆಳಗಿನವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಂಡು ಕಾಮ ವಿಲಾಸಗಳಿಂದ ನಾವು ಸಂತೋಷಿಸೋಣ.
19 For my husband is not at home; he has gone on a long journey. ಏಕೆಂದರೆ ಯಜಮಾನನು ಮನೆಯಲ್ಲಿ ಇಲ್ಲ; ಅವನು ದೀರ್ಘ ಪ್ರಯಾಣದಲ್ಲಿದ್ದಾನೆ.
20 He took a bag of money with him and will not come home until the full moon." ಅವನು ತನ್ನೊಂದಿಗೆ ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; ಹುಣ್ಣಿಮೆಗೆ ಮುಂಚೆ ಅವನು ಮನೆಗೆ ಬರುವುದಿಲ್ಲ.”
21 With all her persuasive words she sways him; with her smooth lips she draws him in. ಮನವೊಲಿಸುವ ಮಾತುಗಳಿಂದ ಅವಳು ಅವನನ್ನು ದಾರಿ ತಪ್ಪಿಸಿ, ಅವಳು ತನ್ನ ಮೋಹಕ ಮಾತುಗಳಿಂದ ಅವನನ್ನು ಆಕರ್ಷಿಸುತ್ತಾಳೆ.
22 All at once he follows her, like an ox going to the slaughter, like a deer stepping into a snare, ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ, ಅಥವಾ ಜಿಂಕೆಯು ಬಲೆಗೆ ಸಿಕ್ಕಿಬೀಳುವಂತೆ,
23 until an arrow pierces its liver; like a bird darting into a trap, he does not know it will cost him his life. ಅವನು ತನ್ನ ಪ್ರಾಣವು ಅಪಾಯದಲ್ಲಿರುವುದನ್ನು ತಿಳಿಯದೆ, ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವವರೆಗೆ, ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
24 Now then, my sons, listen to me, and pay attention to what I say. ಆದ್ದರಿಂದ ನನ್ನ ಮಕ್ಕಳೇ, ನನಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.
25 Do not let your heart turn aside to her ways; do not wander into her paths. ಅವಳ ಮಾರ್ಗಗಳಿಗೆ ನಿಮ್ಮ ಹೃದಯವು ತಿರುಗದೆ ಇರಲಿ; ತಪ್ಪಿಯೂ ಅವಳ ದಾರಿಯಲ್ಲಿ ಹೋಗಬೇಡಿರಿ.
26 For she has brought down many victims; her slain are a mighty multitude. ಏಕೆಂದರೆ ಅನೇಕರು ಅವಳಿಗೆ ಬಲಿಯಾಗಿ ಬಿದ್ದಿದ್ದಾರೆ. ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.
27 Her house is the road to the grave, going down to the chambers of death. ಅವಳ ಮನೆಯು ಪಾತಾಳಕ್ಕೆ ಹೆದ್ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದು ಹೋಗುತ್ತದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]