Skip to content
The Believer's Library

Biblica® Open Kannada Contemporary Version 2022

Psalms 150 OKCV

Side by side with the Father's Heart Bible™

1ಯೆಹೋವ ದೇವರಿಗೆ ಸ್ತೋತ್ರ!ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ;ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ.

2ದೇವರ ಮಹತ್ಕಾರ್ಯಗಳಿಗಾಗಿ ಅವರನ್ನು ಸ್ತುತಿಸಿರಿ;ದೇವರ ಮಹಾಪ್ರಭಾವಗಳಿಗಾಗಿ ಅವರನ್ನು ಸ್ತುತಿಸಿರಿ.

3ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ,ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ.

4ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ;ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ.

5ತಾಳಗಳಿಂದ ದೇವರನ್ನು ಸ್ತುತಿಸಿರಿ;ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ.

6ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ.ಯೆಹೋವ ದೇವರಿಗೆ ಸ್ತೋತ್ರ!

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]