Skip to content
The Believer's Library

Biblica® Open Kannada Contemporary Version 2022

Psalms 30 OKCV

Side by side with the Father's Heart Bible™

ದೇವಾಲಯದ ಸಮರ್ಪಣೆಗಾಗಿ ದಾವೀದನು ಸಂಯೋಜಿಸಿದ ಹಾಡು. ದಾವೀದನ ಕೀರ್ತನೆ.

1ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು;ನೀವು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿದ್ದೀರಿ.ನನ್ನನ್ನು ಮೇಲಕ್ಕೆ ಎತ್ತಿದ್ದೀರಿ.

2ನನ್ನ ದೇವರಾದ ಯೆಹೋವ ದೇವರೇ, ಸಹಾಯಕ್ಕಾಗಿ ನಿಮಗೆ ಮೊರೆಯಿಡಲು,ನನ್ನನ್ನು ಸ್ವಸ್ಥಮಾಡಿದ್ದೀರಿ.

3ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ;ನಾನು ಸಮಾಧಿ ಸೇರದ ಹಾಗೆ ನನ್ನನ್ನು ಬದುಕಿಸಿದ್ದೀರಿ.

4ಯೆಹೋವ ದೇವರ ವಿಶ್ವಾಸಿಗಳೇ ಅವರನ್ನು ಕೊಂಡಾಡಿರಿ;ಅವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.

5ಅವರ ಕೋಪವು ಕ್ಷಣಮಾತ್ರವೇ;ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ;ರಾತ್ರಿಯಲ್ಲಿ ದುಃಖ ಬಂದಿದ್ದರೂ;ಬೆಳಿಗ್ಗೆ ಆನಂದವು ಬರುವುದು.

6ನಾನು ಸುರಕ್ಷಿತನಾಗಿದ್ದಾಗ,“ನಾನೆಂದೂ ಕದಲುವುದಿಲ್ಲ,” ಎಂದು ಹೇಳಿಕೊಂಡೆನು.

7ಯೆಹೋವ ದೇವರೇ, ನಿಮ್ಮ ದಯೆಯಿಂದನನ್ನ ರಾಜ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀರಿಆದರೆ ನೀವು ನಿಮ್ಮ ಮುಖವನ್ನು ಮರೆಮಾಡಲುನಾನು ಕಳವಳಗೊಂಡೆನು.

8ಯೆಹೋವ ದೇವರೇ, ನಾನು ನಿಮಗೆ ಮೊರೆಯಿಟ್ಟೆನು;ಕರುಣೆಗಾಗಿ ಯೆಹೋವ ಕರ್ತ ಆಗಿರುವವರಿಗೆ ಬಿನ್ನವಿಸಿದೆನು.

9ನಾನು ಸಮಾಧಿಯಲ್ಲಿ ಇಳಿದು ಹೋಗಿ ನಾಶವಾದರೆ,ಅದರಿಂದ ನಿಮಗೆ ಆಗುವ ಲಾಭವೇನು?ಧೂಳು ನಿಮ್ಮನ್ನು ಸ್ತುತಿಸುವುದೋ?ಅದು ನಿಮ್ಮ ನಂಬಿಗಸ್ತಿಕೆಯನ್ನು ಪ್ರಕಟಿಸುವುದೋ?

10ಯೆಹೋವ ದೇವರೇ, ಲಾಲಿಸು; ನನ್ನನ್ನು ಕರುಣಿಸಿರಿ;ಯೆಹೋವ ದೇವರೇ, ನನಗೆ ಸಹಾಯಕರಾಗಿರಿ.

11ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ;ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ.

12ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು.ನನ್ನ ದೇವರಾದ ಯೆಹೋವ ದೇವರೇ, ನಾನು ನಿಮ್ಮನ್ನು ಸದಾಕಾಲವೂ ಸ್ತುತಿಸುವೆನು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]