Side by side with the Father's Heart Bible™ ದಾವೀದನ ಕೀರ್ತನೆ.
1ಯೆಹೋವ ದೇವರೇ, ನಿಮ್ಮ ಪರಿಶುದ್ಧ ಗುಡಾರದಲ್ಲಿ ವಾಸಿಸುವವರು ಯಾರು?ನಿಮ್ಮ ಪರಿಶುದ್ಧ ಪರ್ವತದಲ್ಲಿ ಬಾಳುವವರು ಯಾರು?
2ದೋಷವಿಲ್ಲದವರಾಗಿ ಜೀವಿಸಿ,ನೀತಿಯನ್ನು ನಡೆಸಿ,ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;
3ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ,ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ,ಇತರರನ್ನು ನಿಂದಿಸುವುದೂ ಇಲ್ಲ;
4ಅವರು ದುಷ್ಟರ ಸಹವಾಸ ಇಲ್ಲದವರೂಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ,ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.
5ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ;ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು.ಈ ರೀತಿಯಾಗಿ ಬಾಳುವವರುಎಂದಿಗೂ ಕದಲುವುದಿಲ್ಲ.