Skip to content
The Believer's Library

Biblica® Open Kannada Contemporary Version 2022

Psalms 136 OKCV

Side by side with the Father's Heart Bible™

1ಯೆಹೋವ ದೇವರಿಗೆ ಉಪಕಾರ ಸಲ್ಲಿಸಿರಿ; ಅವರು ಒಳ್ಳೆಯವರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

2ದೇವಾಧಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

3ಪ್ರಭುಗಳ ಪ್ರಭುವಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

4ಅವರೊಬ್ಬರೇ ಮಹಾ ಅದ್ಭುತಗಳನ್ನು ಮಾಡುತ್ತಾರೆ;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

5ತಮ್ಮ ಜ್ಞಾನದಿಂದ ಪರಲೋಕಗಳನ್ನು ನಿರ್ಮಿಸಿದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

6ನೀರಿನ ಮೇಲೆ ಭೂಮಿಯನ್ನು ವಿಸ್ತರಿಸಿದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

7ದೊಡ್ಡ ಬೆಳಕುಗಳನ್ನು ನಿರ್ಮಿಸಿದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

8ಸೂರ್ಯನು ಹಗಲನ್ನಾಳುವಂತೆ ಮಾಡಿದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

9ರಾತ್ರಿಯನ್ನಾಳಲು ಚಂದ್ರನನ್ನೂ, ನಕ್ಷತ್ರಗಳನ್ನೂ ಇಟ್ಟರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

10ಈಜಿಪ್ಟಿನವರ ಚೊಚ್ಚಲ ಮಕ್ಕಳನ್ನು ದಂಡಿಸಿದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

11ಇಸ್ರಾಯೇಲರನ್ನು ಈಜಪ್ಟಿನಿಂದ ಹೊರಗೆ ಬರಮಾಡಿದವರನ್ನು ಕೊಂಡಾಡಿರಿ;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

12ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

13ಕೆಂಪು ಸಮುದ್ರವನ್ನು ವಿಭಾಗಿಸಿದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

14ಇಸ್ರಾಯೇಲನ್ನು ಅದರ ನಡುವೆ ದಾಟಿಸಿದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

15ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

16ತಮ್ಮ ಜನರನ್ನು ಮರುಭೂಮಿಯಲ್ಲಿ ನಡೆಸಿದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

17ದೊಡ್ಡ ಅರಸರನ್ನು ದಂಡಿಸಿದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

18ಶ್ರೇಷ್ಠ ಅರಸರನ್ನು ಸಹ ದಂಡಿಸಿದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

19ಅಮೋರಿಯರ ಅರಸನಾದ ಸೀಹೋನನು ದಂಡನೆಹೊಂದಿದನು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

20ಬಾಷಾನಿನ ಅರಸನಾದ ಓಗನು ಸಂಹಾರವಾದ ಮತ್ತೊಬ್ಬನು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

21ಅವರ ದೇಶವನ್ನು ಬಾಧ್ಯತೆಯಾಗಿ ದೇವರು ಕೊಟ್ಟರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

22ತಮ್ಮ ಸೇವಕ ಇಸ್ರಾಯೇಲನಿಗೆ ಅದು ಸೊತ್ತಾಯಿತು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

23ನಾವು ಹೀನ ಸ್ಥಿತಿಯಲ್ಲಿದ್ದಾಗ ನಮ್ಮನ್ನು ನೆನಪಿಸಿಕೊಂಡರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

24ನಮ್ಮ ವೈರಿಗಳಿಂದ ನಮ್ಮನ್ನು ಬಿಡಿಸಿದರು;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

25ಸಕಲ ಜೀವಿಗಳಿಗೂ ಆಹಾರವನ್ನು ಕೊಡುತ್ತಾರೆ;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

26ಪರಲೋಕದ ದೇವರನ್ನು ಕೊಂಡಾಡಿರಿ;ದೇವರ ಪ್ರೀತಿಯು ಎಂದೆಂದಿಗೂ ಇರುವುದು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]