Skip to content
The Believer's Library

Biblica® Open Kannada Contemporary Version 2022

Psalms 20 OKCV

Side by side with the Father's Heart Bible™

ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ.

1ಯೆಹೋವ ದೇವರು ಇಕ್ಕಟ್ಟಿನಲ್ಲಿ ನಿಮಗೆ ಉತ್ತರವನ್ನು ನೀಡಲಿ;ಯಾಕೋಬನ ದೇವರ ಹೆಸರು ನಿಮ್ಮನ್ನು ಕಾಪಾಡಲಿ.

2ದೇವರು ಪರಿಶುದ್ಧ ಸ್ಥಳದೊಳಗಿಂದ ನಿಮಗೆ ಸಹಾಯ ಕಳುಹಿಸಲಿ;ಅವರು ಚೀಯೋನಿನಿಂದ ನಿಮಗೆ ಆಧಾರ ನೀಡಲಿ.

3ನಿಮ್ಮ ಯಜ್ಞಾರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿಕೊಂಡು,ನಿಮ್ಮ ದಹನಬಲಿಗಳನ್ನು ಸ್ವೀಕರಿಸಲಿ.

4ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ;ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.

5ನಾವು ದೇವರ ಜಯದಲ್ಲಿ ಆನಂದ ಘೋಷಮಾಡಿ,ನಮ್ಮ ದೇವರ ಹೆಸರಿನಲ್ಲಿಯೇ ನಾವು ನಮ್ಮ ಧ್ವಜಗಳನ್ನು ಎತ್ತುವೆವು.ಯೆಹೋವ ದೇವರು ನಿಮ್ಮ ಬಿನ್ನಹಗಳನ್ನೆಲ್ಲಾ ಪೂರೈಸಲಿ.

6ಈಗ ನಾನು ಇದನ್ನು ಬಲ್ಲೆನು:ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು.ತಮ್ಮ ಜಯದ ಬಲಗೈಯ ಶಕ್ತಿಯಿಂದಲೂತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು.

7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ;ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ.

8ಅವರು ಬಗ್ಗಿ ಬೀಳುತ್ತಾರೆ,ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.

9ಯೆಹೋವ ದೇವರೇ, ಅರಸನಿಗೆ ಜಯಕೊಡಿರಿ!ನಾವು ಕರೆಯುವಾಗ ನಮಗೆ ಉತ್ತರಕೊಡಿರಿ!

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]