Side by side with the Father's Heart Bible™ ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಗಿತ್ತೀ ರಾಗದಲ್ಲಿ ಹಾಡತಕ್ಕದ್ದು. ದಾವೀದನ ಕೀರ್ತನೆ.
1ನಮ್ಮ ಕರ್ತ ಆಗಿರುವ ಯೆಹೋವ ದೇವರೇ,ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ವೈಭವವುಳ್ಳದ್ದಾಗಿದೆ!ನೀವು ನಿಮ್ಮ ಮಹಿಮೆಯನ್ನುಆಕಾಶಗಳಲ್ಲಿ ಸ್ಥಾಪಿಸಿದ್ದೀರಿ.
2ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ,ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.
3ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂನಾನು ನೋಡಿದಾಗ,
4ನೀವು ಮಾನವರನ್ನು ನೆನಸಲು ಅವರು ಎಷ್ಟರವರು?ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು?
5ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ,ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.
6ನೀವು ನಿಮ್ಮ ಕೈಕೃತಿಗಳ ಮೇಲೆ ಅವನನ್ನು ಅಧಿಕಾರಿಯನ್ನಾಗಿ ಮಾಡಿ,ಸಮಸ್ತವನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ:
7ಎಲ್ಲಾ ಕುರಿದನಗಳನ್ನೂಅಡವಿಯ ಮೃಗಗಳನ್ನೂ
8ಆಕಾಶದ ಪಕ್ಷಿಗಳನ್ನೂಸಮುದ್ರದ ಮೀನುಗಳನ್ನೂ ಸಮುದ್ರದ ಹಾದಿಗಳಲ್ಲಿ ಸಂಚರಿಸುವ ಎಲ್ಲ ವಿಧವಾದ ಜೀವಜಂತುಗಳನ್ನೂಅವನ ಪಾದಗಳ ಕೆಳಗೆ ಹಾಕಿದ್ದೀರಿ.
9ನಮ್ಮ ಕರ್ತ ಆಗಿರುವ ಯೆಹೋವ ದೇವರೇ,ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದಾಗಿದೆ!