Skip to content
The Believer's Library

Biblica® Open Kannada Contemporary Version 2022

Psalms 143 OKCV

Side by side with the Father's Heart Bible™

ದಾವೀದನ ಕೀರ್ತನೆ.

1ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ;ನನ್ನ ವಿಜ್ಞಾಪನೆಗಳಿಗೆ ಕಿವಿಗೊಡಿರಿ;ನಿಮ್ಮ ನಂಬಿಗಸ್ತಿಕೆಯಲ್ಲಿಯೂ,ನಿಮ್ಮ ನೀತಿಯಲ್ಲಿಯೂ ನನಗೆ ಉತ್ತರಕೊಡಿರಿ.

2ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ,ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.

3ಏಕೆಂದರೆ ಶತ್ರುವು ನನ್ನನ್ನು ಬೆನ್ನಟ್ಟಿ,ನಾನು ನೆಲಕಚ್ಚುವಂತೆ ಮಾಡಿದ್ದಾನೆ.ಬಹುಕಾಲದ ಹಿಂದೆ ಸತ್ತವರ ಹಾಗೆ ನನ್ನನ್ನುಕತ್ತಲೆಯಲ್ಲಿ ವಾಸಿಸುವಂತೆ ಮಾಡಿದ್ದಾನೆ.

4ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ;ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.

5ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು,ನಿಮ್ಮ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ,ನಿಮ್ಮ ಕೈಕೆಲಸವನ್ನು ಆಲೋಚಿಸುತ್ತೇನೆ.

6ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ;ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ.

7ಯೆಹೋವ ದೇವರೇ, ನನಗೆ ಬೇಗನೆ ಉತ್ತರಕೊಡಿರಿ;ನನ್ನ ಪ್ರಾಣವು ಕುಂದಿಹೋಗಿದೆ;ನಿಮ್ಮ ಮುಖವನ್ನು ನನಗೆ ಮರೆಮಾಡಬೇಡ;ಇಲ್ಲವಾದರೆ ಸಮಾಧಿಯಲ್ಲಿ ಇಳಿಯುವವರಿಗೆ ಸಮಾನನಾಗಿಬಿಡುತ್ತೇನೆ.

8ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ;ಏಕೆಂದರೆ ನಿಮ್ಮಲ್ಲಿ ಭರವಸವಿಟ್ಟಿದ್ದೇನೆ;ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸಿರಿ,ಏಕೆಂದರೆ ನನ್ನ ಪ್ರಾಣವನ್ನು ನಿಮಗೇ ಒಪ್ಪಿಸಿದ್ದೇನೆ.

9ಯೆಹೋವ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ;ನಾನು ನಿಮ್ಮಲ್ಲಿ ಅಡಗಿಕೊಳ್ಳುವಂತೆ ನಿಮ್ಮ ಬಳಿಗೆ ಬಂದಿದ್ದೇನೆ.

10ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ,ಏಕೆಂದರೆ ನೀವು ನನ್ನ ದೇವರು;ನಿಮ್ಮ ಒಳ್ಳೆಯ ಆತ್ಮವುನನ್ನನ್ನು ಸಮಹಾದಿಯಲ್ಲಿ ನಡೆಸಲಿ.

11ಯೆಹೋವ ದೇವರೇ, ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ಜೀವಿಸಮಾಡಿರಿ,ನಿಮ್ಮ ನೀತಿಗನುಸಾರ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಬಿಡಿಸಿರಿ.

12ನಿಮ್ಮ ಒಂಡಬಡಿಕೆಯ ಪ್ರೀತಿಯಿಂದ ನನ್ನ ಶತ್ರುಗಳನ್ನು ಸುಮ್ಮನಿರಿಸುವೆನು,ನನ್ನ ವೈರಿಗಳೆಲ್ಲರೂ ನಾಶವಾಗಲಿ,ನಾನು ನಿಮ್ಮ ಸೇವಕನಾಗಿದ್ದೇನೆ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]