Side by side with the Father's Heart Bible™ ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ.
1ಆಕಾಶವು ದೇವರ ಮಹಿಮೆಯನ್ನು ಸಾರುತ್ತದೆ;ಅಂತರಿಕ್ಷವು ಅವರ ಕೈಕೆಲಸವನ್ನು ಘೋಷಿಸುತ್ತದೆ.
2ಹಗಲೆಲ್ಲಾ ಅವು ಮಾತನಾಡುತ್ತವೆ;ರಾತ್ರಿಯೆಲ್ಲಾ ಅವು ಅರಿವನ್ನು ಪ್ರಕಟಿಸುತ್ತವೆ.
3ಅವುಗಳಿಗೆ ಮಾತೂ ಇಲ್ಲ, ಪದವೂ ಇಲ್ಲ,ಅವುಗಳ ಸ್ವರವು ಕೇಳುವುದೂ ಇಲ್ಲ.
4ಅವುಗಳ ಧ್ವನಿ ಭೂಲೋಕವೆಲ್ಲಾ ಹರಡಿವೆ;ಅವುಗಳ ಮಾತುಗಳೋ ಲೋಕದ ಕಟ್ಟಕಡೆಯವರೆಗೂ ಹೋಗುತ್ತವೆ;ಆಕಾಶದಲ್ಲಿ ದೇವರು ಸೂರ್ಯನಿಗೆ ಗುಡಾರ ಹಾಕಿದ್ದಾರೆ.
5ಸೂರ್ಯನು ಮದುಮಗನಂತೆ ತನ್ನ ಕೊಠಡಿಯಿಂದ ಹೊರಟುಬಂದು,ಪಂದ್ಯಕ್ಕೆ ಹರ್ಷದಿಂದ ಓಡುವ ಪರಾಕ್ರಮಶಾಲಿಯಂತೆ ಇದ್ದಾನೆ.
6ಆಕಾಶದ ಒಂದು ಕಡೆಯಿಂದ ಉದಯಿಸಿಮತ್ತೊಂದು ಕಡೆಯವರೆಗೆ ಹೊರಟು ಪ್ರಯಾಣಿಸುತ್ತಾನೆ;ಅದರ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
7ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು,ಪ್ರಾಣಕ್ಕೆ ಜೀವಕರವಾಗಿದೆ;ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು,ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.
8ಯೆಹೋವ ದೇವರ ಸೂತ್ರಗಳು ನೀತಿಯುಳ್ಳವುಗಳಾಗಿದ್ದುಅವು ಹೃದಯಕ್ಕೆ ಆನಂದಕರವಾಗಿವೆ;ಯೆಹೋವ ದೇವರ ಆಜ್ಞೆಗಳು ಸ್ಪಷ್ಟವಾಗಿದ್ದು,ಕಣ್ಣುಗಳಿಗೆ ಪ್ರಕಾಶಕರವಾಗಿವೆ.
9ಯೆಹೋವ ದೇವರ ಭಯವು ಶುದ್ಧವಾಗಿದ್ದು,ಎಂದೆಂದಿಗೂ ಶಾಶ್ವತವಾಗಿದೆ.ಯೆಹೋವ ದೇವರ ತೀರ್ಪುಗಳು ಸತ್ಯವಾಗಿದ್ದು,ಅವೆಲ್ಲವೂ ನೀತಿಯುಳ್ಳದ್ದಾಗಿವೆ.
10ಅವು ಬಂಗಾರಕ್ಕಿಂತಲೂ,ಅಪರಂಜಿಗಿಂತಲೂ ಅಮೂಲ್ಯವಾಗಿವೆ;ಅವು ಜೇನಿಗಿಂತಲೂ,ಅಪ್ಪಟ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.
11ನಿಮ್ಮ ಸೇವಕನು ಅವುಗಳಿಂದ ಎಚ್ಚರಿಕೆ ಪಡೆಯುತ್ತಾನೆ;ಅವುಗಳನ್ನು ಕೈಗೊಳ್ಳುವುದರಲ್ಲಿ ದೊಡ್ಡ ಪ್ರತಿಫಲವುಂಟು.
12ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ?ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.
13ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು;ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ.ಆಗ ನಾನು ತಪ್ಪಿಲ್ಲದವನಾಗಿ,ಮಹಾಪರಾಧದಿಂದ ಬಿಡುಗಡೆಯಾಗಿರುವೆನು.
14ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ,ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ.