Skip to content
The Believer's Library

Biblica® Open Kannada Contemporary Version 2022

Psalms 28 OKCV

Side by side with the Father's Heart Bible™

ದಾವೀದನ ಕೀರ್ತನೆ.

1ಯೆಹೋವ ದೇವರೇ,ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ.ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ,ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.

2ನಾನು ನಿಮಗೆ ಮೊರೆಯಿಡುವಾಗ,ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧಸ್ಥಳದ ಕಡೆಗೆ ಎತ್ತುವಾಗನನ್ನ ವಿಜ್ಞಾಪನೆಯನ್ನು ಲಾಲಿಸಿರಿ.

3ದುಷ್ಟರ ಸಂಗಡವೂ ಅಪರಾಧ ಮಾಡುವವರಸಂಗಡವೂ ನನ್ನನ್ನು ಎಳೆಯಬೇಡಿರಿ;ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ;ಆದರೆ ಕೇಡು ಅವರ ಹೃದಯದಲ್ಲಿ ಇದೆ.

4ಅವರ ಕೃತ್ಯಗಳ ಪ್ರಕಾರವಾಗಿಯೂ,ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ;ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ,ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.

5ಅವರು ಯೆಹೋವ ದೇವರ ಕೃತ್ಯಗಳನ್ನೂ,ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ;ಆದ್ದರಿಂದ ದೇವರು ಅವರನ್ನುವೃದ್ಧಿಗೊಳಿಸದೆ ದಂಡಿಸುವರು.

6ಯೆಹೋವ ದೇವರಿಗೆ ಸ್ತುತಿಯುಂಟಾಗಲಿ;ಕರುಣೆಗಾಗಿ ನನ್ನ ಮೊರೆಯನ್ನು ಅವರು ಕೇಳಿದ್ದಾರೆ.

7ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ;ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು;ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು;ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.

8ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ;ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.

9ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ;ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]