Skip to content
The Believer's Library

Biblica® Open Kannada Contemporary Version 2022

Psalms 29 OKCV

Side by side with the Father's Heart Bible™

ದಾವೀದನ ಕೀರ್ತನೆ.

1ದೇವದೂತರೇ, ಬಲವು ಯೆಹೋವ ದೇವರದೇ,ಮಹಿಮೆ ಯೆಹೋವ ದೇವರದೇ ಎಂದು ಹೇಳಿ ಕೊಂಡಾಡಿರಿ.

2ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ;ಪರಿಶುದ್ಧತ್ವವೆಂಬ ವಸ್ತ್ರದೊಡನೆ ಯೆಹೋವ ದೇವರನ್ನು ಆರಾಧಿಸಿರಿ.

3ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ;ಮಹಿಮೆಯ ದೇವರು ಇದ್ದಾರೆ;ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ.

4ಯೆಹೋವ ದೇವರ ಧ್ವನಿಯು ಶಕ್ತಿಯುಳ್ಳದ್ದು;ಯೆಹೋವ ದೇವರ ಧ್ವನಿಯು ವೈಭವವುಳ್ಳದ್ದು.

5ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ;ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ.

6ಲೆಬನೋನ್ ಪರ್ವತವು ಕರುವಿನ ಹಾಗೆಯೂಸಿರ್ಯೋನ್ ಬೆಟ್ಟವು ಎಳೆಯ ಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾರೆ.

7ಯೆಹೋವ ದೇವರ ಧ್ವನಿಯುಸಿಡಿಲಿನ ಮಿಂಚಿನಂತೆ ಅಪ್ಪಳಿಸುತ್ತದೆ.

8ಯೆಹೋವ ದೇವರ ಶಬ್ದವು ಮರುಭೂಮಿಯನ್ನು ನಡುಗಿಸುತ್ತದೆ;ಯೆಹೋವ ದೇವರು ಕಾದೇಶ್ ಮರುಭೂಮಿಯನ್ನು ನಡುಗಿಸುತ್ತಾರೆ.

9ಯೆಹೋವ ದೇವರ ಧ್ವನಿಯು ಜಿಂಕೆಗಳು ಈಯುವಂತೆ ಮಾಡಿಅಡವಿಗಳನ್ನು ಬಯಲು ಮಾಡುತ್ತದೆ;ದೇವರ ಮಂದಿರದಲ್ಲಿ ಪ್ರತಿಯೊಬ್ಬರೂ “ಮಹಿಮೆ!” ಎಂದು ಘೋಷಿಸುತ್ತಾರೆ.

10ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ;ಯುಗಯುಗಕ್ಕೂ ಯೆಹೋವ ದೇವರು ಅರಸರಾಗಿ ಕುಳಿತುಕೊಂಡಿದ್ದಾರೆ.

11ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು;ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]