Skip to content
The Believer's Library

Biblica® Open Kannada Contemporary Version 2022

Psalms 11 OKCV

Side by side with the Father's Heart Bible™

ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ.

1ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ.ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,”ಎಂದು ನೀವು ನನಗೆ ಹೇಗೆ ಹೇಳುವಿರಿ?

2“ಇಗೋ, ದುಷ್ಟರು ತಮ್ಮ ಬಿಲ್ಲು ಬಗ್ಗಿಸಿ;ಬಾಣವನ್ನು ಬಿಲ್ಲಿಗೆ ಹೂಡಿ,ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವುದಕ್ಕೆ ಸಿದ್ಧಮಾಡಿದ್ದಾರೆ.

3ಅಸ್ತಿವಾರಗಳೇ ಕೆಡವುತ್ತಿರಲು,ನೀತಿವಂತನು ಏನು ಮಾಡಲು ಸಾಧ್ಯ?”

4ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ;ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ.ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ;ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.

5ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ,ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.

6ಅವರು ದುಷ್ಟರ ಮೇಲೆ ಬೆಂಕಿಯನ್ನೂಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ;ಇವೇ ದುಷ್ಟರ ಪಾಲಾಗಿರಲಿ.

7ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು.ಅವರು ನ್ಯಾಯವನ್ನು ಪ್ರೀತಿಸುತ್ತಾರೆ;ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]