Skip to content
The Believer's Library

Biblica® Open Kannada Contemporary Version 2022

Psalms 137 OKCV

Side by side with the Father's Heart Bible™

1ಬಾಬಿಲೋನಿನ ನದಿಗಳ ಹತ್ತಿರ ನಾವು ಕುಳಿತುಕೊಂಡು,ಚೀಯೋನನ್ನು ಜ್ಞಾಪಕ ಮಾಡಿಕೊಂಡಾಗ ಅತ್ತೆವು.

2ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆನಮ್ಮ ಕಿನ್ನರಿಗಳನ್ನು ತೂಗು ಹಾಕಿದೆವು.

3ಏಕೆಂದರೆ ಅಲ್ಲಿ ನಮ್ಮನ್ನು ಸೆರೆಹಿಡಿದು ಬಂಧಿಸಿದವರು,ನಮಗೆ ಹಾಡನ್ನು ಹಾಡಲು ಹೇಳಿದ್ದರು;ನಮ್ಮನ್ನು ಪೀಡಿಸುವವರು ವಿನೋದಕ್ಕಾಗಿ ಹಾಡನ್ನು ಕೇಳಲು ಬಯಸಿದ್ದರು;“ಚೀಯೋನಿನ ಹಾಡುಗಳಲ್ಲಿ ಒಂದು ನಮಗೆ ಹಾಡಿರಿ,” ಎಂದರು.

4ಅನ್ಯದೇಶದಲ್ಲಿ ನಾವುಯೆಹೋವ ದೇವರ ಹಾಡುಗಳನ್ನು ಹಾಡುವುದು ಹೇಗೆ?

5ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ,ನನ್ನ ಬಲಗೈಯ ಕೌಶಲ್ಯ ಮರೆತು ಹೋಗಲಿ.

6ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದಿದ್ದರೆ,ಯೆರೂಸಲೇಮನ್ನು ನನ್ನ ಎಲ್ಲಾ ಸಂತೋಷಕ್ಕಿಂತಲೂ ಹೆಚ್ಚಾಗಿಡದಿದ್ದರೆ,ನನ್ನ ನಾಲಿಗೆಯು ಸೇದಿಹೋಗಲಿ.

7ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ,“ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,”ಎಂದು ಹೇಳಿದ ಎದೋಮಿನವರನ್ನುಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.

8ಹಾಳಾಗಲಿಕ್ಕಿರುವ ಬಾಬಿಲೋನ್ ನಗರವೇ,ನೀನು ನಮಗೆ ಮಾಡಿದ್ದಕ್ಕೆ ಪ್ರತೀಕಾರವನ್ನುನಿನಗೆ ಸಲ್ಲಿಸುವವನು ಧನ್ಯನು.

9ನಿಮ್ಮ ಚಿಕ್ಕ ಕೂಸುಗಳನ್ನು ಹಿಡಿದು,ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]