Side by side with the Father's Heart Bible™ ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಶೆಮಿನಿಥ್ ಸ್ವರದೊಂದಿಗೆ ಹಾಡತಕ್ಕದ್ದು. ದಾವೀದನ ಕೀರ್ತನೆ.
1ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ;ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ.
2ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ;ಅವರು ತಮ್ಮ ತುಟಿಯಿಂದ ಹೊಗಳಿ,ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.
3ಹೊಗಳಿಕೆಯ ಎಲ್ಲಾ ತುಟಿಗಳನ್ನೂಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ.
4ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು;ನಮ್ಮ ತುಟಿಗಳೇ ನಮಗೆ ಸಂರಕ್ಷಣೆನಮ್ಮ ಮೇಲೆ ಒಡೆಯನು ಯಾರು?”
5“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರುನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.“ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”
6ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು.ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.
7ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನುದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ,
8ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ,ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು.