Skip to content
The Believer's Library

Biblica® Open Kannada Contemporary Version 2022

Psalms 13 OKCV

Side by side with the Father's Heart Bible™

ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ.

1ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ?ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ?

2ಇನ್ನೆಷ್ಟರವರೆಗೆ ನನ್ನ ಆಲೋಚನೆಗಳೊಂದಿಗೆ ನಾನು ಹೋರಾಡುತ್ತಿರಬೇಕು?ದಿನನಿತ್ಯವು ನಾನು ನನ್ನ ಹೃದಯದಲ್ಲಿ ನೊಂದಿರಬೇಕೆ?ಇನ್ನೆಷ್ಟರವರೆಗೆ ನನ್ನ ಶತ್ರುವು ನನ್ನ ಮೇಲೆ ಜಯ ಹೊಂದಿರಬೇಕು?

3ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ.ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.

4“ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ,ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ.

5ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ.ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು.

6ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು,ಏಕೆಂದರೆ ಅವರು ನನಗೆ ಒಳ್ಳೆಯವರಾಗಿದ್ದಾರೆ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]