Side by side with the Father's Heart Bible™ ದಾವೀದನ ಕೀರ್ತನೆ.
1ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ;ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.
2ಏಕೆಂದರೆ ಅವರು ಸಮುದ್ರಗಳ ಮೇಲೆ ಅದನ್ನು ಸ್ಥಾಪಿಸಿಪ್ರವಾಹಗಳ ಮೇಲೆ ಅದನ್ನು ಸ್ಥಿರಪಡಿಸಿದ್ದಾರೆ.
3ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು?ಅವರ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?
4ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು;ವಂಚನೆಯಿಂದ ಮುಕ್ತನಾಗಿ,ಮೋಸದಿಂದ ಆಣೆ ಇಡದೆಯೂ ಇರುವವನೇ.
5ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು.ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು.
6ಇಂಥವರೇ ದೇವರನ್ನು ಹುಡುಕುವ ಸಂತತಿಯು;ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ.
7ದ್ವಾರಗಳೇ ತಲೆ ಎತ್ತಿ ನೋಡಿರಿ,ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ;ಮಹಿಮೆಯ ಅರಸ ಒಳಗೆ ಬರಲಿದ್ದಾರೆ.
8ಈ ಮಹಿಮೆಯ ಅರಸ ಯಾರು?ಬಲವೂ ಪರಾಕ್ರಮವೂ ಉಳ್ಳ ಯೆಹೋವ ದೇವರೇ ಆಗಿರುತ್ತಾರೆ.ಯೆಹೋವ ದೇವರು ಯುದ್ಧದಲ್ಲಿ ಪರಾಕ್ರಮವುಳ್ಳವರು ಆಗಿರುತ್ತಾರೆ.
9ದ್ವಾರಗಳೇ, ತಲೆ ಎತ್ತಿ ನೋಡಿರಿ,ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ;ಮಹಿಮೆಯ ಅರಸ ಒಳಗೆ ಬರಲಿದ್ದಾರೆ.
10ಮಹಿಮೆಯ ಅರಸ ಯಾರು?ಸೇನಾಧೀಶ್ವರ ಯೆಹೋವ ದೇವರೇ ಆಗಿರುತ್ತಾರೆ.ಇವರೇ ಮಹಿಮೆಯ ಅರಸರು.