Skip to content
The Believer's Library

Biblica® Open Kannada Contemporary Version 2022

Psalms 141 OKCV

Side by side with the Father's Heart Bible™

ದಾವೀದನ ಕೀರ್ತನೆ.

1ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ, ನನ್ನ ಬಳಿಗೆ ಬರಲು ತ್ವರೆಪಡಿರಿ.ನಾನು ನಿಮ್ಮನ್ನು ಕರೆಯುವಾಗ, ನನಗೆ ಕಿವಿಗೊಡಿರಿ.

2ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ,ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.

3ಯೆಹೋವ ದೇವರೇ, ನನ್ನ ಬಾಯಿಗೆ ಕಾವಲಿಡಿರಿ;ನನ್ನ ತುಟಿಗಳ ಕದವನ್ನು ಕಾಯಿರಿ;

4ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡುಕೆಟ್ಟ ಕಾರ್ಯಗಳನ್ನು ಮಾಡಲುನನ್ನ ಹೃದಯ ಸೆಳೆಯದಂತೆ ಕಾಪಾಡಿರಿ;ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ.

5ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ.ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ;ನನ್ನ ತಲೆ ಅದನ್ನು ಬೇಡವೆನ್ನದಿರಲಿ;ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.

6ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗಅವರು ನನ್ನ ಮಾತು ಕೇಳುವರು.

7ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದುಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.”

8ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ;ನಿಮ್ಮನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡಿರಿ.

9ಅವರು ನನಗೆ ಒಡ್ಡಿದ ಉರುಲಿನಿಂದಲೂ,ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ.

10ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿದುಷ್ಟರು ತಮ್ಮ ಬಲೆಗಳಲ್ಲಿಯೇ ಬೀಳಲಿ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]