Side by side with the Father's Heart Bible™ ದಾವೀದನ ಮಾಸ್ಕಿಲ ರಾಗದ ಪದ್ಯ. ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ.
1ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ;ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ.
2ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ;ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ.
3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ,ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ;ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿನನಗೆ ಉರುಲನ್ನು ಒಡ್ಡಿದ್ದಾರೆ.
4ನೋಡಿರಿ ನನ್ನ ಬಲಗಡೆಯಲ್ಲಿ,ನನ್ನ ಪರವಾಗಿ ಯಾರೂ ಇಲ್ಲ;ಆಶ್ರಯವು ನನಗೆ ಇಲ್ಲ;ನನಗಾಗಿ ಚಿಂತಿಸುವವರು ಯಾರೂ ಇಲ್ಲ.
5ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ:“ನೀವು ನನ್ನ ಆಶ್ರಯವೂ,ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”
6ನನ್ನ ಕೂಗನ್ನು ಆಲೈಸಿರಿ,ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ;ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ,ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.
7ನಿಮ್ಮ ಹೆಸರನ್ನು ಕೊಂಡಾಡುವಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ;ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡುನೀತಿವಂತರು ನನ್ನ ಹತ್ತಿರ ಸೇರಿಬರುವರು.